ಗರ್ಭಿಣಿಗೆ ನೀಡಿದ ಅಂಗನವಾಡಿ ಆಹಾರದಲ್ಲಿ ಸತ್ತ ಹಾವು ಪತ್ತೆ: ಮಧ್ಯಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ

Date:

ಗರ್ಭಿಣಿ ಮಹಿಳೆಯೊಬ್ಬರಿಗೆ ವಿತರಿಸಲಾದ ಪೌಷ್ಟಿಕ ಆಹಾರದ ಪ್ಯಾಕೆಟ್‌ನಲ್ಲಿ ಸತ್ತ ಹಾವು ಪತ್ತೆಯಾಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಅಂಗನವಾಡಿ ಕೇಂದ್ರವೊಂದರಲ್ಲಿ ನಡೆದಿದೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಮತ್ತು ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ನೆಟ್ಟಿಗರು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಕಾರ್ಘಾಟ್ ಕಾಮ್ತಿ ಗ್ರಾಮದ ಅಂಗನವಾಡಿ ಕೇಂದ್ರವೊಂದರಲ್ಲಿ ಸರ್ಕಾರಿ ಯೋಜನೆಯಡಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಪೌಷ್ಟಿಕತೆ ನಿವಾರಿಸಲು ‘ರೆಡಿ-ಟು-ಈಟ್’ (Ready-to-eat) ಪೌಷ್ಟಿಕ ಆಹಾರದ ಪ್ಯಾಕೆಟ್‌ಗಳನ್ನು (ಲಾಡು ಮಿಕ್ಸ್ ಅಥವಾ ದಾಲಿಯಾ) ವಿತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನು ಓದಿದ್ದೀರಾ? ಅಂಗನವಾಡಿಗಳಲ್ಲಿ ಜಾತಿಭೂತ: ಹಸುಳೆಗಳ ಊಟ- ಆಟದ ಅಂಗಳಗಳಲ್ಲಿ ಜಾತೀಯತೆಯ ಅದೃಶ್ಯ ಗೋಡೆಗಳು

ಗರ್ಭಿಣಿ ಮಹಿಳೆಯೊಬ್ಬರು ಅಂಗನವಾಡಿಯಿಂದ ತಂದಿದ್ದ ಆಹಾರದ ಪ್ಯಾಕೆಟ್ ಅನ್ನು ಮನೆಯಲ್ಲಿ ಸಿದ್ಧಪಡಿಸಲು ತೆರೆದಾಗ, ಅದರೊಳಗೆ ಸಣ್ಣ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಪ್ಯಾಕೆಟ್‌ನಲ್ಲಿದ್ದ ಹಿಟ್ಟಿನೊಂದಿಗೆ ಹಾವು ಸಂಪೂರ್ಣವಾಗಿ ಬೆರೆತು ಹೋಗಿತ್ತು.

ಇದನ್ನು ಕಂಡು ಆಘಾತಕ್ಕೊಳಗಾದ ಮಹಿಳೆ ಮತ್ತು ಆಕೆಯ ಕುಟುಂಬಸ್ಥರು ತಕ್ಷಣವೇ ಈ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ ಹಾಗೂ ಫೋಟೋ ತೆಗೆದುಕೊಂಡಿದ್ದಾರೆ. ನಂತರ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಗ್ರಾಮಸ್ಥರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ.

ಸರ್ಕಾರದ ವಿರುದ್ಧ ನೆಟ್ಟಿಗರ ಆಕ್ರೋಶ

ಸತ್ತ ಹಾವು ಪತ್ತೆಯಾದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಾದ ಎಕ್ಸ್ (ಟ್ವಿಟರ್), ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ಗಳಲ್ಲಿ ತೀವ್ರ ವೈರಲ್ ಆಗಿವೆ. ನೆಟ್ಟಿಗರು ಮಧ್ಯಪ್ರದೇಶ ಸರ್ಕಾರ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

“ಇದು ಪೌಷ್ಟಿಕ ಆಹಾರವೇ ಅಥವಾ ವಿಷವೇ? ಗರ್ಭಿಣಿಯರು ಮತ್ತು ಹುಟ್ಟಲಿರುವ ಮಗುವಿನ ಆರೋಗ್ಯ ರಕ್ಷಿಸಬೇಕಾದ ಸರ್ಕಾರ, ಅವರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ” ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. “ಇಂತಹ ಪ್ಯಾಕೆಟ್‌ಗಳನ್ನು ತಯಾರಿಸುವ ಗುತ್ತಿಗೆದಾರರು ಕಳಪೆ ಗುಣಮಟ್ಟದ ಆಹಾರವನ್ನು ಪೂರೈಸುತ್ತಿದ್ದಾರೆ. ಅಧಿಕಾರಿಗಳು ಹಣದ ಆಸೆಗಾಗಿ ಯಾವುದೇ ತಪಾಸಣೆ ನಡೆಸದೆ ಇದಕ್ಕೆ ಅನುಮತಿ ನೀಡುತ್ತಿದ್ದಾರೆ” ಎಂದು ನೆಟ್ಟಿಗರು ದೂರಿದ್ದಾರೆ.

ಸದ್ಯ ಎಕ್ಸ್‌ನಲ್ಲಿ #MadhyaPradesh, #AnganwadiScam, ಮತ್ತು #ChildWelfare ಎಂಬ ಹ್ಯಾಶ್‌ಟ್ಯಾಗ್‌ಗಳ ಅಡಿಯಲ್ಲಿ ಸಾವಿರಾರು ಮಂದಿ ಮಧ್ಯಪ್ರದೇಶ ಮುಖ್ಯಮಂತ್ರಿ ಮತ್ತು ಇಲಾಖೆಯ ಸಚಿವರನ್ನು ಟ್ಯಾಗ್ ಮಾಡಿ ಉತ್ತರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಪಕ್ಷಗಳು

ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, “ಮಧ್ಯಪ್ರದೇಶದಲ್ಲಿ ಭ್ರಷ್ಟಾಚಾರದ ಮಿತಿ ಮೀರಿದೆ. ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಪಡಿತರದಲ್ಲೂ ಹಗರಣ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ. ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಇನ್ನು ವಿಷಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಆ ನಿರ್ದಿಷ್ಟ ಬ್ಯಾಚ್‌ನ ಎಲ್ಲಾ ಆಹಾರ ಪ್ಯಾಕೆಟ್‌ಗಳ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...