ದೆಹಲಿ | ಯುಎಪಿಎ ಪ್ರಕರಣದಲ್ಲಿ ಕ್ಷಮಾದಾನ; ‘ನ್ಯೂಸ್‌ಕ್ಲಿಕ್’ ಎಚ್‌ಆರ್ ಮುಖ್ಯಸ್ಥನ ಬಿಡುಗಡೆಗೆ ಆದೇಶ

Date:

ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪದಲ್ಲಿ ನ್ಯೂಸ್‌ಕ್ಲಿಕ್ ಮಾನವ ಸಂಪನ್ಮೂಲ (ಎಚ್‌ಆರ್‌) ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ದಾಖಲಾಗಿದ್ದ ಯುಎಪಿಎ ಪ್ರಕರಣದಲ್ಲಿ ಅವರು ವಿಚಾರಣಾ ನ್ಯಾಯಾಲಯದಿಂದ ಕ್ಷಮಾದಾನ ಪಡೆದಿದ್ದು, ಇದೀಗ, ಅವರನ್ನು ಬಿಡುಗಡೆ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

- Advertisement -

“ಚಕ್ರವರ್ತಿ ಅವರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ‘ಅಭ್ಯಂತರವಿಲ್ಲ’ ಎಂದು ಹೈಕೋರ್ಟ್‌ಗೆ ಪ್ರಾಸಿಕ್ಯೂಷನ್ ತಿಳಿಸಿದೆ. ಚಕ್ರವರ್ತಿ ಕೂಡ ತಮ್ಮ ಹೇಳಿಕೆಗಳನ್ನು ಸಿಆರ್‌ಪಿಸಿ ಸೆಕ್ಷನ್ 164 ಅಡಿಯಲ್ಲಿ ದಾಖಲಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಜವಾದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ” ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರಿದ್ದ ಪೀಠವು ಆದೇಶದಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಅವರ ಶೈಕ್ಷಣಿಕ...

ಭಾರತದ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ, ಶಿಕ್ಷಣ, ಯುವಜನರ ಚಳವಳಿಗಳು, ಪ್ರಜಾಪ್ರಭುತ್ವ ಮತ್ತು ಜಾಗತಿಕ ರಾಜಕೀಯದ ಕುರಿತು ಮಹತ್ವದ ವಿಚಾರ ವಿನಿಮಯ ಭಾರತದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವೆಂಬರ್ 17,...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

“ಚಕ್ರವರ್ತಿ ಅವರ ವೈದ್ಯಕೀಯ ಸ್ಥಿತಿ ಮತ್ತು ಪ್ರಕರಣದ ಸಂಗತಿಗಳು ಹಾಗೂ ಸಂದರ್ಭಗಳ ಜೊತೆಗೆ ಪ್ರಾಸಿಕ್ಯೂಷನ್ ನೀಡಿದ ನಿರಾಕ್ಷೇಪಣೆಯನ್ನು ಹೈಕೋರ್ಟ್‌ ಪರಿಗಣಿಸಿದೆ. 25,000 ರೂಪಾಯಿಗಳ ‘ವೈಯಕ್ತಿಕ ಬಾಂಡ್’ಅನ್ನು ಚಕ್ರವರ್ತಿ ಒದಗಿಸಿದ ಮೇಲೆ, ಅವರನ್ನು ಬಂಧನದಿಂದ ಬಿಡುಗಡೆ ಮಾಡಬಹುದು” ಎಂದು ಹೈಕೋರ್ಟ್‌ ಹೇಳಿದೆ.

ಚಕ್ರವರ್ತಿ ಅವರ ವೈದ್ಯಕೀಯ ಸ್ಥಿತಿಯನ್ನು ಗಮನಿಸಿದ ನ್ಯಾಯಮೂರ್ತಿ ಶರ್ಮಾ, “ಚಕ್ರವರ್ತಿ ಅವರು ಪೋಲಿಯೊ ಸಮಸ್ಯೆಗೆ ತುತ್ತಾಗಿದ್ದಾರೆ. ಅವರಿಗೆ ಪಾರ್ಶ್ವವಾಯು ಸಮಸ್ಯೆಯಾಗಿದ್ದು, 59% ಶಾಶ್ವತ ದೈಹಿಕ ಅಸಾಮರ್ಥ್ಯದಿಂದ ಬಳಲುತ್ತಿದ್ದಾರೆ. ಗಾಲಿಕುರ್ಚಿಯ ಮೇಲೆ ಅವಲಂಬಿತರಾಗಿದ್ದಾರೆ. ಅವರ ವೈದ್ಯಕೀಯ ಸ್ಥಿತಿಯ ವಿಚಾರದಲ್ಲಿ ಪ್ರಾಸಿಕ್ಯೂಷನ್‌ನಿಂದ ತಕಾರಾರು ಬಂದಿಲ್ಲ. ಅರ್ಜಿದಾರರ ವೈದ್ಯಕೀಯ ಸ್ಥಿತಿಯು ವಿಶೇಷ ಪರಿಗಣನೆಗೆ ಅರ್ಹವಾಗಿದೆ. ಒಬ್ಬ ವ್ಯಕ್ತಿಯ ದೈಹಿಕ ಅಂಗವೈಕಲ್ಯವು ಆತನ ಯೋಗಕ್ಷೇಮ ಮತ್ತು ದೈನಂದಿನ ಕಾರ್ಯನಿರ್ವಹಣೆಯ ಮೇಲೆ ಗಮನಾರ್ಹ ಪರಿಣಾಮ ಬೀರುವ ಸಂದರ್ಭಗಳಲ್ಲಿ ನ್ಯಾಯಾಲಯವು ನ್ಯಾಯಯುತವಾಗಿ ತನ್ನ ಜವಾಬ್ದಾರಿ ನಿರ್ವಹಿಸಬೇಕು” ಎಂದು ಹೇಳಿದ್ದಾರೆ.

ಚಕ್ರವರ್ತಿ ಅವರನ್ನು 2023ರ ಅಕ್ಟೋಬರ್ 3ರಂದು ಬಂಧಿಸಲಾಗಿತ್ತು. ಅಂದಿನಿಂದ ಅವರು ಜೈಲಿನಲ್ಲಿದ್ದರು. ಅವರಿಗೆ ಜನವರಿ 6ರಂದು ಕ್ಷಮಾದಾನ ನೀಡಿದ್ದ ಸೆಷನ್ಸ್‌ ನ್ಯಾಯಲಯ, “ಚಕ್ರವರ್ತಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ನೈಜ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಅವರ ಸ್ವಂತ ಇಚ್ಛೆಯಿಂದ ನೀಡಿದ ಹೇಳಿಕೆಯು ಉತ್ತಮ ಸಾಕ್ಷ್ಯವಾಗಿದೆ” ಎಂದು ಹೇಳಿತ್ತು.

ಚಕ್ರವರ್ತಿ ಅವರಿಗೆ ಕ್ಷಮಾದಾನ ನೀಡಿದ್ದ ವಿಚಾರಣಾ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿತ್ತು. “ಚಕ್ರವರ್ತಿ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸಂದರ್ಭಗಳ ಸಂಪೂರ್ಣ ಮತ್ತು ನಿಜವಾದ ಮಾಹಿತಿಯನ್ನು ಬಹಿರಂಗಪಡಿಸಬೇಕು. ಉದ್ದೇಶಪೂರ್ವಕವಾಗಿ ಯಾವುದೇ ವಿಚಾರಗಳನ್ನು ಮರೆಮಾಚಬಾರದು. ಉದ್ದೇಶಪೂರ್ವಕವಾಗಿ ಸುಳ್ಳು ಪುರಾವೆಗಳನ್ನು ನೀಡಬಾರದು” ಎಂದು ಹೇಳಿತ್ತು.

ಇದೇ ಪ್ರಕರಣದಲ್ಲಿ ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ಕೂಡ ಬಂಧಿಸಲಾಗಿದೆ. ಅವರು ಜೈಲಿನಲ್ಲಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...

ಕೇರಳ: ಶಾಲೆಯ ಬಳಿ ಡಾಂಬರು ಮಿಕ್ಸಿಂಗ್‌ ಯೂನಿಟ್ ಮಾಲಿನ್ಯ; 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!

ಕೇವಲ ಕೆಲವು ಗಂಟೆಗಳ ಹಿಂದೆ ನ್ಯಾಯಾಲಯದ ಅನುಮತಿಯೊಂದಿಗೆ ಪುನರಾರಂಭಗೊಂಡ ಡಾಂಬರು ಮಿಶ್ರಣ...

ಯುಪಿ ಚುನಾವಣೆ |ರಾಧೇ ರಾಧೇ ಕಮಲ್ ಖಿಲಾ ದೇ; ವೋಟಿಗಾಗಿ ರಾಮನ ನಂತರ ಕೃಷ್ಣನನ್ನು ಮುಂದಿಟ್ಟ ಬಿಜೆಪಿ

ಮತಗಿಟ್ಟಿಸಿಕೊಳ್ಳಲು ಧರ್ಮಗಳ ನಡುವೆ ದಳ್ಳುರಿ ಸೃಷ್ಟಿಸಿ, ರಾಮಮಂದಿರದ ಜಪ ಮಾಡಿದ ಬಿಜೆಪಿ...

‘ನಮ್ಮನ್ನು ಪದೇಪದೆ ಅವಮಾನಿಸಬೇಡಿ’: J-Kಗೆ ರಾಜ್ಯ ಸ್ಥಾನಮಾನ ನೀಡದ ಕೇಂದ್ರದ ವಿರುದ್ಧ ಸಿಎಂ ಒಮರ್ ಅಬ್ದುಲ್ಲಾ ಆಕ್ರೋಶ

ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವಲ್ಲಿ ಕೇಂದ್ರ ಸರ್ಕಾರದ ವಿಳಂಬ ಧೋರಣೆಯ...