ಅಕ್ರಮ ವಲಸಿಗರೆಂದು ಘೋಷಣೆ: ಅಸ್ಸಾಂನ ಐವರು ಮಹಿಳೆಯರ ಗಡೀಪಾರಿಗೆ ಸುಪ್ರೀಂ ತಡೆ

Date:

ಅಸ್ಸಾಂನಲ್ಲಿ ಐವರು ಮಹಿಳೆಯರನ್ನು ‘ಅಕ್ರಮ ವಲಸಿಗರು’ ಎಂದು ಘೋಷಿಸಿರುವ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡಲು ಸುಪ್ರೀಂ ಕೋರ್ಟ್, ಅಸ್ಸಾಂ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.

- Advertisement -

ಈ ಕುರಿತಂತೆ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರಿದ್ದ ಪೀಠವು ಜುಲೈ 16ರಂದು ಆದೇಶ ಹೊರಡಿಸಿದೆ. ಅರ್ಜಿದಾರರ ಪರ ವಕೀಲರು ಈ ಪ್ರಕರಣದ ಗಂಭೀರತೆಯನ್ನು ಗಮನಕ್ಕೆ ತಂದಿದ್ದು, ಆ ಪೈಕಿ ಇಬ್ಬರು ಮಹಿಳೆಯರು ಈಗಾಗಲೇ ಬಂಧನದಲ್ಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಗುವಾಹಟಿ ಹೈಕೋರ್ಟ್ ಈ ಮಹಿಳೆಯರನ್ನು ವಿದೇಶಿಯರು ಎಂದು ಘೋಷಿಸಿದ್ದ ವಿದೇಶಿಯರ ನ್ಯಾಯಮಂಡಳಿಯ (Foreigners Tribunals) ಆದೇಶವನ್ನು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸದರಿ ಮಹಿಳೆಯರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ಜೂನ್ 5ರಂದು ಸುಪ್ರೀಂ ಕೋರ್ಟ್, ಈ ಅರ್ಜಿದಾರರ ಗಡೀಪಾರು ಪ್ರಕ್ರಿಯೆಗೆ ತಡೆ ನೀಡಿ ‘ಯಥಾಸ್ಥಿತಿ’ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು.

ಅರ್ಜಿದಾರರ ಪರ ವಕೀಲರು, ಇದೇ ಜುಲೈ 13ರಂದು ಸುಪ್ರೀಂ ಕೋರ್ಟ್ ನೀಡಿದ ಮತ್ತೊಂದು ಮಹತ್ವದ ತೀರ್ಪನ್ನು ಉಲ್ಲೇಖಿಸಿದರು. ಆ ತೀರ್ಪಿನಲ್ಲಿ, “ಒಬ್ಬ ವ್ಯಕ್ತಿಯ ಪೌರತ್ವದ ಸ್ಥಿತಿಯನ್ನು ನಿರ್ಧರಿಸುವ ಪ್ರಕ್ರಿಯೆಯು ನ್ಯಾಯಯುತ, ಕಾನೂನುಬದ್ಧ ಮತ್ತು ಸಮಂಜಸವಾಗಿರಬೇಕು” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ: ಆಮೀರ್ ಖಾನ್ ವಿವಾಹ ವಿವಾದ; ವೈಯಕ್ತಿಕ ವಿಷಯಗಳು ಸಾರ್ವಜನಿಕ ಚರ್ಚೆಗಳಾದಾಗ…

ಕಳೆದ 13ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್, “ಅಕ್ರಮವಾಗಿ ಭಾರತ ಪ್ರವೇಶಿಸಿದವರನ್ನು ಗುರುತಿಸಿ ಕ್ರಮ ಕೈಗೊಳ್ಳುವುದು ರಾಜ್ಯದ ಕಾನೂನುಬದ್ಧ ಹಿತಾಸಕ್ತಿಯಾಗಿದೆ. ಆದರೆ, ಪೌರತ್ವವನ್ನು ಕಸಿದುಕೊಳ್ಳುವ ಅಥವಾ ನಿರ್ಧರಿಸುವ ಪ್ರಕ್ರಿಯೆಯು ದೋಷಪೂರಿತವಾಗಿರಬಾರದು. ಯಾವುದೇ ಸುಳ್ಳು ಆರೋಪಗಳು ಅಥವಾ ಪ್ರಕ್ರಿಯೆಯ ವಿಳಂಬದ ಮೂಲಕ ಯಾರೂ ಭಾರತೀಯ ಪೌರತ್ವವನ್ನು ಪಡೆಯಬಾರದು” ಎಂದು ಹೇಳಿತ್ತು.

ಇದೀಗ, ಈ ಐವರು ಮಹಿಳೆಯರ ಪ್ರಕರಣದಲ್ಲಿ ಅಸ್ಸಾಂ ಸರ್ಕಾರಕ್ಕೆ ತನ್ನ ವಾದವನ್ನು ಮಂಡಿಸಲು ಮತ್ತು ಅಫಿಡವಿಟ್ ಸಲ್ಲಿಸಲು ನ್ಯಾಯಾಲಯ ಎರಡು ವಾರಗಳ ಅವಕಾಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆ ಎರಡು ವಾರಗಳ ನಂತರ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ...

‘ನೆಹರೂ–ಗಾಂಧಿ, ಯಾದವ್ ಕುಟುಂಬಗಳ ನಾಯಕತ್ವ ಬೇಡ’: ಒವೈಸಿ ಹೇಳಿಕೆಗೆ ವಿಪಕ್ಷಗಳ ತೀವ್ರ ಆಕ್ರೋಶ

ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು...

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...