ದಾಖಲೆ ಇಲ್ಲದೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಲವಂತವಾಗಿ ಒಳನುಗ್ಗಲು ಯತ್ನಿಸಿದ ವ್ಯಕ್ತಿ ವಶಕ್ಕೆ

Date:

ಮಾನ್ಯ ಪ್ರಯಾಣ ದಾಖಲೆಗಳಿಲ್ಲದೆ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಟರ್ಮಿನಲ್ 3ರ ನಿರ್ಗಮನ ದ್ವಾರದ ಮೂಲಕ ಬಲವಂತವಾಗಿ ಒಳನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಮತ್ತು ಕ್ಷಿಪ್ರ ಕಾರ್ಯಪಡೆ (ಕ್ಯೂಆರ್‌ಟಿ) ಸಿಬ್ಬಂದಿ ಕೆಲವೇ ಸೆಕೆಂಡ್‌ಗಳಲ್ಲಿ ತಡೆದು ವಶಕ್ಕೆ ಪಡೆದಿದ್ದಾರೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

- Advertisement -

​ಸಿಐಎಸ್‌ಎಫ್‌ ತನ್ನ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ 25 ಸೆಕೆಂಡ್‌ಗಳ ವಿಡಿಯೊದಲ್ಲಿ, ವ್ಯಕ್ತಿಯು ಪ್ರವೇಶ ದ್ವಾರದ ಮೂಲಕ ನುಗ್ಗಲು ಪ್ರಯತ್ನಿಸುತ್ತಿರುವುದು ಹಾಗೂ ಭದ್ರತಾ ಸಿಬ್ಬಂದಿ ಆತನನ್ನು ತಡೆಯಲು ಯತ್ನಿಸುತ್ತಿರುವುದು ಸೆರೆಯಾಗಿದೆ. ಆತ ಕೆಲವು ಮೀಟರ್‌ಗಳಷ್ಟು ಒಳಗೆ ಸಾಗುತ್ತಿದ್ದಂತೆ, ಶಸ್ತ್ರಸಜ್ಜಿತ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ತಮ್ಮ ಸಹೋದ್ಯೋಗಿಯೊಂದಿಗೆ ಸೇರಿ ಆತನನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

​ಹರಿಯಾಣದ ಸೋನಿಪತ್ ಮೂಲದ ಈ ವ್ಯಕ್ತಿಯನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತನ ಬ್ಯಾಗ್‌ನಿಂದ ಕೆಲವು ಗುರುತಿನ ಚೀಟಿಗಳು ಹಾಗೂ ಶೈಕ್ಷಣಿಕ ಪ್ರಮಾಣಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಟರ್ಮಿನಲ್ 3ರ ಸಿಬ್ಬಂದಿ ಮತ್ತು ಕ್ಯೂಆರ್‌ಟಿಯ ಸಮಯೋಚಿತ ಕಾರ್ಯಾಚರಣೆಯಿಂದ ಅಕ್ರಮ ಪ್ರವೇಶವನ್ನು ತಡೆಯಲು ಸಾಧ್ಯವಾಯಿತು ಎಂದು ಸಿಐಎಸ್‌ಎಫ್‌ ಪ್ರಕಟಣೆಯಲ್ಲಿ ಹೇಳಿದೆ.

​ಅತಿಸೂಕ್ಷ್ಮ ಪ್ರದೇಶವೆಂದು ಗುರುತಿಸಲ್ಪಟ್ಟಿರುವ ಐಜಿಐ ವಿಮಾನ ನಿಲ್ದಾಣವು ಪ್ರತಿದಿನ ಸಾವಿರಾರು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ನಿರ್ವಹಿಸುತ್ತದೆ. ಇಲ್ಲಿ ಸಿಐಎಸ್‌ಎಫ್‌ ಶಸ್ತ್ರಸಜ್ಜಿತ ಭಯೋತ್ಪಾದನಾ ನಿಗ್ರಹ ಭದ್ರತಾ ಕವಚ ಒದಗಿಸುತ್ತಿದೆ. ಪ್ರಯಾಣಿಕರ ಮಾನ್ಯ ದಾಖಲೆಗಳು ಮತ್ತು ಗುರುತಿನ ಚೀಟಿಗಳನ್ನು ಸಿಐಎಸ್‌ಎಫ್‌ ಪರಿಶೀಲಿಸಿದ ನಂತರವಷ್ಟೇ ಒಳಪ್ರವೇಶಕ್ಕೆ ಅನುಮತಿಸಲಾಗುತ್ತದೆ; ವಿಮಾನ ನಿಲ್ದಾಣದ ಸಿಬ್ಬಂದಿಯೂ ಗುರುತಿನ ಚೀಟಿ ತೋರಿಸುವುದು ಕಡ್ಡಾಯವಾಗಿದೆ.

​ನಾಗರಿಕ ವಿಮಾನಯಾನ ಭದ್ರತಾ ಬ್ಯೂರೊ (ಬಿಸಿಎಎಸ್‌) ಹೊರಡಿಸಿರುವ ಪರಿಷ್ಕೃತ ಭದ್ರತಾ ಮಾರ್ಗಸೂಚಿಗಳ ಅನ್ವಯ, ವಿಮಾನ ನಿಲ್ದಾಣಗಳಲ್ಲಿ ಶಸ್ತ್ರರಹಿತ ಕರ್ತವ್ಯಗಳಿಗೆ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನೇಮಿಸಿ ಸಿಐಎಸ್‌ಎಫ್‌ ನಿಯೋಜನೆ ಕಡಿಮೆ ಮಾಡಲು ಸರ್ಕಾರ ಯೋಜಿಸುತ್ತಿದೆ ಎಂಬ ವರದಿಗಳು ಪ್ರಕಟವಾದ ಮರುದಿನವೇ ಈ ಘಟನೆ ನಡೆದಿದೆ.

​ಪ್ರಸ್ತಾವಿತ ವ್ಯವಸ್ಥೆಯಡಿ ಖಾಸಗಿ ಭದ್ರತಾ ಸಂಸ್ಥೆಗಳು ಹಂತಹಂತವಾಗಿ ಸಾಮಾನ್ಯ ಭದ್ರತಾ ಕಾರ್ಯಗಳನ್ನು ವಹಿಸಿಕೊಳ್ಳಲಿದ್ದು, ಶಸ್ತ್ರಸಜ್ಜಿತ ರಕ್ಷಣೆ, ಸುತ್ತಮುತ್ತಲಿನ ಭದ್ರತೆ, ಗಸ್ತು, ಕಣ್ಗಾವಲು, ಗುಪ್ತಚರ ಕಾರ್ಯಾಚರಣೆ ಹಾಗೂ ಕ್ಯೂಆರ್‌ಟಿಯಂತಹ ಪ್ರಮುಖ ಜವಾಬ್ದಾರಿಗಳನ್ನು ಸಿಐಎಸ್‌ಎಫ್‌ ನಿರ್ವಹಿಸಲಿದೆ. ಪ್ರಸ್ತುತ ದೇಶದ 119 ವಿಮಾನ ನಿಲ್ದಾಣಗಳ ಪೈಕಿ 74 ನಿಲ್ದಾಣಗಳಿಗೆ ಸಿಐಎಸ್‌ಎಫ್‌ ಹಾಗೂ ಉಳಿದ 45 ನಿಲ್ದಾಣಗಳಿಗೆ ರಾಜ್ಯ ಪೊಲೀಸರು ಭದ್ರತೆ ಒದಗಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

ಆರೋಗ್ಯ ಆಸ್ಪತ್ರೆಯಲ್ಲಿ ಸಿಗುವ ವಸ್ತುವಲ್ಲ, ನಮ್ಮ ಆಹಾರ ಪದ್ಧತಿಯಲ್ಲಿದೆ : ಸಚಿವ ಎನ್.ಚಲುವರಾಯಸ್ವಾಮಿ

ಆರೋಗ್ಯವೆಂಬುದು ಕೇವಲ ಆಸ್ಪತ್ರೆಗಳಲ್ಲಿ ಸಿಗುವ ವಸ್ತುವಲ್ಲ. ಅದು ನಮ್ಮ ದಿನಚರಿಯಲ್ಲಿ ಅಡಗಿದೆ...

ಬಾಗಲಕೋಟೆ |ಇಳಕಲ್ ಪಟ್ಟಣಕ್ಕೆ 24 ಗಂಟೆ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಇಳಕಲ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ...

ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ...