ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮಕ್ಕಳನ್ನು ಮನೆಯಲ್ಲೇ ಇರಿಸಿದ ಪೋಷಕರು

Date:

ಅಂಗನವಾಡಿ ಕೇಂದ್ರ ಸಹಾಯಕಿ ಮತ್ತು ಅಡುಗೆ ಸಿಬ್ಬಂದಿ ಹುದ್ದೆಗೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕಾಗಿ ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುವುದನ್ನೇ ನಿಲ್ಲಿಸಿರುವ ಘಟನೆ ಒಡಿಶಾದ ಕೇಂದ್ರಪಾದ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿನಿಂದ ಮಕ್ಕಳ ಹಾಜರಾತಿಯೇ ಇಲ್ಲದೆ ಅಂಗನವಾಡಿ ಖಾಲಿ ಉಳಿದಿದೆ.

- Advertisement -

ನುವಗಾಂವ್ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ನವೆಂಬರ್ 20ರಂದು ದಲಿತ ಸಮುದಾಯದ ಸರ್ಮಿಸ್ತಾ ಸೇಥಿ ಅವರನ್ನು ಸಹಾಯಕಿಯಾಗಿ ನೇಮಿಸಲಾಗಿತ್ತು. ಇದರಿಂದಾಗಿ ಗ್ರಾಮಸ್ಥರು ತಮ್ಮ ಮಕ್ಕಳನ್ನು ಅಂಗನವಾಡಿಯಿಂದ ದೂರವಿಟ್ಟಿದ್ದಾರೆ. ಅಲ್ಲದೆ, ಅಂಗನವಾಡಿಯಲ್ಲಿ ಮಕ್ಕಳಿಗೆ ನೀಡಲಾಗುತ್ತಿದ್ದ ಪಡಿತರವನ್ನು ಮನೆಗೆ ಕೊಂಡೊಯ್ಯಲಾರಂಭಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸರ್ಮಿಸ್ತಾ ಅವರ ನೇಮಕವನ್ನು ಗ್ರಾಮದ ಅನೇಕರು ವಿರೋಧಿಸಿದ್ದಾರೆ. ಕಳೆದ ಆರು ತಿಂಗಳಲ್ಲಿ ಅಂಗನವಾಡಿಗೆ 42 ಮಕ್ಕಳು ದಾಖಲಾಗಿದ್ದಾರೆ. ಆದರೆ, ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಿಲ್ಲ. ಬದಲಾಗಿ, ಮಕ್ಕಳಿಗೆ ನೀಡಲಾಗುವ ಆಹಾರವನ್ನು ನಮ್ಮಿಂದ ಪಡೆದುಕೊಂಡು ಮನೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆ ಲಿಜರಾಣಿ ಪಾಂಡವ್ ತಿಳಿಸಿದ್ದಾರೆ.

ಪೋಷಕರನ್ನು ಮನವೊಲಿಸಲು ಪ್ರಯತ್ನಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಅಂತಿಮವಾಗಿ, ನಾವು ಉನ್ನತ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದೇವೆ. ತಾಲೂಕು ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ. ಕೆಲವು ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಒಪ್ಪಿಕೊಂಡಿದ್ದರೂ, ಹಲವರು ನಿರ್ಧಾರ ತೆಗೆದುಕೊಳ್ಳಲು ಸಮಯ ಕೇಳಿದ್ದಾರೆ ಎಂದು ವಿವರಿಸಿದ್ದಾರೆ.

ಜಿಲ್ಲಾಧಿಕಾರಿ ರಘುರಾಮ್ ಅಯ್ಯರ್ ಅವರು ಅಧಿಕಾರಿಗಳಿಂದ ವರದಿ ಕೇಳಿದ್ದು, ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...