ದಾವಣಗೆರೆ | ವಿಜ್ಞಾನ ಕ್ಷೇತ್ರದಲ್ಲಿ ಏರ್ ಮಾರ್ಷಲ್ ಫಿಲಿಪ್ಸ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ.

Date:

ಪ್ರತಿ ವರ್ಷ ನವಂಬರ್ ನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸರ್ಕಾರದಿಂದ ಘೋಷಿಸುವ ವಿವಿಧ ಕ್ಷೇತ್ರಗಳ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು‌ ಘೋಷಿಸಲಾಗಿದ್ದು, ವಿಜ್ಞಾನ ತಂತ್ರಜ್ಞಾನ ವಿಭಾಗದಲ್ಲಿ ದಾವಣಗೆರೆ ಮೂಲದ “ಏರ್ ಮಾರ್ಷಲ್ ಫಿಲಿಪ್ಸ್ ರಾಜಕುಮಾರ್” ಅವರ ಸುದೀರ್ಘ ಸಮಯದ ದೇಶಸೇವೆ ಮತ್ತು ವಾಯು ಸೇವೆಯ ಕರ್ತವ್ಯವನ್ನು ಗೌರವಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.

- Advertisement -

ಮೂಲತಃ ದಾವಣಗೆರೆಯಲ್ಲಿ ಹುಟ್ಟಿದ ಪಿ ರಾಜಕುಮಾರ ಎಂದು ಹೆಸರಾದ ಫಿಲಿಪ್ಸ್ ರಾಜಕುಮಾರ್ ತಮ್ಮ ವ್ಯಾಸಂಗವನ್ನು ಮೈಸೂರು ಮತ್ತು ಬೆಂಗಳೂರಿನಲ್ಲಿ ಪೂರೈಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...
1003001045
ಗ್ರೂಪ್ ಕ್ಯಾಪ್ಟನ್ ಆಗಿದ್ದ ವೇಳೆ

ನವೆಂಬರ್ 10, 1962ರಲ್ಲಿ ಭಾರತೀಯ ವಾಯುಸೇನೆಗೆ ಕರ್ತವ್ಯಕ್ಕೆ ಸೇರಿದ, ಪಿ ರಾಜಕುಮಾರ್ ಫ್ಲೈಯಿಂಗ್ ಆಫೀಸರ್ ಆಗಿ 1963 ರಲ್ಲಿ ನಿಯುಕ್ತಿಗೊಂಡರು. 1967ರಲ್ಲಿ ಫ್ಲೈಟ್ ಲೆಫ್ಟಿನೆಂಟ್, 1985ರಲ್ಲಿ ಗ್ರೂಪ್ ಕ್ಯಾಪ್ಟನ್, 1989ರಲ್ಲಿ ಏರ್ ಕಮಾಂಡರ್, 1994ರಲ್ಲಿ ಏರ್ ವೈಸ್ ಮಾರ್ಷಲ್ ಆಗಿ ಪದೋನ್ನತಿ ಪಡೆದು, 1996ರಲ್ಲಿ ವಾಯುಸೇನೆಯ ಅತ್ಯುನ್ನತ ಸ್ಥಾನವಾದ ಏರ್ ಮಾರ್ಷಲ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

1965 ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಯುದ್ಧದಲ್ಲಿ ಭಾಗವಹಿಸಿದ್ದ ಇವರು ಪಾಕಿಸ್ತಾನದ ಸೇನಾ ವಾಯುನೆಲೆ ಸರ್ಗೋದಾ ಮೇಲೆ ಯಶಸ್ವಿ ದಾಳಿ ನಡೆಸಿದ್ದರು. ಪಾಕಿಸ್ತಾನದ ಸರ್ಗೋಧ ವಾಯುನೆಲೆಯ ಮೇಲೆ ವಿಶ್ವದ ಮೊದಲ ಹಗಲು ಹೊತ್ತಿನ ವಾಯುದಾಳಿಯಲ್ಲಿ ಭಾಗವಹಿಸಿದ ಭಾರತೀಯ ವಾಯುಪಡೆಯ (IAF) ಯುವ ಪೈಲಟ್ ಆಗಿ ಫಿಲಿಪ್ ರಾಜಕುಮಾರ ಕರ್ತವ್ಯ ನಿರ್ವಹಿಸಿದ್ದರು.

ಭಾರತೀಯ ಯುದ್ಧ ವಿಮಾನ ತೇಜಸ್ ಸೇರಿದಂತೆ 55 ವಿವಿಧ ಏರ್ ಕ್ರಾಫ್ಟ್ ಗಳನ್ನು ಚಾಲನೆ ಮಾಡಿದ ಅನುಭವವಿರುವ ಏ.ಮಾ. ಪಿ ರಾಜಕುಮಾರ್ ಒಟ್ಟಾರೆ 5200 ಗಂಟೆ ಹಾರಾಟದ ಅನುಭವವನ್ನು ಪಡೆದಿದ್ದಾರೆ.

ಫ್ರಾನ್ಸ್ ನಲ್ಲಿ ಪ್ರಾಯೋಗಿಕ ಪರೀಕ್ಷಾ ಪೈಲೆಟ್ ಆಗಿ ತರಬೇತಿ ಪಡೆದಿದ್ದ ಇವರು ವೆಲ್ಲಿಂಗ್ಟನ್‌ನ ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜ್ ಮತ್ತು ಲಂಡನ್‌ನ ರಾಯಲ್ ಕಾಲೇಜ್ ಆಫ್ ಡಿಫೆನ್ಸ್ ಸ್ಟಡೀಸ್‌ನಲ್ಲಿ ಪದವಿ ಪಡೆದಿದ್ದಾರೆ.

ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರು ರಕ್ಷಣಾ ಸಚಿವಾಲಯದ ವೈಜ್ಞಾನಿಕ ಸಲಹೆಗಾರರಾಗಿದ್ದ ವೇಳೆ ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ (ADA) ಅಭಿವೃದ್ದಿ ಪಡಿಸುತ್ತಿದ್ದ ತೇಜಸ್ ಯುದ್ಧವಿಮಾನಕ್ಕೆ ಹಾರಾಟದ ಪರೀಕ್ಷೆ ನಡೆಸಲು ಆಹ್ವಾನಿಸಿದ್ದ ವೇಳೆ ಅವರೊಂದಿಗೆ ಕಾರ್ಯನಿರ್ವಹಿಸಿದ್ದರು. ವೈಮಾನಿಕ ಅಭಿವೃದ್ಧಿ ಸಂಸ್ಥೆ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಇವರ ವಿಶಿಷ್ಟ ಸೇವೆಗಳಿಗಾಗಿ
ಭಾರತದ ರಾಷ್ಟ್ರಪತಿಗಳಿಂದ “ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಹಾಗೂ ವಾಯು ಸೇವಾ ಪದಕ”ಗಳನ್ನು ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪುನೀತ್ ಸ್ಮರಣಾರ್ಥ ಆರ್ಯ ಈಡಿಗ ಸಂಘದಿಂದ ಪುಷ್ಪನಮನ ಹಾಗೂ ಉಪಹಾರ ವಿತರಣೆ

ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಇತ್ತೀಚೆಗೆ ಭಾರತ ಆಪರೇಷನ್ ಸಿಂಧೂರ ಹೆಸರಿನ ಸೇನಾ ಕಾರ್ಯಾಚರಣೆಯ ಸಂದರ್ಭದಲ್ಲಿ ಸುದ್ದಿ ಸಂಸ್ಥೆಯೊಂದಕ್ಕೆ ಮಾತನಾಡಿದ ಅವರು 1965ರ ಪಾಕಿಸ್ತಾನ ಸರ್ದಾರ್ ವಾಯುನೆಲೆಯ ಮೇಲೆ ನಡೆಸಿದ ವಾಯು ದಾಳಿಯನ್ನು ನೆನಪಿಸಿಕೊಂಡು “ಸರ್ಗೋಧಾ ದಾಳಿಯು ಧೈರ್ಯ, ನಿಖರತೆ ಮತ್ತು ಸ್ಕ್ವಾಡ್ರನ್‌ನಲ್ಲಿ ನಂಬಿಕೆಯನ್ನು ಹೆಚ್ಚಿಸಿತ್ತು. ಆರು ದಶಕಗಳ ನಂತರವೂ, ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ನೆನಪು ನನ್ನ ಮನಸ್ಸಿನಲ್ಲಿ ಅಚ್ಚೊತ್ತಿದೆ,” ಎಂದು ಪ್ರತಿಕ್ರಿಯಿಸಿದ್ದರು.

ಇವರ ಸುಧೀರ್ಘ ಅವಧಿಯ ದೇಶಸೇವೆ ಮತ್ತು ವಾಯು ಸೇವೆಯ ಕರ್ತವ್ಯವನ್ನು ಗೌರವಿಸಿ ಕರ್ನಾಟಕ ಸರ್ಕಾರವು 2025ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದ್ದು, ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...