ಅಮಾನುಷ ಕೃತ್ಯ | ದಲಿತ ಬಾಲಕಿಯ ಅಪಹರಣ, ನಿರಂತರ ಸಾಮೂಹಿಕ ಅತ್ಯಾಚಾರ

Date:

14 ವರ್ಷದ ದಲಿತ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಿಸಿ, ಚಿತ್ರಹಿಂಸೆ ನೀಡಿ, ಪದೇ-ಪದೇ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ.

- Advertisement -

ಅತ್ಯಾಚಾರಗಳ ರಾಜಧಾನಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶ ಮತ್ತೊಂದು ಅಮಾನುಷ ಅತ್ಯಾಚಾರ ಕೃತ್ಯಕ್ಕೆ ಸಾಕ್ಷಿಯಾಗಿದೆ. ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ದುಷ್ಕರ್ಮಿಗಳಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಸಂತ್ರಸ್ತ ಬಾಲಕಿಯ ಪೋಷಕರು ಭಗತ್‌ಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, “2025ರ ಜನವರಿ 2ರಂದು ಬಾಲಕಿ ತನ್ನ ಬಟ್ಟೆ ಹೊಲಿಸಲು ಟೈಲರ್‌ ಅಂಗಡಿ ಹೋಗುತ್ತಿದ್ದಾಗ, ಆಕೆಯನ್ನು ಆರೋಪಿಯೊಬ್ಬ ಕಾರಿನಲ್ಲಿ ಅಪಹರಿಸಿದ್ದಾನೆ. ಮಾದಕ ವಸ್ತು ಬಳಸಿ ಆಕೆಯ ಪ್ರಜ್ಞೆ ತಪ್ಪಿಸಿದ್ದಾನೆ. ಬಳಿಕ, ಭೋಜ್‌ಪುರ ಪ್ರದೇಶಕ್ಕೆ ಕರೆದೊಯ್ದು ಕೋಣೆಯೊಂದರಲ್ಲಿ ಕೂಡಿಹಾಕಿದ್ದಾನೆ. ಹಲವು ದಿನಗಳ ಕಾಲ ಆರೋಪಿಗಳು ಆಕೆಯ ಮೇಲೆ ಪದೇ-ಪದೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯ ಕೈಯನ್ನು ಆಸಿಡ್‌ನಿಂದ ಸುಡಲಾಗಿದೆ” ಎಂದು ವಿವರಿಸಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕುಟುಂಬಸ್ಥರನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ತಿಳಿಸಿದ್ದಾರೆ.

ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು. ಪ್ರತಿಯೊಬ್ಬರೂ ಸಮಾನತೆ ಮತ್ತು ಭದ್ರತೆಯಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ. ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಮಧ್ಯಪ್ರದೇಶ | ಭೀಕರ ಅಪಘಾತ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ, 14 ಮಂದಿ ಸಾವು

ಭಕ್ತರ ಮೇಲೆ ಲಾರಿ ಹರಿದು 14ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿ, 28ಕ್ಕೂ...