ದೆಹಲಿ ಸ್ಪೋಟ: ದೊರೆಯ ಜನ್ಮ ದಿನಾಚರಣೆಗಾಗಿ ಭೂತಾನ್‌ಗೆ ಹಾರಿದ ಮೋದಿ; ನೆಟ್ಟಿಗರ ಆಕ್ರೋಶ

Date:

ದೆಹಲಿಯಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ದುರ್ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಭಯೋತ್ಪಾದನಾ ಕೃತ್ಯದ ಆರೋಪಗಳು ಕೇಳಿಬರುತ್ತಿವೆ. ಇಡೀ ದೇಶ ಕಂಬನಿ ಮಿಡಿಯುತ್ತಿದೆ. ಇದೇ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಭೂತಾನ್‌ ದೊರೆಯ ಜನ್ಮ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾಗಲು ಭೂತಾನ್‌ಗೆ ಹಾರಿದ್ದಾರೆ. ಭಾರತದ ಸ್ಥಬ್ಧಗೊಂಡಿರುವ ಸಮಯದಲ್ಲಿ ಮೋದಿ ‘ಬರ್ತಡೇ ಪಾರ್ಟಿ’ಗೆ ಹೋಗಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -

ಭೂತಾನ್‌ನ 4ನೇ ದೊರೆ ಜಿಗ್ಮೆ ಸಿಂಗೈ ವಾಂಗ್ ಚುಕ್ ಅವರು ಮಂಗಳವಾರ (ನ.11) ತಮ್ಮ 70ನೇ ಜನ್ಮ ದಿನಾಚರಣೆ ಆಚರಿಸಿಕೊಳ್ಳುತ್ತಿದ್ದಾರೆ. ಆ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಭೂತಾನ್ ರಾಜಧಾನಿ ತಿಂಪುಗೆ ತೆರಳಿದ್ದಾರೆ. ಎರಡು ದಿನಗಳ ಕಾಲ ಭೂತಾನ್‌ನಲ್ಲಿಯೇ ಇರಲಿದ್ದು, ಭೂತಾನ್ ದೊರೆ ಜುಗ್ಮೆ ಕೇಶರ್ ನಂಗ್ಯಾಲ್ ವಾಂಗ್ ಚುಕ್, ಅವರ ತಂದೆ – ಪೂರ್ವಾಧಿಕಾರಿ ಸಿಂಗೈ ಹಾಗೂ ಪ್ರಧಾನ ಮಂತ್ರಿ ಶೇರಿಂಗ್ ತೋಬ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“4ನೇ ದೊರೆಯ 70ನೇ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳುವುದು ಗೌರವದ ಸಂಗತಿ. ನನ್ನ ಭೂತಾನ್‌ ಭೇಟಿಯು ಉಭಯ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಬಲಗೊಳಿಸಲಿದೆ. ಅಭಿವೃದ್ಧಿ ಎಡೆಗಿನ ನಮ್ಮ ಜಂಟಿ ಪ್ರಯತ್ನವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ” ಎಂದು ಮೋದಿ ಹೇಳಿಕೊಂಡಿದ್ದಾರೆ.

ದೆಹಲಿ ಸ್ಪೋಟದ ನಡುವೆ ಭೂತಾನ್‌ಗೆ ಮೋದಿ ತೆರಳಿರುವುದರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ದೆಹಲಿಯಲ್ಲಿ ದೇಶವಾಸಿಗಳ‌ ನೆತ್ತರು ಹರಿದಿದೆ, ದೇಹ ಛಿದ್ರಛಿದ್ರವಾಗಿದೆ. ಯಾರದ್ದೋ ಹುಟ್ಟುಹಬ್ಬಕ್ಕೆ ಈ ನಾಡಿನ ದೊರೆ ಹೊರಟಿದ್ದಾರೆ” ಎಂದು ಕಿಡಿದ್ದಾರೆ.

“ಇವರಿಗೆ ವ್ಯಾಪಾರ ಒಂದು ಬಿಟ್ಟರೆ ಬೇರೆ ಏನೂ ಬೇಡ. ಯಾರು ಸಾಯಲಿ ಬಿಡಲಿ, ಅವರದ್ದು ಅಧಿಕಾರ ಮತ್ತು ವ್ಯಾಪಾರ ಎರಡೇ” ಎಂದು ನೆಟ್ಟಿಗರೊಬ್ಬರು ಕಿಡಿಕಾರಿದ್ದಾರೆ.

“ಇಲ್ಲಿ ದುರಂತ ಸಂಭವಿಸಿದಾಗಲೆಲ್ಲ ಈ ಮನುಷ್ಯ ವಿದೇಶದಲ್ಲಿ ಮೋಜು ಮಸ್ತಿಯಲ್ಲಿರ್ತಾರೆ. ಅಥವಾ ಸ್ವದೇಶದಲ್ಲಿ ಶೂಟಿಂಗ್‌ನಲ್ಲಿ ಇರ್ತಾರೆ. ನಾಟ್ ರಿಚೇಬಲ್ ಆಗಿರುತ್ತಾರೆ” ಎಂಧು ಮತ್ತೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...