ಹೊಸ ತಿದ್ದುಪಡಿ ಕಾಯ್ದೆ ಜಾರಿ: ಅ.1ರಿಂದ ಜನನ, ಮರಣ ನೋಂದಣಿ ತಡ ಮಾಡಿದ್ರೆ ಕೋರ್ಟ್ ಅಲೆಯಬೇಕಾದೀತು

Date:

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ನೋಂದಣಿ ತಡ ಮಾಡಿದರೆ ಕೋರ್ಟ್ ಅಲೆಯಬೇಕಾಗುತ್ತದೆ. ‘ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ-2026’ರ ನೂತನ ನಿಯಮಗಳು ಮುಂಬರುವ ಅಕ್ಟೋಬರ್ 1ರಿಂದ ದೇಶಾದ್ಯಂತ ಜಾರಿಗೆ ಬರಲಿವೆ.

- Advertisement -

ಜನನ ಮತ್ತು ಮರಣ ಘಟನೆಗಳನ್ನು ನಿಗದಿತ ಸಮಯದಲ್ಲಿ ನೋಂದಾಯಿಸುವುದನ್ನು ಪ್ರೋತ್ಸಾಹಿಸಲು ಹಾಗೂ ನಕಲಿ ಪ್ರಮಾಣಪತ್ರಗಳ ತಡೆಯುವಿಕೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ರಿಜಿಸ್ಟ್ರಾರ್ ಜನರಲ್ ಮೃತ್ಯುಂಜಯ ಕುಮಾರ್ ನಾರಾಯಣ್ ಅವರು ಈ ಕುರಿತು ಅಧಿಕೃತ ಗೆಜೆಟ್ ಸೂಚನೆ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಇದನ್ನೂ ಓದಿ: ‘ಕೇರಳದ ಶಿಶು ಮರಣ ಪ್ರಮಾಣ ಅಮೆರಿಕಕ್ಕಿಂತ ಕಡಿಮೆ’

ನೋಂದಣಿ 2 ವರ್ಷಕ್ಕಿಂತ ಹೆಚ್ಚು ವಿಳಂಬವಾದರೆ ಕೋರ್ಟ್ ಆದೇಶ ಕಡ್ಡಾಯವಾಗಿದೆ. ಅಂದರೆ ಹುಟ್ಟು ಅಥವಾ ಸಾವು ಸಂಭವಿಸಿ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ನೋಂದಣಿ ಮಾಡಿಸದಿದ್ದರೆ, ಇನ್ಮುಂದೆ ಮೊದಲ ದರ್ಜೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರಿಂದ ವಿಚಾರಣೆ ನಡೆದು ಆದೇಶ ಪಡೆಯುವುದು ಕಡ್ಡಾಯವಾಗಿದೆ.

Advertisements

ಘಟನೆ ಸಂಭವಿಸಿ 1 ವರ್ಷ ಕಳೆದು 2 ವರ್ಷಗಳ ಒಳಗಾಗಿ ನೋಂದಣಿಗೆ ಅರ್ಜಿ ಸಲ್ಲಿಸಿದರೆ, ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಅಥವಾ ಅಧಿಕೃತ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ಅವರ ಆದೇಶ ಮತ್ತು ಪರಿಶೀಲನೆ ಅಗತ್ಯವಿರುತ್ತದೆ.

ಜನರು ಘಟನೆ ನಡೆದ ತಕ್ಷಣವೇ ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಮೂಲ ‘ಜನನ ಮತ್ತು ಮರಣ ನೋಂದಣಿ ಕಾಯ್ದೆ 1969’ರ ಸೆಕ್ಷನ್ 13(3)ಕ್ಕೆ ಈ ತಿದ್ದುಪಡಿ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ಹೊಸ ಕಾಯ್ದೆಯು ಜಾರಿಗೆ ಬಂದ ನಂತರ, ಹಳೆಯ ಮತ್ತು ಸುದೀರ್ಘ ವಿಳಂಬದ ನೋಂದಣಿ ಅರ್ಜಿಗಳು ಕಠಿಣ ನ್ಯಾಯಾಂಗ ಪರಿಶೀಲನೆಗೆ ಒಳಪಡಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...