ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

Date:

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸುಮಾರು 200 ಪ್ರಯಾಣಿಕರು ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಸೋಮವಾರ ಬೆಳಗ್ಗೆ ಮತ್ತು ಸಂಜೆ ದುಬೈಗೆ ಹೊರಡಬೇಕಿದ್ದ SG 5111 ಮತ್ತು SG 5105 ವಿಮಾನಗಳ ಹಾರಾಟದ ಸಮಯವನ್ನು ಬದಲಾಯಿಸಲಾಗಿತ್ತು. ಇದರಿಂದಾಗಿ ಹಲವು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಸಿಲುಕಿಕೊಂಡು ತೊಂದರೆ ಅನುಭವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸೋಮವಾರ ಸಂಜೆ ಬಳಿಕ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌-3ರಲ್ಲಿ ವಿವಿಧೆಡೆ ಪ್ರಯಾಣಿಕರು ಪ್ರತಿಭಟನೆ ನಡೆಸಿದರು. ಈ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಪೈಸ್‌ಜೆಟ್‌ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಮಾನ ವಿಳಂಬದ ಕುರಿತು ಸ್ಪೈಸ್‌ಜೆಟ್‌ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, ಪ್ರಯಾಣಿಕರಿಗೆ ಉಂಟಾದ ಅನಾನುಕೂಲಕ್ಕೆ ವಿಷಾದ ವ್ಯಕ್ತಪಡಿಸಿ, ಪರ್ಯಾಯ ವಿಮಾನಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಒಂದು ವಿಮಾನವನ್ನು ಹಾರಾಟದಿಂದ ತಡೆಹಿಡಿದ ಕಾರಣ ಉಂಟಾದ ಕಾರ್ಯಾಚರಣೆಯಲ್ಲಿನ ವ್ಯತ್ಯಯದಿಂದಾಗಿ SG 5111 ಮತ್ತು SG 5105 ವಿಮಾನಗಳ ಹಾರಾಟ ವಿಳಂಬವಾಗಿದೆ. ವಿಳಂಬದಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಪರ್ಯಾಯ ವಿಮಾನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲವನ್ನು ಕಡಿಮೆ ಮಾಡಲು ಸಂಸ್ಥೆ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

ಇತ್ತೀಚಿನ ದಿನಗಳಲ್ಲಿ ಸ್ಪೈಸ್‌ಜೆಟ್‌ ಹಲವು ಹಣಕಾಸು ಮತ್ತು ಕಾರ್ಯಾಚರಣಾ ಸವಾಲುಗಳನ್ನು ಎದುರಿಸುತ್ತಿದೆ. ಸಂಸ್ಥೆಯ ಹಣಕಾಸು ಸ್ಥಿತಿ ಹಾಗೂ ಕಾರ್ಯಾಚರಣೆಗಳನ್ನು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸೂಕ್ಷ್ಮವಾಗಿ ಗಮನಿಸುತ್ತಿವೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್‌ ನಾಯ್ಡು ಕಳೆದ ವಾರ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...