ಬಿಹಾರದ ಬಂಕಾ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಟೀನ್‌ನ ಆಹಾರದಲ್ಲಿ ಸತ್ತ ಹಾವು ಪತ್ತೆಯಾಗಿದ್ದು, ಕನಿಷ್ಠ 11 ಮಂದಿ ವಿದ್ಯಾರ್ಥಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ವಾರ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕರ್ತವ್ಯದಲ್ಲಿದ್ದ ವೈದ್ಯರ ಪ್ರಕಾರ, ಗುರುವಾರ ರಾತ್ರಿ ಕೆಲವು ವಿದ್ಯಾರ್ಥಿಗಳು ಫುಡ್ ಪಾಯಿಸನಿಂಗ್ ಆಗಿರುವ ಬಗ್ಗೆ ದೂರು ನೀಡಿದ್ದು, ಬಳಿಕ ಅವರ ಆರೋಗ್ಯ ಸರಿಯಾಗಿತ್ತು.
ಆಹಾರದಲ್ಲಿ ಸತ್ತ ಹಾವು ಪತ್ತೆಯಾದ ಬೆನ್ನಲ್ಲೇ ಕ್ಯಾಂಟೀನ್ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆದಸಿದಾಗ ಕಾಲೇಜು ಸಿಬ್ಬಂದಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
“ನಾವು ಆಹಾರದ ಗುಣಮಟ್ಟದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಆದರೆ ಈ ಬಾರಿಯನ್ನು ಮಿತಿಯನ್ನು ದಾಟಿದೆ. ಕ್ಯಾಂಟೀನ್‌ನ ಆಹಾರದಲ್ಲಿ ಸತ್ತ ಹಾವು ಪತ್ತೆಯಾಗಿದೆ” ಎಂದು ಎಂದು ವಿದ್ಯಾರ್ಥಿಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
A dead snake found in the meal at government engineering College banka, bihar. Immediately after consuming the food students experienced vomiting and nausea. Even after visit of local authority no appropriate action was taken. pic.twitter.com/hOapcBNwlU
— Rishi singh (@FFire1008) June 16, 2024
ಇದನ್ನು ಓದಿದ್ದೀರಾ? ಇಂದಿರಾ ಕ್ಯಾಂಟೀನ್‌ಗಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಆಗ್ರಹ
“ಇದನ್ನೆಲ್ಲ ನಮ್ಮಿಂದ ಸಹಿಸಲಾಗದು. ಪ್ರತಿ ಬಾರಿ ನಾವು ಕ್ಯಾಂಟೀನ್ ಆಹಾರದ ಬಗ್ಗೆ ಅಧ್ಯಾಪಕರ ಮುಂದೆ ಪ್ರಸ್ತಾಪಿಸಿದಾಗ ಅವರು ಸಮಸ್ಯೆಯನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಮತ್ತೊಂದೆಡೆ, “ವಿದ್ಯಾರ್ಥಿನಿಯರು ಕೂಡಾ ಆಹಾರ ಗುಣಮಟ್ಟವನ್ನು ಪ್ರಶ್ನಿಸಿದ್ದಾರೆ. ಕೆಲವು ಸಮಯದ ಹಿಂದೆ ಹಿರಿಯ ಅಧಿಕಾರಿಯೊಬ್ಬರು ತಪಾಸಣೆಗೆ ಬಂದಿದ್ದರು. ಆ ಸಂದರ್ಭದಲ್ಲಿ ಶೇಕಡ 90ರಷ್ಟು ಅವಧಿ ಮುಗಿದಿರುವ (expired) ಆಹಾರ ಪತ್ತೆಯಾಗಿದೆ” ಎಂದು ವಿದ್ಯಾರ್ಥಿನಿಯೊಬ್ಬರು ಹೇಳಿದ್ದಾರೆ.
ಇನ್ನು ವಿದ್ಯಾರ್ಥಿಗಳು ಹಾಸ್ಟೆಲ್‌ನ ಆಹಾರದ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ. ಹಾಸ್ಟೆಲ್‌ನಲ್ಲಿ ಉಳಿಯಬೇಕಾದರೆ ಮೆಸ್ ಆಹಾರ ಸೇವಿಸುವುದು ಕಡ್ಡಾಯವಾಗಿದೆ. ಒಂದಿ ವೇಳೆ ಮೆಸ್‌ನ ಆಹಾರ ಸೇವಿಸದಿದ್ದರೆ, ಮೆಸ್ ಶುಲ್ಕವನ್ನು ಪಾವತಿಸದಿದ್ದರೆ, ಅವರನ್ನು ಪರೀಕ್ಷೆಯಿಂದ ನಿರ್ಬಂಧಿಸಲಾಗುತ್ತದೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ವಿಜಯನಗರ | ಹಾವು ಕಚ್ಚಿ ಮಹಿಳೆಯರು ಸಾವು; ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯವಿಲ್ಲ ಎನ್ನುವ ವೈದ್ಯಾಧಿಕಾರಿ
ಸತ್ತ ಹಾವು ಪತ್ತೆಯಾದ ಘಟನೆಯ ಬಳಿಕ ಜಿಲ್ಲಾಡಳಿತ ಕ್ರಮ ಕೈಗೊಂಡು ತನಿಖೆ ಆರಂಭಿಸಿದೆ. ಇನ್ನು ಈ ಹಿಂದೆಯೂ ಸಹ ಕಾಲೇಜಿನಲ್ಲಿ ಇದೇ ರೀತಿಯ ಆಹಾರ ಸಂಬಂಧಿತ ದೂರು ದಾಖಲಾಗಿತ್ತು. ಈ ನಿಟ್ಟಿನಲ್ಲಿ ಆಡಳಿತವು ಈ ಬಗ್ಗೆ ತನಿಖೆ ನಡೆಸಿ ಕಾಲೇಜಿಗೆ ಸೂಚನೆ ನೀಡಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಹೇಳಿರುವುದಾಗಿ ಲೈವ್ ಹಿಂದೂಸ್ತಾನ್ ವರದಿ ತಿಳಿಸಿದೆ.