ಆಪ್ ಸರ್ಕಾರದಲ್ಲಿ ‘ಅಪಾಯಕಾರಿ ಮಾದರಿ’ ಬೆಳೆಯುತ್ತಿದೆ: ಪಂಜಾಬ್ ಗ್ರಾಮಸ್ಥನ ಸಾವು ಪ್ರಸ್ತಾಪಿಸಿ ರಾಹುಲ್ ಗಾಂಧಿ ವಾಗ್ದಾಳಿ

Date:

ಪಂಜಾಬ್‌ನ ಆಮ್ ಆದ್ಮಿ ಪಾರ್ಟಿ (ಎಎಪಿ) ಸರ್ಕಾರದಲ್ಲಿ ಜನವಿರೋಧಿ ಹಾಗೂ ಬೆದರಿಕೆಯೊಡ್ಡುವ ‘ಅಪಾಯಕಾರಿ ಮಾದರಿ’ಯೊಂದು ಬೆಳಕಿಗೆ ಬರುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸುವ ನಾಗರಿಕರ ವಿರುದ್ಧ ಬೆದರಿಕೆ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

- Advertisement -

ಸಂಗ್ರೂರ್ ಜಿಲ್ಲೆಯ ದಲಿತ ಸಮುದಾಯಕ್ಕೆ ಸೇರಿದ ಗುಲ್ಜಾರ್ ಸಿಂಗ್ ಎಂಬ ಗ್ರಾಮಸ್ಥರು ಆತ್ಮಹತ್ಯೆ ಮಾಡಿಕೊಂಡ ಘಟನೆಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ‘X’ ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, ರಾಜ್ಯದಲ್ಲಿ ಹೆಚ್ಛುತ್ತಿರುವ ಮಾದಕ ದ್ರವ್ಯ (ಡ್ರಗ್ಸ್) ಹಾವಳಿ ತಡೆಯಲು ಸರ್ಕಾರ ಏಕಷ್ಟೊಂದು ವಿಫಲವಾಗಿದೆ ಎಂದು ಹಣಕಾಸು ಸಚಿವ ಹರ್‌ಪಾಲ್ ಸಿಂಗ್ ಚೀಮಾ ಅವರನ್ನು ಗುಲ್ಜಾರ್ ಸಿಂಗ್ ಪ್ರಶ್ನಿಸಿದ್ದರು ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನೂ ಓದಿ: ನೆಚ್ಚಿನ ಬಿಜೆಪಿ ನಾಯಕನ ಹೆಸರು ಹೇಳಿದ ರಾಹುಲ್‌ ಗಾಂಧಿ; Video ವೈರಲ್

ಪ್ರಶ್ನಿಸಿದ್ದಕ್ಕಾಗಿ ಗುಲ್ಜಾರ್ ಸಿಂಗ್ ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ತೀವ್ರ ಒತ್ತಡ ಹೇರಲಾಯಿತು, ಜಾತಿ ನಿಂದನೆ ಮಾಡಿ ಮನಸ್ಸಿಗೆ ತೀವ್ರ ನೋವುಂಟು ಮಾಡಲಾಯಿತು. ಇದರಿಂದ ಮನನೊಂದ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಜನರ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಕೆಲಸವೇ ಹೊರತು, ಪ್ರಶ್ನೆ ಕೇಳುವವರನ್ನು ತುಳಿಯುವುದಲ್ಲ’ ಎಂದು ರಾಹುಲ್ ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಕ್ಷಣವೇ ಹಣಕಾಸು ಸಚಿವ ಹರ್‌ಪಾಲ್ ಸಿಂಗ್ ಚೀಮಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಘಟನೆಯ ಕುರಿತು ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಿದ್ದು, ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...