ಅದಾನಿ ಮೇಲಿನ ಆರೋಪ ಕೈಬಿಟ್ಟ ನಿರ್ಧಾರಕ್ಕೆ ಅಮೆರಿಕದಲ್ಲಿನ ಹೂಡಿಕೆ ಕಾರಣವಲ್ಲ: ನ್ಯಾಯಾಂಗ ಇಲಾಖೆ

Date:

ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಇತರ 7 ಮಂದಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಶಾಶ್ವತವಾಗಿ ಕೈಬಿಡುವ ತನ್ನ ನಿರ್ಧಾರವನ್ನು ಅಮೆರಿಕದ ನ್ಯಾಯಾಂಗ ಇಲಾಖೆ (DOJ) ಸಮರ್ಥಿಸಿಕೊಂಡಿದೆ. ಈ ಪ್ರಕರಣವನ್ನು ದಾಖಲಿಸಬಾರದಿತ್ತು ಅಥವಾ ಕನಿಷ್ಠ 1 ವರ್ಷದ ಹಿಂದೆಯೇ ಸಂಪೂರ್ಣವಾಗಿ ಕೈಬಿಡಬೇಕಿತ್ತು ಎಂದು ಫೆಡರಲ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಇಲಾಖೆ ತಿಳಿಸಿದೆ.

- Advertisement -

ಅದಾನಿ ಸಮೂಹವು ಅಮೆರಿಕದಲ್ಲಿ ಬೃಹತ್ ಪ್ರಮಾಣದ ಹೂಡಿಕೆ ಮಾಡುವ ಭರವಸೆ ನೀಡಿದ್ದರಿಂದಲೇ ಪ್ರಕರಣವನ್ನು ವಜಾಗೊಳಿಸಲಾಗುತ್ತಿದೆ ಎಂಬ ಮಾಧ್ಯಮಗಳ ವರದಿಗಳನ್ನು ನ್ಯಾಯಾಂಗ ಇಲಾಖೆ ಸಂಪೂರ್ಣವಾಗಿ ತಳ್ಳಿಹಾಕಿದೆ. ಆರೋಪ ಮುಕ್ತಗೊಳಿಸುವ ನಿರ್ಧಾರಕ್ಕೂ ಮತ್ತು ಅದಾನಿ ಸಮೂಹದ ಭವಿಷ್ಯದ ವಾಣಿಜ್ಯ ಹೂಡಿಕೆಗಳಿಗೂ ಯಾವುದೇ ಸಂಬಂಧವಿಲ್ಲ; ಇಂತಹ ವರದಿಗಳು ಸಂಪೂರ್ಣ ಸುಳ್ಳು ಮತ್ತು ಕೇವಲ ಊಹಾಪೋಹಗಳಾಗಿವೆ ಎಂದು ಇಲಾಖೆಯು ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಇಲಾಖೆ ಸಲ್ಲಿಸಿದ್ದ ಅರ್ಜಿಯ ಕುರಿತು ವಿವರಿಸುವಂತೆ ಅಮೆರಿಕದ ಜಿಲ್ಲಾ ನ್ಯಾಯಾಧೀಶರಾದ ನಿಕೋಲಸ್ ಗರೌಫಿಸ್ ಸೂಚಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನ ಸಹಾಯಕ ಉಪ ಅಟಾರ್ನಿ ಜನರಲ್ ಆರ್. ಟ್ರೆಂಟ್ ಮೆಕ್ಕೊಟರ್ 10 ಪುಟಗಳ ಸುದೀರ್ಘ ಅಫಿಡವಿಟ್ ಸಲ್ಲಿಸಿದ್ದಾರೆ. 2024 ರಲ್ಲಿ ಹಿಂದಿನ ಬೈಡನ್ ಆಡಳಿತದಲ್ಲಿ ದಾಖಲಾಗಿದ್ದ ಈ ಪ್ರಕರಣವು ಕಾನೂನಾತ್ಮಕವಾಗಿ ದೋಷಪೂರಿತವಾಗಿದೆ ಹಾಗೂ ರಾಜತಾಂತ್ರಿಕವಾಗಿ ಪ್ರತಿಕೂಲವಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಶಾಶ್ವತವಾಗಿ ವಜಾಗೊಳಿಸಲು ಪ್ರಮುಖವಾಗಿ 6 ಕಾರಣಗಳನ್ನು ನ್ಯಾಯಾಂಗ ಇಲಾಖೆ ಪಟ್ಟಿ ಮಾಡಿದೆ. ಈ ಆರೋಪಿತ ಘಟನೆಗಳು ಸಂಪೂರ್ಣವಾಗಿ ಭಾರತದಲ್ಲಿ ನಡೆದಿವೆ ಹಾಗೂ ಭಾರತೀಯ ತನಿಖಾ ಸಂಸ್ಥೆಗಳು ತನಿಖೆ ನಡೆಸಿ ಯಾವುದೇ ಕಾನೂನುಬಾಹಿರ ದುರ್ನಡತೆ ನಡೆದಿಲ್ಲ ಎಂಬುದನ್ನು ಖಚಿತಪಡಿಸಿವೆ. ಜೊತೆಗೆ, ಈ ಪ್ರಕರಣದಿಂದ ಅಮೆರಿಕದ ಹೂಡಿಕೆದಾರರಿಗೆ ಯಾವುದೇ ಆರ್ಥಿಕ ನಷ್ಟವಾಗಿಲ್ಲ. 250 ದಶಲಕ್ಷ ಡಾಲರ್ (ಸುಮಾರು 2,075 ಕೋಟಿ ರೂ.) ಲಂಚದ ಆರೋಪಗಳು ಕ್ರಿಮಿನಲ್ ಮೊಕದ್ದಮೆಗೆ ಏನೇನೂ ಅರ್ಹವಾಗಿಲ್ಲ ಎಂದು ಇಲಾಖೆ ಉಲ್ಲೇಖಿಸಿದೆ.

ಈಗಾಗಲೇ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (SEC) ಜೊತೆಗಿನ ಸಿವಿಲ್ ಆರೋಪಗಳನ್ನು ಇತ್ಯರ್ಥಪಡಿಸಲು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರು 18 ದಶಲಕ್ಷ ಡಾಲರ್(ಅಂದಾಜು 150 ಕೋಟಿ ರೂ) ದಂಡ ಪಾವತಿಸಲು ಸಮ್ಮತಿಸಿದ್ದಾರೆ. ಈ ಪ್ರಕರಣವನ್ನು ಮುಂದುವರಿಸುವುದರಿಂದ ಆರೋಪಿಗಳು ವಿನಾಕಾರಣ ಅತಂತ್ರ ಸ್ಥಿತಿಯಲ್ಲಿ ಉಳಿಯಬೇಕಾಗುತ್ತದೆ ಹಾಗೂ ಸರ್ಕಾರದ ಸಮಯವೂ ವ್ಯರ್ಥವಾಗುತ್ತದೆ. ಆದ್ದರಿಂದ ಅವರ ಮೇಲಿನ ಆರೋಪಗಳನ್ನು ಶಾಶ್ವತವಾಗಿ ಕೈಬಿಡಬೇಕು ಎಂದು ಇಲಾಖೆಯು ನ್ಯಾಯಾಧೀಶರನ್ನು ಬಲವಾಗಿ ಒತ್ತಾಯಿಸಿದೆ.

ಹೀಗಿದ್ದರೂ, ಅದಾನಿ ಸಮೂಹವು ಅಮೆರಿಕದಲ್ಲಿ ಬೃಹತ್ ಮೊತ್ತದ ಹೂಡಿಕೆ ಮಾಡಿದ್ದಕ್ಕಾಗಿ ಮತ್ತು ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದಕ್ಕಾಗಿಯೇ ಅವರ ಮೇಲಿನ ಈ ಗಂಭೀರ ಪ್ರಕರಣಗಳನ್ನು ದಿಢೀರನೆ ಕೈಬಿಡಲಾಗಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅಮೆರಿಕದ ನ್ಯಾಯಾಂಗ ಇಲಾಖೆಯು ಈ ನಿರ್ಧಾರವನ್ನು ಎಷ್ಟೇ ಸಮರ್ಥಿಸಿಕೊಂಡರೂ, ಕೇವಲ ಆರ್ಥಿಕ ಹಿತಾಸಕ್ತಿ ಹಾಗೂ ಅಮೆರಿಕದ ಒಳಗಿನ ಹೂಡಿಕೆಯ ಪ್ರಭಾವದಿಂದಾಗಿಯೇ ಅದಾನಿ ಅವರಿಗೆ ಕಾನೂನಿನಿಂದ ವಿನಾಯಿತಿ ನೀಡಲಾಗಿದೆ ಎಂದು ಎಲ್ಲೆಡೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...