ದಲಿತರು ಬೀದಿಗಿಳಿಯಬೇಡಿ, ಕಾನೂನು ಹೋರಾಟ ನಡೆಸಿ: ಮಾಯಾವತಿ

Date:

ದಲಿತರು ಮತ್ತು ಇತರ ಅಂಚಿನಲ್ಲಿರುವ ವರ್ಗಗಳು ಅನ್ಯಾಯದ ವಿರುದ್ಧ ಸಾಂವಿಧಾನಿಕ ಮಾರ್ಗದ ಮೂಲಕ ಕಾನೂನು ಹೋರಾಟ ನಡೆಸಬೇಕು. ಬೀದಿಗಿಳಿಯುವುದನ್ನು ತಡೆಯಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಒತ್ತಾಯಿಸಿದ್ದಾರೆ. ಹಾಗೆಯೇ ಮತದಾನದ ಮೂಲಕ ರಾಜಕೀಯ ಸಬಲೀಕರಣವು ದಲಿತರ ಹಕ್ಕುಗಳನ್ನು ಪಡೆಯುವ ಕೀಲಿಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.

- Advertisement -

ಮೀರತ್, ಸಹರಾನ್ಪುರ, ಹಾರ್ದೊಯ್ ಮತ್ತು ಪ್ರಯಾಗ್‌ರಾಜ್‌ನಂತಹ ಜಿಲ್ಲೆಗಳಲ್ಲಿ ದಲಿತರು ಕಾನೂನು ಮತ್ತು ಸುವ್ಯವಸ್ಥೆ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಮೀರತ್‌ನಲ್ಲಿ ದಲಿತ ಮಹಿಳೆಯ ಹತ್ಯೆಯನ್ನು ಖಂಡಿಸಿ ಗುರುವಾರ ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡಿದೆ. ಘಟನೆಯಲ್ಲಿ ಹನ್ನೊಂದು ಪೊಲೀಸರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ಉತ್ತರ ಪ್ರದೇಶ | ಬ್ರಾಹ್ಮಣರು ಬಿಎಸ್‌ಪಿ ಆಡಳಿತದಲ್ಲಿ ಮಾತ್ರವೇ ಸುರಕ್ಷಿತ: ಮಾಯಾವತಿ

ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಯಾವತಿ, “ಭಾರತೀಯ ಸಂವಿಧಾನದ ಶಿಲ್ಪಿ, ದಲಿತರು ಮತ್ತು ಇತರ ವಂಚಿತ ವರ್ಗಗಳ ಪ್ರತಿಪಾದಕ ಬಿ.ಆರ್. ಅಂಬೇಡ್ಕರ್ ಅವರು ಜಾತಿವಾದಿ ಶಕ್ತಿಗಳ ವಿರೋಧದ ಹೊರತಾಗಿಯೂ ತಮ್ಮ ಬುದ್ಧಿವಂತಿಕೆ ಮತ್ತು ದೂರದೃಷ್ಟಿಯ ಮೂಲಕ ಈ ಸಮುದಾಯಗಳಿಗೆ ಹಲವಾರು ಸಾಂವಿಧಾನಿಕ, ಕಾನೂನು ಮತ್ತು ಮೂಲಭೂತ ಹಕ್ಕುಗಳನ್ನು ಖಾತ್ರಿಪಡಿಸಿದ್ದಾರೆ” ಎಂದು ಹೇಳಿದರು.

“ಈ ವರ್ಗಗಳು ತಮ್ಮ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಪರಿಣಾಮಕಾರಿಯಾಗಿ ಕಾಪಾಡಿಕೊಳ್ಳಲು ತಮ್ಮ ಮತಗಳನ್ನು ಬಳಸಬೇಕು. ಈ ಮೂಲಕ ಸರ್ಕಾರದ ಮೇಲೆ ಹಿಡಿತ ಸಾಧಿಸಿ ರಾಜಕೀಯ ಅಧಿಕಾರದ ‘ಮಾಸ್ಟರ್ ಕೀ’ಯನ್ನು ಪಡೆದುಕೊಳ್ಳಬೇಕು ಎಂದು ಅಂಬೇಡ್ಕರ್ ಒತ್ತಿ ಹೇಳಿದ್ದಾರೆ” ಎಂದೂ ಹೇಳಿದರು.

ಅನ್ಯಾಯ, ದಬ್ಬಾಳಿಕೆ ಮತ್ತು ಜಾತಿ ತಾರತಮ್ಯದ ವಿರುದ್ಧದ ಹೋರಾಟವು ಯಾವಾಗಲೂ ಕಾನೂನಿನ ಚೌಕಟ್ಟಿನೊಳಗೆ ಇರಬೇಕು ಎಂದು ಅಂಬೇಡ್ಕರ್ ಜನರಿಗೆ ನಿರಂತರವಾಗಿ ಸಲಹೆ ನೀಡಿದ್ದಾರೆ. ಕೆಳ ನ್ಯಾಯಾಲಯಗಳಲ್ಲಿ ನ್ಯಾಯ ಸಿಗದಿದ್ದರೆ, ಜನರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುವ ಬದಲು ಸುಪ್ರೀಂ ಕೋರ್ಟ್ ಸೇರಿದಂತೆ ಉನ್ನತ ನ್ಯಾಯಾಲಯಗಳಲ್ಲಿ ತಮ್ಮ ಪ್ರಕರಣಗಳನ್ನು ಮುಂದುವರಿಸಬೇಕು ಎಂಬುದು ಅಂಬೇಡ್ಕರ್ ಅಭಿಪ್ರಾಯವಾಗಿತ್ತು ಎಂದೂ ತಿಳಿಸಿದ್ದಾರೆ.

“ಸಂಕುಚಿತ ರಾಜಕೀಯ ಹಿತಾಸಕ್ತಿ ಹೊಂದಿರುವ ಕೆಲವು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ದಮನಿತ ಸಮುದಾಯದವರನ್ನು ದಾರಿ ತಪ್ಪಿಸುತ್ತವೆ. ಪ್ರತಿಭಟನೆಗೆ ಪ್ರಚೋದನೆ ನೀಡುತ್ತವೆ. ಇಂತಹ ಸಂಘಟನೆಗಳು ಮೊದಲು ಹಿಂಸಾಚಾರ, ಗಲಭೆಗಳು ಮತ್ತು ರಸ್ತೆ ತಡೆಗಳನ್ನು ಪ್ರಚೋದಿಸುತ್ತವೆ. ನಂತರ ನಾಯಕರು ಮೊಸಳೆ ಕಣ್ಣೀರು ಸುರಿಸಿ ಘಟನೆಗಳಿಂದ ರಾಜಕೀಯ ಲಾಭ ಪಡೆಯಲು ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಾರೆ” ಎಂದು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...