3 ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕೊಲೆ; 65 ವರ್ಷದ ವೃದ್ಧನಿಗೆ ಗಲ್ಲು ಶಿಕ್ಷೆ

Date:

ಮಹಾರಾಷ್ಟ್ರದ ಪುಣೆ ಜಿಲ್ಲೆಯ ನಸ್ರಾಪುರ ಗ್ರಾಮದಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 65 ವರ್ಷದ ವೃದ್ಧನಿಗೆ ಪುಣೆಯ ವಿಶೇಷ ನ್ಯಾಯಾಲಯವು ಗರಿಷ್ಠ ಶಿಕ್ಷೆಯಾದ ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿದೆ. ಸಮಾಧಾನಕರ ಸಂಗತಿಯೆಂದರೆ, ಅಪರಾಧ ನಡೆದ ಕೇವಲ 60 ದಿನಗಳ ಒಳಗಾಗಿ ಈ ತ್ವರಿತ ತೀರ್ಪು ಹೊರಬಿದ್ದಿದೆ. ‘ಕೊನೆಯ ಬಾರಿಗೆ ಒಟ್ಟಿಗೆ ನೋಡಲಾಗಿತ್ತು’ ಎಂಬ ಪ್ರಾಸಿಕ್ಯೂಷನ್ ವಾದ ಹಾಗೂ ಬಲವಾದ ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಯನ್ನು ನ್ಯಾಯಾಲಯ ದೋಷಿ ಎಂದು ಘೋಷಿಸಿದೆ.

- Advertisement -

ಮೇ 1ರಂದು ಈ ಅಮಾನವೀಯ ಘಟನೆ ನಡೆದಿತ್ತು. ತಾಯಿಯ ತವರು ಮನೆಗೆ ಬಂದಿದ್ದ 3 ವರ್ಷದ ಕಂದಮ್ಮನನ್ನು ಪುಸಲಾಯಿಸಿ ಸಮೀಪದ ಹಟ್ಟಿಗೆ ಕರೆದೊಯ್ದಿದ್ದ ಆರೋಪಿ, ಅಲ್ಲಿಯೇ ಅತ್ಯಾಚಾರವೆಸಗಿ ಕೊಲೆ ಮಾಡಿದ್ದನು. ಬಾಲಕಿ ನಾಪತ್ತೆಯಾದಾಗ ಆಕೆಯ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ನಂತರ ಆಕೆಯ ಮೃತದೇಹ ಹಟ್ಟಿಯೊಳಗೆ ಪತ್ತೆಯಾಗಿತ್ತು. ಈ ಭೀಕರ ಘಟನೆಯು ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ನಸ್ರಾಪುರ ಹಾಗೂ ಪುಣೆಯ ಇತರ ಭಾಗಗಳಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ಜನರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಪ್ರಕರಣದ ತನಿಖೆ ಹಾಗೂ ವಿಚಾರಣೆಯನ್ನು ತ್ವರಿತಗತಿಯಲ್ಲಿ (ಫಾಸ್ಟ್ ಟ್ರ್ಯಾಕ್) ನಡೆಸಲಾಯಿತು. ಘಟನೆ ನಡೆದ ದಿನವೇ ಆರೋಪಿಯನ್ನು ಬಂಧಿಸಿದ ಪೊಲೀಸರು, ಕೇವಲ 16 ದಿನಗಳ ಒಳಗೆ 1,200 ಪುಟಗಳ ಬೃಹತ್ ದೋಷಾರೋಪಣಾ ಪಟ್ಟಿಯನ್ನು (ಚಾರ್ಜ್‌ಶೀಟ್) ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯವು ಮೇ 28ರಂದು ಆರೋಪ ನಿಗದಿಪಡಿಸಿತು. ಜೂನ್ 20ರಂದು ಅಂತಿಮ ವಾದ-ಪ್ರತಿವಾದಗಳು ಮುಕ್ತಾಯಗೊಂಡು, ಜೂನ್ 25ರಂದು ಆರೋಪಿಯನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಇದನ್ನು ಓದಿದ್ದೀರಾ? ‘ಆಕಾಶ ಕಳಚಿ ಬೀಳುವುದಿಲ್ಲ’: ರಾಮಮಂದಿರ ನಿಧಿ ದುರ್ಬಳಕೆಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

“ಇದು ಅತ್ಯಂತ ಗಂಭೀರ ಸ್ವರೂಪದ ಅಪರಾಧ. ಆರೋಪಿಯು ಈ ಹಿಂದೆಯೂ ಎರಡು ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದರೂ, ಆತನಲ್ಲಿ ಯಾವುದೇ ಪಶ್ಚಾತ್ತಾಪ ಅಥವಾ ಬದಲಾವಣೆಯ ಲಕ್ಷಣಗಳು ಕಂಡುಬಂದಿಲ್ಲ. ಆತ ಸಮಾಜಕ್ಕೆ ದೊಡ್ಡ ಕಂಟಕವಾಗಿದ್ದಾನೆ. ಆತನನ್ನು ತಿದ್ದುವ ಕಾಲ ಮೀರಿಹೋಗಿದೆ,” ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಕಟುವಾಗಿ ಪ್ರತಿಕ್ರಿಯಿಸಿದೆ.

ಆರೋಪಿ ಪರ ವಕೀಲ ಹಿಮ್ಮತ್ ರಾವ್ ಸೂರ್ಯವಂಶಿ ಅವರು, ದೃಢವಾದ ಸಾಕ್ಷ್ಯಗಳಿಲ್ಲ ಎಂಬ ವಾದ ಮುಂದಿಟ್ಟು, ಆರೋಪಿಯ ವಯಸ್ಸು ಮತ್ತು ಸಾಮಾಜಿಕ ಪ್ರತ್ಯೇಕತೆಯನ್ನು ಪರಿಗಣಿಸಿ ಇದು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ವಲ್ಲ, ಹೀಗಾಗಿ ಜೀವಾವಧಿ ಶಿಕ್ಷೆ ನೀಡುವಂತೆ ಕೋರಿದ್ದರು. ಆದರೆ, ಸರ್ಕಾರಿ ವಕೀಲ ಅಜಯ್ ಮಿಸಾರ್ ಅವರು ಅಪರಾಧದ ಕ್ರೂರತೆ ಮತ್ತು ಸಂತ್ರಸ್ತೆಯ ವಯಸ್ಸನ್ನು ಪರಿಗಣಿಸಿ ಗರಿಷ್ಠ ಶಿಕ್ಷೆ ನೀಡುವಂತೆ ಬಲವಾಗಿ ವಾದಿಸಿದ್ದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...