9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

Date:

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ ‘ಗುಲಾಬಿ ಸೀರೆಯ ನಾರಿಯರು’ ಎಂದೇ ಖ್ಯಾತರಾದ ಆಶಾ ಕಾರ್ಯಕರ್ತೆಯರು, ತಮ್ಮ ಬದುಕಿನ ಭದ್ರತೆಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ 9ನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟಕ್ಕೆ ಈಗ ಕನ್ನಡ ಚಿತ್ರರಂಗದ ಪ್ರಮುಖ ತಾರೆಯರಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಹಿರಿಯ ನಟಿ ತಾರಾ ಅನುರಾಧಾ ಪ್ರತಿಭಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ದನಿಗೂಡಿಸಿದ್ದಾರೆ.

- Advertisement -

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹಿರಿಯ ನಟಿ ತಾರಾ, ಹೋರಾಟದ ನೇತೃತ್ವ ವಹಿಸಿರುವ ಕಾರ್ಯದರ್ಶಿ ನಾಗಲಕ್ಷ್ಮಿ ಅವರಿಂದ ಕಾರ್ಯಕರ್ತೆಯರ ಸಮಸ್ಯೆಗಳ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಬಳಿಕ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದರು. “ನಾವೆಲ್ಲ ಹೆಣ್ಣು ಮಕ್ಕಳು ಸೇರಿದಾಗ ಮೊದಲು ಹೇಗಿದ್ದೀರಾ ಎಂದು ಕೇಳುತ್ತೇವೆ. ಆದರೆ 9 ದಿನಗಳಿಂದ ಸ್ವಾತಂತ್ರ್ಯ ಉದ್ಯಾನದ ಮುಂದೆ ಇಷ್ಟೊಂದು ಗುಲಾಬಿಗಳು ಹಸಿವು, ಮಳೆ, ಚಳಿಯನ್ನು ಲೆಕ್ಕಿಸದೆ ಕುಳಿತಿದ್ದಾರೆಂದರೆ, ಅವರು ಕೇಳುತ್ತಿರುವುದು ತಮ್ಮ ಸಂಸಾರ ಮತ್ತು ಮಕ್ಕಳನ್ನು ನೆಮ್ಮದಿಯಿಂದ, ಗೌರವದಿಂದ ನೋಡಿಕೊಳ್ಳುವ ಹಕ್ಕನ್ನು ಮಾತ್ರ” ಎಂದು ಭಾವುಕರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಸರ್ಕಾರಕ್ಕೆ ನೇರ ಒತ್ತಾಯ ಮಾಡಿದ ತಾರಾ, “ಆಶಾ ಕಾರ್ಯಕರ್ತೆಯರನ್ನು ಮೊದಲು ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕು. ಆ ಮೂಲಕ ಅವರಿಗೆ ಪ್ರತಿ ತಿಂಗಳು ನಿಶ್ಚಿತ ಸಂಬಳ ಹಾಗೂ ಸಕಾಲಕ್ಕೆ ವೇತನ ಸಿಗುವಂತೆ ಸರ್ಕಾರ ತಕ್ಷಣವೇ ಅಧಿಕೃತ ಆದೇಶ ಹೊರಡಿಸಬೇಕು” ಎಂದು ಆಗ್ರಹಿಸಿದರು.

ಇದಕ್ಕೂ ಮುನ್ನ (ನಿನ್ನೆ) ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ, ಕಾರ್ಯಕರ್ತೆಯರ ಕಷ್ಟಗಳನ್ನು ಕೇಳಿ ಭಾವುಕರಾಗಿದ್ದರು. ಸಾಮಾಜಿಕ ಜಾಲತಾಣದಲ್ಲೂ ಹೋರಾಟದ ವಿಡಿಯೋ ಹಂಚಿಕೊಂಡಿರುವ ಅವರು, “ಆಶಾ ಕಾರ್ಯಕರ್ತೆಯರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು. ಅವರಿಗೆ ನ್ಯಾಯಯುತ ವೇತನ ಸಕಾಲದಲ್ಲಿ ಸಿಗಬೇಕು” ಎಂದಿದ್ದಾರೆ. ಅಲ್ಲದೆ, ಈ ಕುರಿತು ಮುಖ್ಯಮಂತ್ರಿಗಳು ಹಾಗೂ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಮತ್ತೊಂದೆಡೆ ನಟಿ ಕಾರುಣ್ಯ ರಾಮ್ ಅವರು ಯು.ಟಿ. ಖಾದರ್ ಅವರನ್ನು ಖುದ್ದಾಗಿ ಭೇಟಿ ಮಾಡಿ, ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದಾರೆ. ಬೇಡಿಕೆಗಳನ್ನು ಶೀಘ್ರವೇ ಈಡೇರಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಸಿ ಬೆಂಬಲ ಸೂಚಿಸಿದ್ದಾರೆ. ಇವರೊಂದಿಗೆ ಸುಮಲತಾ ಅಂಬರೀಶ್ ಹಾಗೂ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಹಲವು ಗಣ್ಯರು ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ಈಗಾಗಲೇ ಸರ್ಕಾರದ ಮಟ್ಟದಲ್ಲಿ ಹಲವು ಸುತ್ತಿನ ಸಂಧಾನ ಸಭೆಗಳು ನಡೆದಿವೆಯಾದರೂ, ಈ ಹಿಂದಿನ ಕಹಿ ಅನುಭವದಿಂದಾಗಿ ಆಶಾ ಕಾರ್ಯಕರ್ತೆಯರು ಕೇವಲ ಮೌಖಿಕ ಆಶ್ವಾಸನೆಗೆ ಒಪ್ಪುತ್ತಿಲ್ಲ. 2025ರ ಜನವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಸಿಕ ಗೌರವಧನವನ್ನು 10 ಸಾವಿರ ರೂ.ಗೆ ಹೆಚ್ಚಿಸುವ ಭರವಸೆ ನೀಡಿದ್ದರೂ, ಅದು ಇನ್ನೂ ಜಾರಿಯಾಗಿಲ್ಲ. ಹೀಗಾಗಿ ಈ ಬಾರಿ ಅಧಿಕೃತ ಲಿಖಿತ ಆದೇಶ ಬರುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ನಿನ್ನೆ ಸುರಿದ ವಿಪರೀತ ಮಳೆಯ ನಡುವೆಯೂ ಧರಣಿ ಮುಂದುವರಿಸಿದ ಪರಿಣಾಮ 20ಕ್ಕೂ ಹೆಚ್ಚು ಕಾರ್ಯಕರ್ತೆಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಪಡೆದ ಬೆನ್ನಲ್ಲೇ ಅವರು ಮರಳಿ ಪ್ರತಿಭಟನಾ ಸ್ಥಳಕ್ಕೆ ಬಂದು ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ದೃಢ ಸಂಕಲ್ಪವನ್ನು ಪ್ರದರ್ಶಿಸಿದ್ದಾರೆ.

ಆಶಾ ಕಾರ್ಯಕರ್ತೆಯರ 8 ಪ್ರಮುಖ ಬೇಡಿಕೆಗಳು:-

ಪ್ರಸ್ತುತ ಸಿಗುತ್ತಿರುವ 5,000 ರೂ. ಮಾಸಿಕ ಗೌರವಧನವನ್ನು 15,000 ರೂ.ಗೆ ಹೆಚ್ಚಿಸಿ ನಿಗದಿತ ವೇತನ ನೀಡಬೇಕು.
‘ಸಮಸ್ತ’ ಆ್ಯಪ್ ಮೂಲಕ ಒತ್ತಾಯಪೂರ್ವಕವಾಗಿ ಕೆಲಸ ಮಾಡಿಸುವುದನ್ನು ತಕ್ಷಣ ನಿಲ್ಲಿಸಬೇಕು.
ಬಾಕಿ ಇರುವ ಪ್ರೋತ್ಸಾಹಧನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು.
ನಿವೃತ್ತಿ ಹೊಂದಿದ ಕಾರ್ಯಕರ್ತೆಯರಿಗೆ ಬಾಕಿ ಇರುವ ನಿವೃತ್ತಿ ಭತ್ಯೆ  ಪಾವತಿಸಬೇಕು.
ಸೇವಾ ನಿವೃತ್ತಿ  ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಬೇಕು.
ಕೆಲಸದಿಂದ ಕೈಬಿಟ್ಟಿರುವ ಆಶಾ ಸುಗಮಕಾರರನ್ನು ಮರುನೇಮಕ ಮಾಡಬೇಕು.
NIOS ತರಬೇತಿ ಪೂರ್ಣಗೊಳಿಸಿದವರಿಗೆ 5,000 ರೂ. ಪ್ರೋತ್ಸಾಹಧನ ನೀಡಬೇಕು.ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮೂರು ತಿಂಗಳ ಗೌರವಧನ (ವೇತನ ಸಹಿತ ರಜೆ) ನೀಡಬೇಕು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪರಿಷ್ಕೃತ ವೇತನ ಜಾರಿಗೆ ಆಗ್ರಹ : ಮೆಗ್ಗಾನ್ ಆಸ್ಪತ್ರೆ ಸಫಾಯಿ ಕರ್ಮಚಾರಿಗಳಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ಪರಿಷ್ಕೃತ ವೇತನ ಸುತ್ತೋಲೆಯನ್ನು ತಕ್ಷಣ ಜಾರಿಗೊಳಿಸಿ, ಸರ್ಕಾರಿ...

ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ ಪ್ರಯತ್ನ!

ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು...

ಗದಗ | ಮಹಿಳೆಯರ ಆರ್ಥಿಕ ಸಬಲೀಕರಣವೇ ಸಮಾಜದ ಪ್ರಗತಿಗೆ ಬುನಾದಿ: ಕವಿತಾ ದಂಡಿನ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಸ್ವಂತ ಆದಾಯ ಗಳಿಸುವ ಸಾಮರ್ಥ್ಯ ಬೆಳೆಸಿಕೊಂಡು, ಕುಟುಂಬ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ; ಶರಣಾಗಲು ಸುಪ್ರೀಂ ಸೂಚನೆ

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಅವರಿಗೆ...