ರಾಜಸ್ಥಾನ : ವಿದ್ಯುತ್ ತಂತಿ ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

Date:

ವಿದ್ಯುತ್ ತಂತಿ ಕಳ್ಳತನದ ಆರೋಪದ ಮೇಲೆ ವಿದ್ಯುತ್ ಇಲಾಖೆಯ ಭದ್ರತಾ ಸಿಬ್ಬಂದಿ ದಲಿತ ಯುವಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ರತುಸಾರ್ ಗ್ರಾಮವೊಂದರಲ್ಲಿ ನಡೆದಿದೆ.

- Advertisement -

ರತುಸಾರ್ ಗ್ರಾಮದವರಾದ ಕನ್ನಯ್ಯಲಾಲ್ ಮೇಘಾವಾಲ್ ಹತ್ಯೆಯಾದ ದಲಿತ ಸಮುದಾಯದ ಯುವಕ. ಕನ್ನಯ್ಯಲಾಲ್ ಮೇಘಾವಾಲ್ ಹಾಗೂ ಗಂಗಾರಾಮ್ ಮೇಘಾವಾಲ್ ಎಂಬುವವರು 400ಕೆವಿ ಹೈಟೆನ್ಷನ್ ಸಾಮರ್ಥ್ಯದ ವಿದ್ಯುತ್ ತಂತಿಯನ್ನು ಕಳವು ಮಾಡಿದ್ದಾರೆ ಎಂಬ ಶಂಕೆಯ ಮೇಲೆ ವಿದ್ಯುತ್ ಇಲಾಖೆಯ ನಾಲ್ವರು ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಕನ್ನಯ್ಯಲಾಲ್ ಮೇಘಾವಾಲ್ ಸ್ಥಳೀಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಗಂಗಾರಾಮ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸುಮಿತ್ ಶರ್ಮಾ, ಗೋವಿಂದ್ ಶರ್ಮಾ, ಭಾರತ್ ಸಿಂಗ್ ಹಾಗೂ ಸಂಜಯ್ ಯಾದವ್‌ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಕನ್ನಯ್ಯಲಾಲ್ ಮೇಘಾವಾಲ್ ಮೃತದೇಹವನ್ನು ಸ್ವೀಕರಿಸಲು ಕುಟುಂಬಸ್ಥರು ನಿರಾಕರಿಸಿದ್ದು, ಆರೋಪಿಗಳ ಶೀಘ್ರ ಬಂಧನದ ಜೊತೆ ಕುಟುಂಬಸ್ಥರಿಗೆ ಒಂದು ಕೋಟಿ ರೂ. ಪರಿಹಾರ ಹಾಗೂ ಸರ್ಕಾರಿ ನೌಕರಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ. ಮೃತ ಕನ್ನಯ್ಯಲಾಲ್ ಮೇಘಾವಾಲ್ ಅವರ ಪುತ್ರ, ಸ್ಥಳೀಯ ಶಾಸಕ ಅವರ ನೇತೃತ್ವದಲ್ಲಿ ನೂರಾರು ಮಂದಿ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...