ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ದುರುಳರು: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂತ್ರಸ್ತ ಕುಟುಂಬ

Date:

ಸುಮಾರು 35 ವರ್ಷದ ದಲಿತ ವ್ಯಕ್ತಿಯನ್ನು ನೆರೆಹೊರೆಯವರು ಥಳಿಸಿ ಕೊಂದ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬಳಿಕ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮೃತ ವ್ಯಕ್ತಿಯ ಸಂಬಂಧಿಕರು ಆರೋಪಿಗಳಲ್ಲಿ ಒಬ್ಬನ ಮನೆಗೆ ಬೆಂಕಿ ಹಚ್ಚಿದ್ದಾರೆ.

- Advertisement -

ಜಿಲ್ಲಾ ಕೇಂದ್ರದಿಂದ ಸುಮಾರು 65 ಕಿ.ಮೀ ದೂರದಲ್ಲಿರುವ ದಬೋಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ರುದ್ರ ಪ್ರತಾಪ್ ಸಿಂಗ್ ಜಾತವ್ ಎಂಬ ದಲಿತ ವ್ಯಕ್ತಿಯನ್ನು ನೆರೆಹೊರೆಯ ಕೌರವ ಕುಟುಂಬದ ಐವರು ಕೋಲುಗಳಿಂದ ಹಲ್ಲೆ ನಡೆಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ದಲಿತ ಯುವಕನ ಕೊಲೆ

ಇನ್ನು ರುದ್ರ ಮೇಲೆ ದಾಳಿ ನಡೆಸುತ್ತಿದ್ದಾಗ ಮಧ್ಯಪ್ರವೇಶಿಸಲು ಪ್ರಯತ್ನಿಸಿದ ವೃದ್ಧರೊಬ್ಬರು ಕೂಡ ಗಾಯಗೊಂಡಿದ್ದಾರೆ. ಜಾತವ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಿತಿ ಗಂಭೀರವಾಗಿದ್ದ ಕಾರಣ ಗ್ವಾಲಿಯರ್‌ಗೆ ಕರೆದೊಯ್ಯಲಾಯಿತು. ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ದಬೋಹ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ರಾಜೇಶ್ ಶರ್ಮಾ ಹೇಳಿದ್ದಾರೆ.

ಜಾತವ್ ಅವರ ಸಾವಿನ ಸುದ್ದಿ ತಿಳಿದಾಗ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಅವರ ಸಂಬಂಧಿಕರು ಮತ್ತು ಇತರ ಗ್ರಾಮಸ್ಥರು ಆರೋಪಿಗಳಲ್ಲಿ ಒಬ್ಬರಿಗೆ ಸೇರಿದ ಮನೆಯನ್ನು ಧ್ವಂಸ ಮಾಡಿ ಹೊರಗೆ ನಿಲ್ಲಿಸಿದ್ದ ಕಾರು ಮತ್ತು ಮೋಟಾರ್‌ಸೈಕಲ್‌ಗೆ ಬೆಂಕಿ ಹಚ್ಚಿದ್ದಾರೆ. ಭಿಂದ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಸಿತ್ ಯಾದವ್ ಮತ್ತು ಸಂಜೀವ್ ಪಾಠಕ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.

“ಆರೋಪಿಗಳಾದ ರಣವೀರ್ ಕೌರವ್, ಆಶು ಕೌರವ್, ಪ್ರಹ್ಲಾದ್ ಕೌರವ್, ರಾಜೀವ್ ಕೌರವ್ ಮತ್ತು ಕುನ್ವರ್ ಸಿಂಗ್ ಕೌರವ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಶಾಂತಿ ಕಾಪಾಡಲು ಗ್ರಾಮದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ” ಎಂದು ಎಸ್‌ಪಿ ಯಾದವ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...