ಕತಾರ್: 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ

Date:

ಕಳೆದ ಒಂದು ವರ್ಷದ ಹಿಂದೆ ಬಂಧಿತರಾಗಿದ್ದ 8 ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಕತಾರ್‌ ನ್ಯಾಯಾಲಯವು ಮರಣದಂಡನೆ ವಿಧಿಸಲಾಗಿದ್ದು, ತೀರ್ಪಿಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದೆ.

- Advertisement -

ಮಾಧ್ಯಮ ವರದಿಗಳ ಪ್ರಕಾರ, ನೌಕಾಪಡೆಯ ಮಾಜಿ ಅಧಿಕಾರಿಗಳು ಇಸ್ರೇಲ್ ಪರವಾಗಿ ಜಲಾಂತರ್ಗಾಮಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಬೇಹುಗಾರಿಕೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಕತಾರ್ ಅಧಿಕಾರಿಗಳು ಹೆಚ್ಚುವರಿಯಾಗಿ ಈ ವಿಷಯಕ್ಕೆ ಸಂಬಂಧಿಸಿದ ಎಲೆಕ್ಟ್ರಾನಿಕ್ ಪುರಾವೆಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

“ನಾವು ಮರಣದಂಡನೆಯ ತೀರ್ಪಿನಿಂದ ತೀವ್ರವಾಗಿ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಸಿಬ್ಬಂದಿಯ ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ. ಅಲ್ಲದೆ ಎಲ್ಲ ಕಾನೂನು ಆಯ್ಕೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆ ತಿಳಿಸಿದೆ.

“ನಾವು ಈ ಪ್ರಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ. ಅಲ್ಲದೆ ಎಲ್ಲ ಕಾನೂನು ಪರಿಣಿತರ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತೇವೆ. ನಾವು ಕತಾರ್‌ ಅಧಿಕಾರಿಗಳೊಂದಿಗೆ ತೀರ್ಪನ್ನು ತರಿಸಿಕೊಳ್ಳುತ್ತೇವೆ. ಪ್ರಕರಣವು ಗೌಪ್ಯ ಸ್ವರೂಪದ ಕಾರಣ, ಈ ಹಂತದಲ್ಲಿ ಯಾವುದೇ ಹೆಚ್ಚಿನ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ” ಎಂದು ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಮಿತ್ ಶಾ, ಹಿಮಂತ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಕತಾರ್‌ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ಇಸ್ರೇಲ್‌ಗೆ ಗೂಢಚಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಆಗಸ್ಟ್ 2022 ರಲ್ಲಿ ಬಂಧಿಸಲಾಗಿತ್ತು.

ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಾದ ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಅಮಿತ್ ನಾಗ್ಪಾಲ್, ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಸಂಜೀವ್ ಗುಪ್ತಾ ಮತ್ತು ನಾವಿಕ ರಾಗೇಶ್ ಅವರನ್ನು 2022ರ ಆಗಸ್ಟ್ 30 ರಂದು ಕತಾರ್ ಗುಪ್ತಚರ ಸಂಸ್ಥೆ ದೋಥಾದಿಂದ ಬಂಧಿಸಲಾಗಿತ್ತು.

ನೌಕಾಪಡೆಯ ಯೋಧರ ಜಾಮೀನು ಅರ್ಜಿಗಳನ್ನು ಕತಾರಿ ಅಧಿಕಾರಿಗಳು ಹಲವಾರು ಬಾರಿ ತಿರಸ್ಕರಿಸಿದರು. ಕತಾರ್‌ನ ಪ್ರಥಮ ಹಂತದ ನ್ಯಾಯಾಲಯವು ಮರಣದಂಡನೆಯನ್ನು ಬುಧವಾರ (ಅ.26) ಘೋಷಿಸಿತು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಸೂದ್ ಅಜರ್ ತಲೆಗೆ 70 ಲಕ್ಷ ಬಹುಮಾನ ಘೋಷಿಸಿದ ಪಾಕ್: ‘ಕಣ್ಣೊರೆಸುವ ನಾಟಕ’ ಎಂದ ಭಾರತ

ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಹಿಡಿದುಕೊಟ್ಟವರಿಗೆ ನೀಡುವ...

ಒರಾಕಲ್‌ಗೆ ಎಐ ಹೊಡೆತ: ಕೆಲಸ‌ ಕಳೆದುಕೊಂಡ ಸಾವಿರಾರು ಉದ್ಯೋಗಿಗಳು

ಜಾಗತಿಕ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್ ದೈತ್ಯ 'ಒರಾಕಲ್' ಸಂಸ್ಥೆಯು ತನ್ನ ಜಾಗತಿಕ...