ಫೆಬ್ರವರಿ 5 ರಂದು ದೆಹಲಿ ವಿಧಾನಸಭೆ ಚುನಾವಣೆ: ಹೊಸ ದಾಖಲೆ ನಿರ್ಮಿಸಿದ ರಾಜೀವ್ ಕುಮಾರ್

Date:

ಫೆಬ್ರವರಿ 5 ರಂದು ಏಕೈಕ ಹಂತದಲ್ಲಿ ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 8ರಂದು ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌ ಅವರು ಚುನಾವಣಾ ದಿನಾಂಕವನ್ನು ಘೋಷಿಸಿದರು.

- Advertisement -

ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗೆಯೇ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರವನ್ನು ಕಸಿದುಕೊಳ್ಳಲು ಕಣ್ಣಿಟ್ಟಿದೆ. ಅಚ್ಚರಿಯ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಕೂಡ ಪ್ರಬಲ ಹೋರಾಟಕ್ಕೆ ಸಿದ್ಧತೆ ನಡೆಸಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೆಹಲಿಯಲ್ಲಿ 58 ಸಾಮಾನ್ಯ ಹಾಗೂ 12 ಎಸ್‌ಸಿ ವಿಧಾನಸಭೆ ಕ್ಷೇತ್ರಗಳಿವೆ. 1.55 ಕೋಟಿ ಮತದಾರರಿದ್ದು, 13.033 ಮತಗಟ್ಟೆಗಳಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ

ಎಎಪಿ ಮೊದಲ ಬಾರಿಗೆ ಅತಂತ್ರ ವಿಧಾನಸಭೆಯಿಂದ ಕಾಂಗ್ರೆಸ್‌ ಬೆಂಬಲದಿಂದ ಡಿಸೆಂಬರ್ 2013 ರಲ್ಲಿ ಅಧಿಕಾರಕ್ಕೆ ಬಂತು. ಆದಾಗ್ಯೂ, ಕೇವಲ 49 ದಿನಗಳ ಅಧಿಕಾರದ ನಂತರ, ಕೇಜ್ರಿವಾಲ್ ಅವರು ಭ್ರಷ್ಟಾಚಾರ ವಿರೋಧಿ ಜನಲೋಕಪಾಲ್ ಮಸೂದೆಯನ್ನು ಅಂಗೀಕರಿಸಲು ಅಸಮರ್ಥತೆ ಉಲ್ಲೇಖಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2015 ಮತ್ತು 2020 ರ ಮುಂದಿನ ಎರಡು ಚುನಾವಣೆಗಳಲ್ಲಿ ಎಎಪಿ ಕ್ರಮವಾಗಿ 67 ಮತ್ತು 62 ಸ್ಥಾನಗಳೊಂದಿಗೆ ಜಯಗಳಿಸಿತು.

ಕೇಂದ್ರ ಚುನಾವಣಾಧಿಕಾರಿ ರಾಜೀವ್‌ ಕುಮಾರ್‌ ಅವರು 28 ರಾಜ್ಯ, 8 ಕೇಂದ್ರಾಡಳಿತ ಪ್ರದೇಶ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಚುನಾವಣೆ ನಡೆಸಿದ ಮೊದಲ ಚುನಾವಣಾಧಿಕಾರಿಯಾದ ಹೆಗ್ಗಳಿಕೆಗೆ ಪಾತ್ರರಾದರು. ಇದು ಅವರ ಕೊನೆಯ ಚುನಾವಣೆಯಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ನಿವೃತ್ತರಾಗಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...