ಉತ್ತರ ಪ್ರದೇಶ: ‘ಬುದ್ಧ ಕಥಾ’ ಕಾರ್ಯಕ್ರಮದಲ್ಲಿ ಮೇಲ್ಜಾತಿಯವರಿಂದ ದಲಿತರ ಮೇಲೆ ಗುಂಡಿನ ದಾಳಿ

Date:

ಉತ್ತರ ಪ್ರದೇಶ ಕಾನ್ಪುರದ ಪಹೇವಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಬುದ್ಧ ಕಥಾ’ ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ಜನರ ಮೇಲೆ ಕೆಲವು ಮೇಲ್ಜಾತಿ ಸಮುದಾಯದವರು ಹಲ್ಲೆ ಜೊತೆಗೆ ಗುಂಡಿನ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

- Advertisement -

ದಲಿತ ಸಮುದಾಯದ ಸದಸ್ಯರ ಮೇಲೆ ಹಲ್ಲೆ ನಡೆಸಿದ ನಂತರ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಂಗಳವಾರ(ಡಿ.19) ಎಂಟು ಜನರ ವಿರುದ್ಧ ಹಲವು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬುದ್ಧ ಕಥಾ ಕಾರ್ಯಕ್ರಮದ ಸ್ಥಳದಲ್ಲಿ ಮಲಗಿದ್ದ ದಲಿತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ಆರೋಪಿಗಳು ಸಂತ ರವಿದಾಸ್ ಅವರ ಪ್ರತಿಮೆಯನ್ನೂ ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿ ರಾಮ್ ಸಾಗರ್ ಎಂಬುವರು ಸಾಧ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, “ಡಿಸೆಂಬರ್ 19 ರಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಕೆಲವು ಸಮಾಜ ವಿರೋಧಿಗಳು ಸಮುದಾಯದಲ್ಲಿ ಮಲಗಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಅವರು ರೈಫಲ್ ಬಳಸಿ ಗುಂಡು ಹಾರಿಸಿದರು. ಘಟನೆಯಲ್ಲಿ ಪಿಂಟು, ನಿತಿನ್, ಪಂಕಜ್ ಎಂಬುವವರು ಗಾಯಗೊಂಡರು. ಅಪರಾಧಿಗಳು ಸಂತ ರವಿದಾಸ್ ಪ್ರತಿಮೆಯನ್ನು ಧ್ವಂಸಗೊಳಿಸಿದರು” ಎಂದು ತಿಳಿಸಿದ್ದಾರೆ.

ಠಾಣೆಯಲ್ಲಿ ಗಲಭೆ, ಹಲ್ಲೆ, ಪೂಜಾ ಸ್ಥಳ ಅಥವಾ ಪವಿತ್ರ ವಸ್ತುವನ್ನು ಅಪವಿತ್ರಗೊಳಿಸುವುದು, ಧಾರ್ಮಿಕ ಭಾವನೆಗಳನ್ನು ಕೆರಳಿಸುವುದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಯುಗದ ಜನತಂತ್ರ- ಆಡುವುದು ಒಂದು, ಮಾಡುವುದು ಇನ್ನೊಂದು

ಆರೋಪಿಗಳನ್ನು ಚಂದ್ರಭಾನ್ ಮಿಶ್ರಾ, ಗೋಲು ಮಿಶ್ರಾ, ಶಿವಂ ಮಿಶ್ರಾ, ಜೀತು ಮಿಶ್ರಾ, ಅರುಣ್ ಕೋಟೇದಾರ್, ಕಿನ್ನರ್ ಮಿಶ್ರಾ, ವಿಷಂಭರ್ ಮಿಶ್ರಾ ಮತ್ತು ಮನೀಶ್ ತಿವಾರಿ ಎಂದು ಪೊಲೀಸರು ಗುರುತಿಸಿದ್ದಾರೆ.

ಗ್ರಾಮದಲ್ಲಿ ಸ್ಥಳೀಯ ನಿವಾಸಿಗಳಿಂದ ಒಂಬತ್ತು ದಿನಗಳ ಬುದ್ಧ ಕಥಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಸೋಮವಾರ ನಾಲ್ಕನೇ ದಿನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೂರಿನ ಪ್ರಕಾರ, ಮೇಲ್ಜಾತಿ ಸಮುದಾಯದ 15-20 ಜನರು ಕಾರ್ಯಕ್ರಮದ ಸ್ಥಳದಲ್ಲಿ ಜನರ ಮೇಲೆ ಹಲ್ಲೆ ನಡೆಸಿದ್ದಾರೆ. ರಾಡ್ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ ನಾಲ್ಕು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬುದ್ಧ ಕಥಾ ಕಾರ್ಯಕ್ರಮವನ್ನು ಆಯೋಜಿಸದಂತೆ ಮೇಲ್ಜಾತಿ ಸಮುದಾಯದವರು ದಲಿತರ ಮೇಲೆ ಈ ಹಿಂದೆ ಒತ್ತಡ ಹೇರಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಸಂತ ರವಿದಾಸ್ ಅವರ ಪ್ರತಿಮೆಯನ್ನೂ ಧ್ವಂಸಗೊಳಿಸಲಾಗಿದೆ. ಅವರು ಹಣ, ಕೆಲವು ಎಲೆಕ್ಟ್ರಾನಿಕ್ ವಸ್ತುಗಳು, ನಗದು ಮತ್ತು ಸಂವಿಧಾನದ ಪ್ರತಿಯನ್ನು ಸಹ ಕದ್ದಿದ್ದಾರೆ” ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ.

ಕಾನ್ಪುರದ ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಅವರು ಮಂಗಳವಾರ ಮಾತನಾಡಿ, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ. ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಲು ಹಿರಿಯ ಅಧಿಕಾರಿಗಳು ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಧ್ವಂಸಗೊಂಡ ಪ್ರತಿಮೆಯ ಜಾಗದಲ್ಲಿ ನಾವು ಹೊಸ ಪ್ರತಿಮೆಯನ್ನು ಸ್ಥಾಪಿಸಿದ್ದೇವೆ. ನಾನು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...