ದೆಹಲಿಯ 13 ಅಕ್ರಮ ಕೋಚಿಂಗ್‌ ಕೇಂದ್ರಗಳಿಗೆ ಬೀಗ ಜಡಿದ ಎಂಸಿಡಿ

Date:

ಕೋಚಿಂಗ್ ಕೇಂದ್ರದ ನೆಲಮಾಳಿಗೆಯಲ್ಲಿ ಪ್ರವಾಹದಿಂದ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಆಕಾಂಕ್ಷಿಗಳು ಮೃತಪಟ್ಟ ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ದೆಹಲಿಯ ಓಲ್ಡ್‌ ರಾಜಿಂದರ್ ನಗರದಲ್ಲಿ ಕನಿಷ್ಠ 13 ಅಕ್ರಮ ಕೋಚಿಂಗ್ ಕೇಂದ್ರಗಳಿಗೆ ಬೀಗ ಜಡಿದಿದೆ.

- Advertisement -

ಶನಿವಾರ ಸಂಜೆ ರಾವ್ಸ್‌ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯಲ್ಲಿ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳಾದ ತಾನಿಯಾ ಸೋನಿ, ಶ್ರೇಯಾ ಯಾದವ್ ಮತ್ತು ನವೀನ್ ಡೆಲ್ವಿನ್ ಸಾವನ್ನಪ್ಪಿದ ನಂತರ ಪಾಲಿಕೆ ಮಂಡಳಿಯ ಕ್ರಮವು ಭಾನುವಾರ ತಡರಾತ್ರಿಯವರೆಗೆ ಮುಂದುವರೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೀಗ ಹಾಕಲಾದ ಕೋಚಿಂಗ್ ಕೇಂದ್ರಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, 99 ನೋಟ್ಸ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಕೇಂದ್ರಗಳು ಸೇರಿವೆ.

ಕೋಚಿಂಗ್‌ ಕೇಂದ್ರದ ನೆಲಮಹಡಿಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಅಭಿಷೇಕ್ ಗುಪ್ತಾ ಮತ್ತು ಸಂಯೋಜಕ ದೇಶಪಾಲ್ ಸಿಂಗ್ ಇಬ್ಬರನ್ನು ಬಂಧಿಸಿದ್ದು, 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ದೆಹಲಿ | ಕೋಚಿಂಗ್ ಸೆಂಟರ್‌ ಜಲಾವೃತ; ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿತ್ತು.

ಶನಿವಾರ ಸಂಜೆ ಸುರಿದ ಭಾರಿ ಮಳೆಗೆ ದೆಹಲಿಯ ಓಲ್ಡ್‌ ರಾಜೇಂದ್ರ ನಗರ ದಲ್ಲಿರುವ ‘ರಾವ್ಸ್ ಐಎಎಸ್‌ ಸ್ಟಡಿ ಸರ್ಕಲ್‌’ ಕಟ್ಟಡದ ನೆಲಮಹಡಿಗೆ ನೀರು ನುಗ್ಗಿದೆ. ಈ ವೇಳೆ ಮೂವರು ಹೊರಬರಲಾರದೆ ಮುಳುಗಿ ಮೃತಪಟ್ಟಿದ್ದಾರೆ. ನೆಲಮಹಡಿ ಕೆಲವೇ ನಿಮಿಷ ಗಳಲ್ಲಿ ಮುಳುಗಿದ್ದರಿಂದ ಕೆಲವರಿಗೆ ಹೊರ ಬರಲು ಸಾಧ್ಯವಾಗಲಿಲ್ಲ. ಕಾರ್ಯಾಚರಣೆ ವೇಳೆ ಮೂರು ಮೃತದೇಹಗಳು ದೊರೆತವು.

ಕೋಚಿಂಗ್ ಕೇಂದ್ರದ ನೆಲಮಹಡಿಯನ್ನು ಸ್ಟೋರ್ ರೂಂ (ಉಗ್ರಾಣ) ಆಗಿ ಬಳಸಲು ಮಾತ್ರ ಅನುಮತಿ ನೀಡಲಾಗಿತ್ತು. ಆದರೆ ಅದನ್ನು ಗ್ರಂಥಾಲಯವಾಗಿ ಬಳಸಿ, ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನೆಲಮಹಡಿಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವ ಎಲ್ಲ ಕೋಚಿಂಗ್‌ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಮೇಯರ್‌ ಶೆಲ್ಲಿ ಒಬೆರಾಯ್‌ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.

ಶನಿವಾರ ನಡೆದ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಕೇರಳದ ಎರ್ನಾಕುಳಂ ಜಿಲ್ಲೆಯ ನವೀನ್‌ ಡೆಲ್ವಿನ್ (29), ತೆಲಂಗಾಣದಲ್ಲಿ ನೆಲೆಸಿರುವ ಬಿಹಾರದ ಔರಂಗಾಬಾದ್‌ನ ತಾನ್ಯಾ ಸೋನಿ (21) ಮತ್ತು ಉತ್ತರ ಪ್ರದೇಶದ ಶ್ರೇಯಾ ಯಾದವ್‌ ಎಂದು ಗುರುತಿಸಲಾಗಿದೆ. ಈ ಮೂವರೂ ನಾಗರಿಕ ಸೇವಾ ಪರೀಕ್ಷೆಗಾಗಿ ಸಿದ್ಧತೆ ನಡೆಸುತ್ತಿದ್ದರು.

ತಾನ್ಯಾ ಅವರು ದೆಹಲಿ ವಿಶ್ವವಿದ್ಯಾಲಯದ ಮಹಾರಾಜಾ ಅಗ್ರಸೇನ್‌ ಕಾಲೇಜಿನ ವಿದ್ಯಾರ್ಥಿನಿ ಆಗಿದ್ದು, ಒಂದೂವರೆ ತಿಂಗಳ ಹಿಂದೆಯಷ್ಟೇ ರಾವ್ಸ್ ಕೋಚಿಂಗ್ ಕೇಂದ್ರಕ್ಕೆ ಸೇರಿಕೊಂಡಿದ್ದರು. ನವೀನ್‌ ಅವರು ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಪಿಎಚ್‌.ಡಿ ಮಾಡುತ್ತಿದ್ದು, ಕೋಚಿಂಗ್‌ ಕೇಂದ್ರದಲ್ಲಿ 8 ತಿಂಗಳಿನಿಂದ ತರಬೇತಿ ಪಡೆಯುತ್ತಿದ್ದಾರೆ. ಬಿಎಸ್‌ಸಿ (ಕೃಷಿ) ವ್ಯಾಸಂಗ ಮಾಡಿರುವ ಶ್ರೇಯಾ, ಎರಡು ತಿಂಗಳ ಹಿಂದೆ ತರಬೇತಿ ಕೇಂದ್ರಕ್ಕೆ ಸೇರಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...