ಬಿಹಾರ | ದಲಿತ ಮಹಿಳೆಯನ್ನು ನಗ್ನಗೊಳಿಸಿ ಆಕೆಯ ಮೇಲೆ ಮೂತ್ರ ವಿಸರ್ಜಿಸಿದ ಲೇವಾದೇವಿಗಾರ

Date:

Advertisements

ಸಾಲದ ಸಂಪೂರ್ಣ ಮರುಪಾವತಿಯ ನಂತರವೂ ಹೆಚ್ಚಿನ ಹಣಕ್ಕಾಗಿ “ನ್ಯಾಯಹೀನ” ಬೇಡಿಕೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಕ್ಕಾಗಿ ದಲಿತ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಲ್ಲದೆ ಆಕೆಯ ಬಾಯಿಗೆ ಮೂತ್ರ ವಿಸರ್ಜಿಸಿದ ಅಮಾನವೀಯ ಘಟನೆ ಬಿಹಾರದ ಪಾಟ್ನಾ ಜಿಲ್ಲೆಯ ಖುಸ್ರುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಪುತ್ರ ಅಂಶು ಸಿಂಗ್ ತಲೆಮರೆಸಿಕೊಂಡಿದ್ದು, ಇವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಸಂತ್ರಸ್ತೆ, ಸಾಲದ ಹಣವನ್ನು ಬಡ್ಡಿ ಸಮೇತ ಪಾವತಿಸಿದರೂ ಈ ಹಿಂಸೆಯನ್ನು ಅನುಭವಿಸಬೇಕಾಯಿತು ಎಂದು ದೂರಿದ್ದಾರೆ.

Advertisements

“ನನ್ನ ಪತಿ ಕೆಲವು ತಿಂಗಳ ಹಿಂದೆ ಪ್ರಮೋದ್ ಸಿಂಗ್ ಅವರಿಂದ 1,500 ರೂ.ಗಳನ್ನು ಸಾಲವಾಗಿ ಪಡೆದಿದ್ದರು ಮತ್ತು ಹಣವನ್ನು ಬಡ್ಡಿಯೊಂದಿಗೆ ಹಿಂದಿರುಗಿಸಿದ್ದರು. ಆದರೆ, ಅವರು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದರು. ನಾವು ಪ್ರಮೋದ್ ಸಿಂಗ್ ಬೇಡಿಕೆಯನ್ನು ತಿರಸ್ಕರಿಸಿದ್ದಕ್ಕೆ ಈ ರೀತಿ ಮಾಡಲಾಗಿದೆ” ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾವೇರಿ ನೀರು ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಮಾಜಿ ಪ್ರಧಾನಿ ದೇವೇಗೌಡ ಪತ್ರ

ಸಂತ್ರಸ್ತೆಗೆ ಹೆಚ್ಚಿನ ಹಣ ನೀಡದಿದ್ದರೆ ಗ್ರಾಮದಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತೇವೆ ಎಂದು ಪ್ರಮೋದ್ ಸಿಂಗ್ ಫೋನ್ ಮೂಲಕ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ತನ್ನ ಮೊಬೈಲ್‌ನಲ್ಲಿ ಪೊಲೀಸರಿಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ.

ಸಂತ್ರಸ್ತೆಯ ಕುಟುಂಬದ ಸದಸ್ಯರೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ, ”ದೂರಿನ ಬಗ್ಗೆ ವಿಚಾರಣೆ ನಡೆಸಲು ಪೊಲೀಸ್ ತಂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿದ್ದು, ಇದರಿಂದ ಕೋಪಗೊಂಡ ಪ್ರಮೋದ್ ಮತ್ತು ಆತನ ಸಹಚರರು ಶನಿವಾರ ರಾತ್ರಿ 10 ಗಂಟೆಗೆ ಸಂತ್ರಸ್ತೆಯ ಮನೆಗೆ ಹೋಗಿ ಆಕೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ. ಪ್ರಮೋದ್ ಅವರ ಪುತ್ರ ಮೂತ್ರ ವಿಸರ್ಜಿಸಿದ್ದಾನೆ” ಎಂದು ತಿಳಿಸಿದ್ದಾರೆ.

“ದಲಿತ ಸಮುದಾಯದ ಮಹಿಳೆಯ ಮೇಲೆ ಅಮಾನುಷ ಕೃತ್ಯವೆಸಗಿದ ಆರೋಪಿಗಳ ಪತ್ತೆಗಾಗಿ ನಾವು ಐದು ಪೊಲೀಸ್ ತಂಡಗಳನ್ನು ರಚಿಸಿದ್ದೇವೆ ಮತ್ತು ಹುಡುಕಾಟ ನಡೆಸುತ್ತಿದ್ದೇವೆ. ಈ ಬಗ್ಗೆ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪಾಟ್ನಾದ ಹಿರಿಯ ಪೊಲೀಸ್ ಅಧೀಕ್ಷಕ ರಾಜೀವ್ ಮಿಶ್ರಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X