ದಾವಣಗೆರೆ | ಮಾಜಿ ಯೋಧರಿಂದ ಹೊನ್ನಾಳಿ ಸೈನಿಕ ಪ್ರತಿಮೆ ಬಳಿ ಕಾರ್ಗಿಲ್ ವಿಜಯೋತ್ಸವ ಮತ್ತು ಬೈಕ್ ರ್ಯಾಲಿ

Date:

ಕಾಶ್ಮೀರದ ಕಾರ್ಗಿಲ್ ಪ್ರದೇಶಗಳನ್ನು ಅತಿಕ್ರಮಣ ಮಾಡಿದ್ದ ಪಾಕಿಸ್ತಾನದ ಭಯೋತ್ಪಾದಕರು ಮತ್ತು ಸೇನೆಯ ವಿರುದ್ಧ ವಿರುದ್ಧ ಭಾರತೀಯ ಸೇನೆ ಹೋರಾಡಿ ವಿಜಯ ಗಳಿಸಿದ ಕಾರ್ಗಿಲ್ ಯುದ್ಧದ ಸಂಭ್ರಮೋತ್ಸವವನ್ನು ಮತ್ತು ಇತ್ತೀಚೆಗೆ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ಆಪರೇಷನ್ ಸಿಂಧೂರದ ವಿಜಯೋತ್ಸವವನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಜುಲೈ 26ರಂದು ಸಂಜೆ 6 ಗಂಟೆಗೆ ಹೊನ್ನಾಳಿಯ ನಗರದ ಸೈನಿಕ ಪ್ರತಿಮೆ ಬಳಿ ಆಯೋಜಿಸಲಾಗಿದೆ.‌

- Advertisement -
1002382280

“27 ನೇ ಕಾರ್ಗಿಲ್ ವಿಜಯೋತ್ಸವ ಮತ್ತು ಇತ್ತೀಚಿಗೆ ನಡೆದ ಆಪರೇಷನ್ ಸಿಂಧೂರದ ವಿಜಯೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಸೈನಿಕರು ತಮ್ಮ ಜೀವದ ಹಂಗು ತೊರೆದು ರಾಷ್ಟ್ರದ ಗಡಿ ರಕ್ಷಣೆಗಾಗಿ ಬಲಿದಾನಗಳಿಂದ ದೇಶವನ್ನು ರಕ್ಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ತ್ಯಾಗ ಬಲಿದಾನಗಳನ್ನು ಗೌರವಿಸುವ ಸಲುವಾಗಿ ಸಂಭ್ರಮಾಚರಣೆಯನ್ನು ಆಚರಿಸಲಾಗುತ್ತದೆ” ಎಂದು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ವಾಸಪ್ಪ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅತಿವೃಷ್ಟಿ, ಪ್ರಕೃತಿ ವಿಕೋಪಕ್ಕೆ ಬೆಳೆ ವಿಮೆ, ಬೀಜ ರಸಗೊಬ್ಬರ ಬೆಲೆ ನಿಯಂತ್ರಣಕ್ಕೆ ರೈತ ಸಂಘ ಒತ್ತಾಯ

“ಇದೇ ದಿನ ಜುಲೈ 26ರಂದು ಬೆಳಿಗ್ಗೆ 10 ಗಂಟೆಗೆ ಹೊನ್ನಾಳಿ ದೇವನಾಯಕನಹಳ್ಳಿಯ ಕನಕದಾಸರ ವೃತ್ತದಿಂದ ಸೈನಿಕ ಪ್ರತಿಮೆವರೆಗೆ ಬೈಕ್ ರ್ಯಾಲಿ ನಡೆಯಲಿದ್ದು ಮಾಜಿ ಯೋಧರು, ರಾಷ್ಟ್ರಪ್ರೇಮಿಗಳು, ಯುವಕರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಸಾರ್ವಜನಿಕರು ಕೂಡ ಬೈಕ್ ರ್ಯಾಲಿಯಲ್ಲಿ ಭಾಗವಹಿಸಲು ಹಾಗೂ ಸಂಜೆ 6:00ಗೆ ನಡೆಯುವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಆಹ್ವಾನ ನೀಡಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...