ದೇಬಾಶಿಶ್ ಶರ್ಮಾ: IAS ಹುದ್ದೆಗೆ ರಾಜೀನಾಮೆ ನೀಡಿದ 5 ದಿನದಲ್ಲೇ ಬಿಜೆಪಿ ಸೇರ್ಪಡೆ; 2 ದಿನದಲ್ಲೇ ಉಪಚುನಾವಣೆಗೆ ಅಭ್ಯರ್ಥಿ

Date:

ನಾಗಾಂವ್ ಜಿಲ್ಲಾ ಆಯುಕ್ತರ (DC) ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದ ಕೆವಲ 5 ದಿನಗಳಲ್ಲಿ ಮಾಜಿ ಐಎಎಸ್ ಅಧಿಕಾರಿ ದೇಬಾಶಿಶ್ ಶರ್ಮಾ ಅವರು ಬಿಜೆಪಿ ಸೇರಿದಿದ್ದರು. ಪಕ್ಷಕ್ಕೆ ಸೇರಿದ 2 ದಿನಗಳಲ್ಲೇ ಅವರಿಗೆ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್‌ ಕೊಟ್ಟಿದೆ. ಅಕ್ಟೋಬರ್ 6 ರಂದು ನಡೆಯಲಿರುವ ನಾಗಾಂವ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದೇಬಾಶಿಶ್ ಶರ್ಮಾ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

- Advertisement -

ಅಸ್ಸಾಂನ ನಾಗಾಂವ್ ಜಿಲ್ಲಾ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಶರ್ಮಾ ಅವರು ಸೆಪ್ಟೆಂಬರ್ 3 ರಂದು ತಮ್ಮ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ತದನಂತರ ಸೆಪ್ಟೆಂಬರ್ 8 ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಅವರು ಪಕ್ಷ ಸೇರಿದ ಕೇವಲ ಎರಡೇ ದಿನಗಳಲ್ಲಿ ಅವರಿಗೆ ಲೋಕಸಭಾ ಚುನಾವಣಾ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇನ್ನೊಂದೆಡೆ, ದೇಬಾಶಿಶ್ ಶರ್ಮಾ ಅವರ ವಿರುದ್ಧ ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ಅವರು ಅಸ್ಸಾಂ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಶರ್ಮಾ ಅವರು ನಾಗಾಂವ್ ಜಿಲ್ಲಾ ಆಯುಕ್ತರಾಗಿದ್ದ ಅವಧಿಯಲ್ಲಿ ಕೈಗೊಂಡಿದ್ದ ಹಲವು ಪ್ರಮುಖ ನಿರ್ಧಾರಗಳನ್ನು ಮರುಪರಿಶೀಲಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಈ ದೂರಿನ ಮೇಲಿನ ಮುಂದಿನ ಪರಿಶೀಲನೆ ಮತ್ತು ಮಾರ್ಗದರ್ಶನಕ್ಕಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನು ರವಾನಿಸಿದೆ.

ದೇಬಾಶಿಶ್ ಶರ್ಮಾ ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ, ಸಾರ್ವಜನಿಕ ಸಂಪರ್ಕ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1992ರಲ್ಲಿ ಅಸ್ಸಾಂ ಸಿವಿಲ್ ಸರ್ವಿಸ್ (ACS) ಸೇರ್ಪಡೆಯಾಗಿದ್ದರು. ಅಂದಿನ, ಅಸ್ಸಾಂ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಎಸ್. ಕೆ. ಸಿನ್ಹಾ ಅವರ ವಿಶೇಷ ಅಧಿಕಾರಿಯಾಗಿ (OSD) ಮತ್ತು ಮುಂಬೈನ ಅಸ್ಸಾಂ ಭವನದ ಉಪ ಸ್ಥಾನಿಕ ಆಯುಕ್ತರಾಗಿ ಮಹಾರಾಷ್ಟ್ರದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದರು.

ಗುವಾಹಟಿ ಮುನ್ಸಿಪಲ್ ಕಾರ್ಪೊರೇಷನ್ ಆಯುಕ್ತರಾಗಿ, ಮೊರಿಗಾಂವ್ ಜಿಲ್ಲಾ ಆಯುಕ್ತರಾಗಿ ಸೇವೆ ಸಲ್ಲಿಸಿದ ಬಳಿಕ ನಾಗಾಂವ್ ಜಿಲ್ಲಾ ಆಯುಕ್ತರಾಗಿ ವರ್ಗಾವಣೆಯಾಗಿದ್ದರು. ಅಲ್ಲಿಂದಲೇ ಅವರು ಸ್ವಯಂ ನಿವೃತ್ತಿ ಪಡೆದಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ನಾಗಾಂವ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರದ್ಯುತ್ ಬೊರ್ದೊಲೊಯ್ ಗೆಲುವು ಸಾಧಿಸಿದ್ದರು. ಆದರೆ, ತದನಂತರ ಅವರು ಬಿಜೆಪಿ ಸೇರ್ಪಡೆಯಾಗಿ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ದಿಸ್ಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಇದರಿಂದಾಗಿ ತೆರವಾಗಿದ್ದ ನಾಗಾಂವ್ ಲೋಕಸಭಾ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು ‘ರನ್‌ಆಫ್’ ವ್ಯವಸ್ಥೆ, ಭಾರತಕ್ಕೂ ಇದು ಅಗತ್ಯವೇ?

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...