ಕುಸಿಯುತ್ತಿರುವ ಜನನ ದರ; 3-4 ಮಕ್ಕಳಿಗೆ ಜನ್ಮ ನೀಡಿ: ಛತ್ತೀಸ್‌ಗಢ ಆರೋಗ್ಯ ಸಚಿವರ ವಿವಾದಾತ್ಮಕ ಹೇಳಿಕೆ!

Date:

ಛತ್ತೀಸ್‌ಗಢದಲ್ಲಿ ನಿರಂತರವಾಗಿ ಒಟ್ಟು ಫಲವತ್ತತೆ ದರದ (Total Fertility Rate – TFR) ಅಂದರೆ ಮಕ್ಕಳ ಜನನ ಪ್ರಮಾಣ ಕುಸಿತ ಕಾಣುತ್ತಿದೆ. ಈ ಬಗ್ಗೆ ಛತ್ತೀಸ್‌ಗಢ ಆರೋಗ್ಯ ಸಚಿವ ಶ್ಯಾಮ್ ಬಿಹಾರಿ ಜೈಸ್ವಾಲ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ವೇಳೆಯೇ ಪ್ರಸ್ತುತ ಜನಸಂಖ್ಯಾ ಪರಿಸ್ಥಿತಿಯಲ್ಲಿ ದಂಪತಿಗಳು ಮೂರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವುದರಿಂದ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ.

- Advertisement -

ಮನೇಂದ್ರಗಢದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಆರೋಗ್ಯ ಸಚಿವ ಜೈಸ್ವಾಲ್, ಛತ್ತೀಸ್‌ಗಢದ ಒಟ್ಟು ಫಲವತ್ತತೆ ದರ (ಟಿಎಫ್‌ಆರ್) ಪ್ರಸ್ತುತ 1.8 ಕ್ಕೆ ಇಳಿದಿದೆ. ರಾಜ್ಯದ ಫಲವತ್ತತೆ ದರವು ರಾಷ್ಟ್ರೀಯ ಸರಾಸರಿಯಾದ 2.2 ಕ್ಕೆ ತಲುಪಬೇಕೆಂಬುದು ತಮ್ಮ ಆಶಯವಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಇದನ್ನೂ ಓದಿ: ಛತ್ತೀಸ್‌ಗಢ | ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌!

ಹಾಗೆಯೇ, “ಇಂದಿನ ಜನಸಂಖ್ಯಾ ಪರಿಸ್ಥಿತಿಯಲ್ಲಿ ಎರಡಕ್ಕಿಂತ ಹೆಚ್ಚು ಅಂದರೆ ಮೂರು ಅಥವಾ ನಾಲ್ಕು ಮಕ್ಕಳನ್ನು ಪಡೆಯುವುದರಿಂದ ಯಾವುದೇ ತೊಂದರೆಯಿಲ್ಲ ಎಂದು ಅಭಿಪ್ರಾಯಿಸಿದರು. ಜತೆಗೆ, ನಾವೀಗ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒತ್ತಡ ಹೇರುತ್ತಿಲ್ಲ, ಆಮಿಷ ಒಡ್ಡುತ್ತಿಲ್ಲ. ಸ್ವಯಂಪ್ರೇರಿತವಾಗಿ ಮುಂದೆ ಬರುವವರಿಗೆ ಮಾತ್ರ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಸರಾಸರಿ ಒಟ್ಟು ಫಲವತ್ತತೆ ದರ 2.2 ಇದೆ ಎಂದು ಸಚಿವರು ಹೇಳಿದ್ದರೂ, ಮಾದರಿ ನೋಂದಣಿ ವ್ಯವಸ್ಥೆಯ (SRS) ಇತ್ತೀಚಿನ ಅಂಕಿಅಂಶಗಳು ಇದಕ್ಕೆ ವ್ಯತಿರಿಕ್ತವಾಗಿವೆ. ಈ ವರದಿಯ ಪ್ರಕಾರ ದೇಶದಲ್ಲಿ ಪ್ರಸ್ತುತ ಒಟ್ಟು ಫಲವತ್ತತೆ ದರ 1.9 ಕ್ಕೆ ಇಳಿದಿದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS-5) ಪ್ರಕಾರ ಛತ್ತೀಸ್‌ಗಢದ ಒಟ್ಟು ಫಲವತ್ತತೆ ದರ 1.8 ದಾಖಲಾಗಿದೆ.

ಆರೋಗ್ಯ ಸಚಿವರ ಈ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ರಾಜ್ಯದ ಹದಗೆಟ್ಟ ಸಾರ್ವಜನಿಕ ಆರೋಗ್ಯ ಮೂಲಸೌಕರ್ಯವನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ. ಜನಸಂಖ್ಯೆ ಹೆಚ್ಚಿಸುವ ಬಗ್ಗೆ ನಿಮಗೇಕೆ ಇಷ್ಟೊಂದು ಗೀಳು” ಎಂದು ಪ್ರಶ್ನಿಸಿದ್ದಾರೆ.

“ಜನಸಂಖ್ಯೆ ಹೆಚ್ಚಾದರೂ ನಿಮ್ಮ ಮತದಾರರು ಕಡಿಮೆಯಾಗುತ್ತಿದ್ದಾರೆ! ಬದುಕಿರುವ ಜನರಿಗೆ ಔಷಧಿಗಳನ್ನು ನೀಡಲು ನಿಮ್ಮಿಂದ ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ, ಔಷಧಿಗಳಿಲ್ಲ, ವೈದ್ಯಕೀಯ ಕಾಲೇಜುಗಳಲ್ಲಿ ಪ್ರಾಧ್ಯಾಪಕರಿಲ್ಲ. ಮೊದಲು ನಿಮ್ಮ ಆಡಳಿತದ ಬಗ್ಗೆ ಚಿಂತಿಸಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ನೆಟ್ಟಿಗರ ತೀವ್ರ ಆಕ್ರೋಶ

ಛತ್ತೀಸ್‌ಗಢ ಆರೋಗ್ಯ ಸಚಿವರ ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜನಸಂಖ್ಯೆಯ ಅಂಕಿಅಂಶಗಳನ್ನು ಸರಿದೂಗಿಸಲು ಮಹಿಳೆಯರನ್ನು ಕೇವಲ ಮಕ್ಕಳನ್ನು ಹೆರುವ ಯಂತ್ರಗಳಂತೆ ನೋಡಲಾಗುತ್ತಿದೆ. ಹೆಚ್ಚು ಮಕ್ಕಳನ್ನು ಹೆರುವುದರಿಂದ ಮಹಿಳೆಯರ ದೈಹಿಕ, ಮಾನಸಿಕ ಆರೋಗ್ಯದ ಮೇಲಾಗುವ ಸಮಸ್ಯೆಗಳ ಬಗ್ಗೆ ಆರೋಗ್ಯ ಸಚಿವರೇ ಯೋಚಿಸದೆ ಇರುವುದು ವಿಪರ್ಯಾಸ ಎಂದು ನೆಟ್ಟಿಗರು ಟೀಕಿಸಿದ್ದಾರೆ.

ಹಾಗೆಯೇ, “ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಹೆರಿಗೆ ಸೌಲಭ್ಯ, ವೈದ್ಯರು ಮತ್ತು ಔಷಧಿಗಳೇ ಇಲ್ಲ. ಹೀಗಿರುವಾಗ ಹೆಚ್ಚು ಮಕ್ಕಳನ್ನು ಹೆರಲು ಆರೋಗ್ಯ ಸಚಿವರು ಹೇಳುತ್ತಿದ್ದಾರೆ. ಬೆಲೆ ಏರಿಕೆ, ಶಿಕ್ಷಣ-ಆರೋಗ್ಯ ವೆಚ್ಚ ಹೆಚ್ಚಳದ ನಡುವೆ ಸಾಮಾನ್ಯ ಕುಟುಂಬಗಳು 3-4 ಮಕ್ಕಳನ್ನು ಸಾಕುವುದು ಹೇಗೆ? ಸರ್ಕಾರವೇ ಈ ಮಕ್ಕಳ ವೆಚ್ಚವನ್ನು ಭರಿಸುತ್ತದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರೀಕ್ಷೆಗಳಲ್ಲಿ ನಾಗರಿಕರನ್ನು ಧ್ವಂಸ ಮಾಡಬೇಕಿರುವ ಮಿಲಿಟರಿ ಟಾರ್ಗೆಟ್‌ಗಳು ಎಂದು ಗುರುತಿಸಿದ AI ಮಾಡೆಲ್‌ಗಳು

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಯುದ್ಧಭೂಮಿಯಲ್ಲಿ ಮುಕ್ತವಾಗಿ ಬಳಕೆಯಾದರೆ ಭವಿಷ್ಯದಲ್ಲಿ ಎದುರಾಗಬಹುದಾದ...

ಮನಿಲಾ: ಪತ್ರಕರ್ತರ ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಮೋದಿ ಪೇಚಾಟ; ವಿಡಿಯೋ ವೈರಲ್!

23ನೇ ಆಸಿಯಾನ್-ಭಾರತ ಶೃಂಗಸಭೆ ಹಾಗೂ 21ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...