ಬಿಹಾರ| ಕಾಲೇಜಿನ ಕ್ಯಾಂಟೀನ್ ಊಟದಲ್ಲಿ ಸತ್ತ ಹಾವು ಪತ್ತೆ

Date:

ಬಿಹಾರದ ಬಂಕಾ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಟೀನ್‌ನ ಆಹಾರದಲ್ಲಿ ಸತ್ತ ಹಾವು ಪತ್ತೆಯಾಗಿದ್ದು, ಕನಿಷ್ಠ 11 ಮಂದಿ ವಿದ್ಯಾರ್ಥಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಕಳೆದ ವಾರ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕರ್ತವ್ಯದಲ್ಲಿದ್ದ ವೈದ್ಯರ ಪ್ರಕಾರ, ಗುರುವಾರ ರಾತ್ರಿ ಕೆಲವು ವಿದ್ಯಾರ್ಥಿಗಳು ಫುಡ್ ಪಾಯಿಸನಿಂಗ್ ಆಗಿರುವ ಬಗ್ಗೆ ದೂರು ನೀಡಿದ್ದು, ಬಳಿಕ ಅವರ ಆರೋಗ್ಯ ಸರಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆಹಾರದಲ್ಲಿ ಸತ್ತ ಹಾವು ಪತ್ತೆಯಾದ ಬೆನ್ನಲ್ಲೇ ಕ್ಯಾಂಟೀನ್ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆದಸಿದಾಗ ಕಾಲೇಜು ಸಿಬ್ಬಂದಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

“ನಾವು ಆಹಾರದ ಗುಣಮಟ್ಟದ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಆದರೆ ಈ ಬಾರಿಯನ್ನು ಮಿತಿಯನ್ನು ದಾಟಿದೆ. ಕ್ಯಾಂಟೀನ್‌ನ ಆಹಾರದಲ್ಲಿ ಸತ್ತ ಹಾವು ಪತ್ತೆಯಾಗಿದೆ” ಎಂದು ಎಂದು ವಿದ್ಯಾರ್ಥಿಯೊಬ್ಬರು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನು ಓದಿದ್ದೀರಾ?  ಇಂದಿರಾ ಕ್ಯಾಂಟೀನ್‌ಗಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಆಗ್ರಹ

“ಇದನ್ನೆಲ್ಲ ನಮ್ಮಿಂದ ಸಹಿಸಲಾಗದು. ಪ್ರತಿ ಬಾರಿ ನಾವು ಕ್ಯಾಂಟೀನ್ ಆಹಾರದ ಬಗ್ಗೆ ಅಧ್ಯಾಪಕರ ಮುಂದೆ ಪ್ರಸ್ತಾಪಿಸಿದಾಗ ಅವರು ಸಮಸ್ಯೆಯನ್ನು ಮುಚ್ಚಿಹಾಕಲು ಪ್ರಯತ್ನ ಮಾಡಿದ್ದಾರೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮತ್ತೊಂದೆಡೆ, “ವಿದ್ಯಾರ್ಥಿನಿಯರು ಕೂಡಾ ಆಹಾರ ಗುಣಮಟ್ಟವನ್ನು ಪ್ರಶ್ನಿಸಿದ್ದಾರೆ. ಕೆಲವು ಸಮಯದ ಹಿಂದೆ ಹಿರಿಯ ಅಧಿಕಾರಿಯೊಬ್ಬರು ತಪಾಸಣೆಗೆ ಬಂದಿದ್ದರು. ಆ ಸಂದರ್ಭದಲ್ಲಿ ಶೇಕಡ 90ರಷ್ಟು ಅವಧಿ ಮುಗಿದಿರುವ (expired) ಆಹಾರ ಪತ್ತೆಯಾಗಿದೆ” ಎಂದು ವಿದ್ಯಾರ್ಥಿನಿಯೊಬ್ಬರು ಹೇಳಿದ್ದಾರೆ.

ಇನ್ನು ವಿದ್ಯಾರ್ಥಿಗಳು ಹಾಸ್ಟೆಲ್‌ನ ಆಹಾರದ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ. ಹಾಸ್ಟೆಲ್‌ನಲ್ಲಿ ಉಳಿಯಬೇಕಾದರೆ ಮೆಸ್ ಆಹಾರ ಸೇವಿಸುವುದು ಕಡ್ಡಾಯವಾಗಿದೆ. ಒಂದಿ ವೇಳೆ ಮೆಸ್‌ನ ಆಹಾರ ಸೇವಿಸದಿದ್ದರೆ, ಮೆಸ್ ಶುಲ್ಕವನ್ನು ಪಾವತಿಸದಿದ್ದರೆ, ಅವರನ್ನು ಪರೀಕ್ಷೆಯಿಂದ ನಿರ್ಬಂಧಿಸಲಾಗುತ್ತದೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ವಿಜಯನಗರ | ಹಾವು ಕಚ್ಚಿ ಮಹಿಳೆಯರು ಸಾವು; ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯವಿಲ್ಲ ಎನ್ನುವ ವೈದ್ಯಾಧಿಕಾರಿ

ಸತ್ತ ಹಾವು ಪತ್ತೆಯಾದ ಘಟನೆಯ ಬಳಿಕ ಜಿಲ್ಲಾಡಳಿತ ಕ್ರಮ ಕೈಗೊಂಡು ತನಿಖೆ ಆರಂಭಿಸಿದೆ. ಇನ್ನು ಈ ಹಿಂದೆಯೂ ಸಹ ಕಾಲೇಜಿನಲ್ಲಿ ಇದೇ ರೀತಿಯ ಆಹಾರ ಸಂಬಂಧಿತ ದೂರು ದಾಖಲಾಗಿತ್ತು. ಈ ನಿಟ್ಟಿನಲ್ಲಿ ಆಡಳಿತವು ಈ ಬಗ್ಗೆ ತನಿಖೆ ನಡೆಸಿ ಕಾಲೇಜಿಗೆ ಸೂಚನೆ ನೀಡಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಹೇಳಿರುವುದಾಗಿ ಲೈವ್ ಹಿಂದೂಸ್ತಾನ್ ವರದಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...