ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ: ಪಾಕ್‌ನಲ್ಲಿ ಇಂಟರ್‌ನೆಟ್‌ ಸೇವೆ ಸ್ಥಗಿತ!

Date:

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಹಂತಕ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ದಾವೂದ್ ಇಬ್ರಾಹಿಂಗೆ ವಿಷ ಪ್ರಾಶನ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ವರದಿಗಳು ಹೊರಬಿದ್ದಿವೆ. ಆದರೆ ಅವರ ಸಹಾಯಕರು ಹಂಚಿಕೊಂಡ ಮಾಹಿತಿಯ ಪ್ರಕಾರ ವಿಷ ಪ್ರಾಶನದ ಬಗ್ಗೆ ಯಾವುದೇ ದೃಢೀಕರಣವಿಲ್ಲ.

ದಾವೂದ್ ಇಬ್ರಾಹಿಂ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಯ ಒಂದು ಮಹಡಿಯಲ್ಲಿರುವ ಏಕೈಕ ರೋಗಿ ದಾವೂದ್ ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆಯ ಉನ್ನತ ಅಧಿಕಾರಿಗಳು ಮತ್ತು ಅವರ ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶವಿದೆ ಎಂದು ಮೂಲಗಳು ತಿಳಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕುಟುಂಬ ಸದಸ್ಯರು (ದಾವೂದ್ ಸೋದರಳಿಯರು), ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಚೆನ್ನಾಗಿಲ್ಲ ಎಂದು ಖಚಿತಪಡಿಸಿದ್ದಾರೆ. ಆದಾಗ್ಯೂ, ಅವರು ವಿಷಪ್ರಾಶನ ವರದಿಗಳನ್ನು ನಿರಾಕರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

ಮುಂಬೈ ಪೊಲೀಸರು ಭೂಗತ ಪಾತಕಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಶನಿವಾರ ಸಂಜೆಯಿಂದ ಪಾಕಿಸ್ತಾನದಲ್ಲಿ ಇಂಟರ್ನೆಟ್ ಸೇವೆಗಳು ಸ್ಥಗಿತಗೊಂಡಿವೆ ಮತ್ತು ಯುಟ್ಯೂಬ್, ಫೇಸ್‌ಬುಕ್ ಅಥವಾ ಟ್ವಿಟರ್‌ನಂತಹ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳು ಪಾಕಿಸ್ತಾನದ ಬಳಕೆದಾರರಿಗೆ ಲಭ್ಯವಿಲ್ಲ.

ದಾವೂದ್ ಇಬ್ರಾಹಿಂನ ಸಹೋದರಿ ಹಸೀನಾ ಪಾರ್ಕರ್‌ನ ಮಗ ಜನವರಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಿದ ಹೇಳಿಕೆಯಂತೆ ಭೂಗತ ಪಾತಕಿ ಎರಡನೇ ವಿವಾಹವಾದ ನಂತರ ಕರಾಚಿಯಲ್ಲಿ ಉಳಿದುಕೊಂಡಿದ್ದಾನೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಆರೋಪ ಪಟ್ಟಿಯ ಪ್ರಕಾರ ದಾವೂದ್ ಇಬ್ರಾಹಿಂ ಸಹಚರರು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣವನ್ನು ನಿಯಂತ್ರಿಸುತ್ತಿದ್ದಾರೆ.

1993ರ ಮಾರ್ಚ್‌ 12ರಂದು ಮುಂಬೈನಲ್ಲಿ ಸಂಭವಿಸಿದ ಸರಣಿ ಸ್ಫೋಟದಲ್ಲಿ 257 ಮಂದಿ ಮೃತಪಟ್ಟಿದ್ದರು. ಈ ಸ್ಫೋಟದ ಪ್ರಮುಖ ರೂವಾರಿ ದಾವೂದ್ ಇಬ್ರಾಹಿಂ. ಸ್ಫೋಟದ ನಂತರ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ.

ಇಂಟರ್‌ಪೋಲ್ ಈತನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಘೋಷಿಸಿದ್ದು, ಭಾರತ ಸೇರಿದಂತೆ ಹಲವು ದೇಶಗಳಲ್ಲಿ ನಡೆದಿರುವ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ನೂರಾರು ಅಪರಾಧಗಳಲ್ಲಿ ಈತ ಪ್ರಮುಖ ಆರೋಪಿಯಾಗಿದ್ದಾನೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ...

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...