ದಲಿತ ಮಹಿಳೆಗೆ ಕಾರಿನಿಂದ ಹಲವು ಬಾರಿ ಡಿಕ್ಕಿ ಹೊಡೆದು ಹತ್ಯೆ; ಪ್ರಕರಣ ದಾಖಲು

Date:

ಪ್ರಬಲ ಜಾತಿಗೆ ಪುರಷರ ಗುಂಪೊಂದು 62 ವರ್ಷದ ದಲಿತ ಮಹಿಳೆಗೆ ಕಾರಿನಲ್ಲಿ ಹಲವು ಬಾರಿ ಡಿಕ್ಕಿ ಹೊಡೆದು ಕೊಂದಿರುವ ಅಮಾನುಷ, ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಘಟನೆಯಲ್ಲಿ, ಇತರ ಐದು ಮಂದಿ ದಲಿತರು ಗಾಯಗೊಂಡಿದ್ದಾರೆ.

- Advertisement -

ಇತ್ತೀಚೆಗೆ, ಆರೋಪಿಗಳ ಗುಂಪು ಅತಿವೇಗವಾಗಿ ವಾಹನ ಚಾಲನೆ ಮಾಡಿದ್ದನ್ನು ದಲಿತರು ಪ್ರಶ್ನಿಸಿದ್ದರು. ಆ ಘಟನೆಯ ಬಳಿಕ ಮಹಿಳೆ ಮತ್ತು ಇತರರ ಮೇಲೆ ದಾಳಿ ಮಾಡಲಾಗಿದೆ. ದಲಿತರಿಗೆ ಜಾತಿ ನಿಂದನೆ ಮಾಡಿರುವ ಆರೋಪಿಗಳು, ಬಳಿಕ ತಮ್ಮ ಕಾರಿನಲ್ಲಿ ಹಲವು ಬಾರಿ ಮಹಿಳೆಗೆ ಡಿಕ್ಕಿ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಘಟನೆಯು ಬುಲಂದ್‌ಶಹರ್‌ ಪ್ರದೇಶದ ಸುನೆಹ್ರಾ ಗ್ರಾಮದಲ್ಲಿ ನಡೆದಿದೆ. ವಿಕೃತ ದಾಳಿಯಲ್ಲಿ ಶೀಲಾ ದೇವಿ ಅವರು ಸಾವನ್ನಪಿದ್ದಾರೆ.

ಶೀಲಾ ದೇವಿ ಅವರು ತಮ್ಮ ಮನೆಯ ಹೊರಗೆ ಕುಳಿತಿದ್ದಾಗ, ಅದೇ ಗ್ರಾಮದ ಪ್ರಬಲ ಜಾತಿಯ ತಪೇಶ್‌ ಸಿಂಗ್ ಮತ್ತು ಅವರ ಮಗ ಪ್ರಿಯಾಂಶು ಸಿಂಗ್ ಹಾಗೂ ಇತರರು ವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿದ್ದಾರೆ. ಕಾರಿನ ವೇಗವನ್ನು ಕಡಿಮೆ ಮಾಡುವಂತೆ ದಲಿತ ಮುಖಂಡ ಭೂಪೇಂದ್ರ ಕೂಗಿದ್ದಾರೆ. ಇದರಿಂದ, ಕುಪಿತಗೊಂಡ ಆರೋಪಿಗಳು ಕಾರಿನಿಂದ ಹೊರ ಬಂದು ಭೂಪೇಂದ್ರ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ಈ ವರದಿ ಓದಿದ್ದೀರಾ?: ಹತ್ಯೆಗೆ ಮುನ್ನ ಹೆಸರು ಕೇಳಿದ್ದೇಕೆ? ಪ್ರವಾಸಿಗರನ್ನೇ ಕೊಂದ ಮರ್ಮವೇನು

ಘಟನೆಯ ಬಳಿಕ, ಆರೋಪಿಗಳು ಶೀಲಾ ದೇವಿ ಅವರೊಂದಿಗೆ ಕುಳಿತಿದ್ದ ದಲಿತರ ಗುಂಪಿನ ಮೇಲೆ ಕಾರು ಚಲಾಯಿಸಿದ್ದಾರೆ. ಹಲವು ಬಾರಿ ಕಾರನ್ನು ಹಿಂದಕ್ಕೂ-ಮುಂದಕ್ಕೂ ಚಲಾಯಿಸಿ, ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ, ಶೀಲಾ ದೇವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ ಐದು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

“ತಪೇಶ್ ಕುಮಾರ್, ಪ್ರಿಯಾಂಶು ಸಿಂಗ್, ವರುಣ್ ಕುಮಾರ್, ಅತುಲ್ ಸಿಂಗ್, ಕೃಷ್ಣ ಸಿಂಗ್ ಮತ್ತು ಮಾನವ್ ಕುಮಾರ್ ಎಂಬ ಆರು ಪುರುಷರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅವರ ವಿರುದ್ಧ ಕೊಲೆ, ಕೊಲೆ ಯತ್ನ, ಕ್ರಿಮಿನಲ್ ಬೆದರಿಕೆ, ಗಲಭೆ ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಗಾಗಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ” ಎಂದು ಬುಲಂದ್‌ಶಹರ್‌ ನಗರ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...