ಉತ್ತರ ಪ್ರದೇಶ : ನಲ್ಲಿ ನೀರು ಕುಡಿದಿದ್ದಕ್ಕೆ ದಲಿತ ಯುವಕನ ಹತ್ಯೆ

Date:

ಸಾರ್ವಜನಿಕ ನಲ್ಲಿ ನೀರು ಕುಡಿದ ಕಾರಣಕ್ಕಾಗಿ ದಲಿತ ಸಮುದಾಯದ ಯುವಕನೊಬ್ಬನನ್ನು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬದೌನ್‌ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಮೃತರನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಬದೌನ್ ಜಿಲ್ಲೆಯ ಉಸಾಹತ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾತ್ರಾ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ನ.23ರಂದು ನಲ್ಲಿಯಿಂದ ನೀರು ಕುಡಿದಿದ್ದಕ್ಕಾಗಿ ಸೂರಜ್ ರಾಥೋಡ್ ಮತ್ತು ಆತನ ಸಹಚರರು ಕಮಲೇಶ್ ಅವರಿಗೆ ಬಡಿಗೆಗಳಿಂದ ಥಳಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಕಮಲೇಶ್‌ನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನ.24 ರಂದು ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕಿಶೋರ್ ಶ್ರೀವಾಸ್ತವ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗುಜರಾತ್‌ನಲ್ಲಿ ಪ್ರಕರಣ ಹಿಂಪಡೆಯದ ದಲಿತ ಮಹಿಳೆಯ ಹತ್ಯೆ; ಮಧ್ಯ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ

ಮೃತನ ತಂದೆ ಜಗದೀಶ್ ಅವರು ನೀಡಿದ ದೂರಿನಂತೆ ಆರೋಪಿ ಸೂರಜ್ ರಾಥೋಡ್‌ನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ

ಕೆಲದಿನಗಳ ಹಿಂದೆಯಷ್ಟೇ ಉತ್ತರಪ್ರದೇಶದ ಮೀರತ್‌ನಲ್ಲಿ 12ನೇ ತರಗತಿ ವಿದ್ಯಾರ್ಥಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ನವೆಂಬರ್‌ ತಿಂಗಳ ಆರಂಭದಲ್ಲಿ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆ ನಡೆದಿತ್ತು. ಯುವಕನನ್ನು 6 ಮಂದಿ ಆರೋಪಿಗಳು 4 ಗಂಟೆಗಳ ಕಾಲ ಥಳಿಸಿದ್ದು, ನೀರು ಕೇಳಿದಾಗ ಆತನ ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...