ಡಿಡಿ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಮುನ್ಸೂಚನೆ: ಎಂ ಕೆ ಸ್ಟಾಲಿನ್

Date:

ಸರ್ಕಾರಿ ಸ್ವಾಮ್ಯದ ದೂರದರ್ಶನ ಲೋಗೋ ಬಣ್ಣವನ್ನು ಕೇಸರೀಕರಣಗೊಳಿಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸ್ಟಾಲಿನ್, ಡಿಡಿ ಲೋಗೋ ಬಣ್ಣ ಬದಲಿಸಿರುವುದು ಕೇಸರೀಕರಣವನ್ನು ಎಲ್ಲಡೆ ಬಳಸುವ ಬಿಜೆಪಿ ಪಿತೂರಿಯ ಮುನ್ಸೂಚನೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಲೋಗೋ ಬದಲಾವಣೆ ಕೇಸರೀಕರಣದ ಮುನ್ಸೂಚನೆಯಾಗಿದೆ. 2024ರ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಇಂತಹ ಪ್ಯಾಸಿಸಂ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಲಿದ್ದಾರೆ.  ತಮಿಳು ಕವಿ ತಿರುನಳ್ಳುವರ್‌ ಅವರನ್ನು ಕೇಸರೀಕರಣಗೊಳಿಸಲಾಗಿದೆ. ತಮಿಳುನಾಡಿನ ಮಹಾನ್‌ ವ್ಯಕ್ತಿಗಳ ಪ್ರತಿಮೆಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ” ಎಂದು ಸ್ಟಾಲಿನ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಗೋ ಬದಲಾವಣೆ ಬಗ್ಗೆ ಪ್ರತಿಪಕ್ಷಗಳು ಕೂಡ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಇದು ತೀವ್ರ ಅಕ್ರಮವಾಗಿದ್ದು, ಬಿಜೆಪಿ ಪರವಾದ ಪಕ್ಷಪಾತವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಇತ್ತೀಚಿಗಷ್ಟೆ ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ ಬಣ್ಣವನ್ನು ಕೇಸರಿ ಬಣ್ಣದೊಂದಿಗೆ ಬದಲಾಯಿಸಲಾಗಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಿರುವ ಡಿಡಿ ನ್ಯೂಸ್, ನಮ್ಮ ಮೌಲ್ಯಗಳು ಹಾಗೆ ಉಳಿದುಕೊಂಡಿದ್ದು,ಹೊಸ ಅವತಾರದೊಂದಿಗೆ ನಾವು ಈಗ ಲಭ್ಯವಿದ್ದೇವೆ. ಎಲ್ಲ ನೂತನ ಡಿಡಿ ನ್ಯೂಸ್‌ ಅನುಭವದೊಂದಿಗೆ ಹಿಂದೆಂದಿಗಿಂತಲೂ ಹೊಸ ಸುದ್ದಿಯ ಪಯಣಕ್ಕೆ ಸಿದ್ದರಾಗಿ ಎಂದು ತಿಳಿಸಿತ್ತು.

ಡಿಡಿ ನ್ಯೂಸ್‌ ಲೋಗೊಗೆ ಕೇಸರಿ ಬಣ್ಣ ಕೇಸರಿಕರಣಗೊಳಿಸಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ತನ್ನ ಕೇಸರಿ ಬಣ್ಣವನ್ನು ಸರ್ಕಾರಿ ಅಧೀನದ ಮಾಧ್ಯಮ ಸಂಸ್ಥೆಗೂ ಬಳಿದಿದೆ. ಕೇಸರಿ ಬಣ್ಣವು ಹಿಂದುತ್ವದೊಂದಿಗೆ ಸಂಬಂಧ ಹೊಂದದ್ದು, ಈ ಸಿದ್ದಾಂತವನ್ನು ಮಾಧ್ಯಮ ಸಂಸ್ಥೆಯ ಮೂಲಕ ಪ್ರತಿಪಾದಿಸಲು ಹೊರಟಿದೆ ಎಂದು ಹಲವರು ಟೀಕಿಸಿದ್ದಾರೆ.

ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಸಾರ ಭಾರತಿಯ ಮಾಜಿ ಸಿಇಒ ಜವಾಹರ್ ಸರ್ಕಾರ್, ರಾಷ್ಟ್ರೀಯ ಪ್ರಸಾರ ಮಾಧ್ಯಮ ದೂರದರ್ಶನದ ಐತಿಹಾಸಿಕವಾದ ಪ್ರಮುಖ ಲೋಗೊ ಕೇಸರಿಕರಣಗೊಂಡಿದೆ. ಪ್ರಸಾರ ಭಾರತಿಯ ಮಾಜಿ ಸಿಇಒ ಆಗಿ ಕೇಸರಿಕರಣದ ಎಚ್ಚರಿಕೆ ಹಾಗೂ ಅನುಭವದೊಂದಿಗೆ ಕಾರ್ಯಕ್ರಮವನ್ನು ನೋಡುತ್ತಿದ್ದೇನೆ. ಇದು ಇನ್ನು ಪ್ರಸಾರ ಭಾರತಿಯಲ್ಲ, ಇದು ಪ್ರಚಾರ ಭಾರತಿಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದರು.

ದೂರದರ್ಶನವು ಪ್ರಸಾರ ಭಾರತಿಯ ಅಂಗಸಂಸ್ಥೆಯಾಗಿದ್ದು, ಆಲ್‌ ಇಂಡಿಯಾ ರೇಡಿಯೋ ಸೇರಿದಂತೆ ಹಲವು ಅಂಗಸಂಸ್ಥೆಗಳಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...