ʼನ್ಯೂಸ್‌ಲಾಂಡ್ರಿʼ ಪತ್ರಕರ್ತೆಯರ ವಿರುದ್ಧ ಮಾನಹಾನಿ; ಪೋಸ್ಟ್‌ಗಳನ್ನು ಅಳಿಸಲು ಅಭಿಜಿತ್ ಅಯ್ಯರ್‌ಗೆ ಹೈಕೋರ್ಟ್ ತಾಕೀತು

Date:

ನ್ಯೂಸ್‌ಲಾಂಡ್ರಿ ಕಾರ್ಯನಿರ್ವಾಹಕ ಸಂಪಾದಕಿ ಮನೀಷಾ ಪಾಂಡೆ ಮತ್ತು ಇತರ ಎಂಟು ಪತ್ರಕರ್ತೆಯರ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದ ಬಲಪಂಥೀಯ ಲೇಖಕ ಅಭಿಜಿತ್ ಅಯ್ಯರ್ ಮಿತ್ರ ಅವರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಐದು ಗಂಟೆಗಳೊಳಗೆ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಬೇಕು. ಇಲ್ಲದಿದ್ದಾರೆ, ಎಫ್‌ಐಆರ್‌ ದಾಖಲಿಸಲು ಆದೇಶಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

- Advertisement -

ಅಭಿಜಿತ್ ಅಯ್ಯರ್ ವಿರುದ್ಧ ನ್ಯೂಸ್‌ಲ್ಯಾಂಡ್ರಿಯ ಪತ್ರಕರ್ತೆಯರು ಮೊಕದ್ದಮೆ ದಾಖಲಿಸಿದ್ದಾರೆ. ಆರೋಪಿ ಅಭಿಜಿತ್ ಲಿಖಿತವಾಗಿ ಕ್ಷಮೆಯಾಚಿಸಬೇಕು ಮತ್ತು 2 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಮೊಕದ್ದಮೆಯಲ್ಲಿ ನ್ಯಾಯಾಲಯವನ್ನು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಾಲಯವು ಅಭಿಜಿತ್ ಅವರು ಪತ್ರಕರ್ತೆಯರನ್ನು ವೇಶ್ಯೆಯರು ಎಂದು, ನ್ಯೂಸ್‌ಲ್ಯಾಂಡ್ರಿಯನ್ನು ವೇಶ್ಯಾಗೃಹವೆಂದೂ ಕರೆದಿದ್ದಾರೆ ಎಂಬುದನ್ನು ಗಮನಿಸಿದೆ. ಅಭಿಜಿತ್ ಅಯ್ಯರ್ ಅವರು ಸಾಮಾಜಿಕ ಜಾಲತಾನದಲ್ಲಿ ಹಾಕಿರುವ ಪೋಸ್ಟ್‌ಗಳನ್ನು ‘ಯಾವುದೇ ನಾಗರಿಕ ಸಮಾಜವು ಸಹಿಸುವುದಿಲ್ಲ. ಇಂತಹ ಪೋಸ್ಟ್‌ಗಳು ಸಮಾಜಕ್ಕೆ ಮಾರಕ ಎಂದು ಕೋರ್ಟ್‌ ಹೇಳಿದೆ.

ಈ ವರದಿ ಓದಿದ್ದೀರಾ?: ಸಂವಿಧಾನವೇ ಸುಪ್ರೀಂ: ಧನಕರ್‌ಗೆ ಸಿಜೆಐ ಪವರ್‌ಫುಲ್ ಕ್ಲಾಸ್‌

“ನಾಗರಿಕ ಸಮಾಜದಲ್ಲಿ ಮಹಿಳೆಯರ ವಿರುದ್ಧ ಅಭಿಜಿತ್ ಬಳಸಿರುವ ಭಾಷೆ ಮತ್ತು ಪದಗಳ ಬಳಕೆಯನ್ನು ಅನುಮತಿಸಬಹುದೇ? ಅಂತಹ ಪದ ಬಳಸಿರುವ ಅಭಿಜಿತ್ ವಿರುದ್ಧ ಸ್ವಯಂಪ್ರೇರಿತವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಲು ನಾವು ನಿರ್ದೇಶಿಸಬಹುದು” ಎಂದು ನ್ಯಾಯಾಲಯ ಹೇಳಿದೆ.

ಆರೋಪಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರು, ಪೋಸ್ಟ್‌ಗಳನ್ನು 5 ಗಂಟೆಗಳ ಒಳಗೆ ತೆಗೆದುಹಾಕುವುದಾಗಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...