ದೆಹಲಿ ಮತ್ತು ದೆಹಲಿ ಸುತ್ತಲಿನ ಸುಮಾರು 100 ಶಾಲೆಗಳಿಗೆ ಬುಧವಾರ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಶಾಲೆಗಳ ಅಧಿಕೃತ ಇಮೇಲ್ ಐಡಿಗಳಿಗೆ ಬೆದರಿಕೆಯ ಸಂದೇಶ ಬಂದಿದೆ ಎಂದು ಹೇಳಲಾಗಿದೆ. ಇಮೇಲ್‌ನ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ.
ಕೇಂದ್ರೀಯ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಪ್ರಾಥಮಿಕ ತನಿಖೆಯಲ್ಲಿ ಇಮೇಲ್‌ಗಳನ್ನು ರಾಷ್ಯಾದಿಂದ ಕಳುಹಿಸಲಾಗಿದೆ ಎಂದು ಕಂಡುಬಂದಿದೆ.
ಕಳೆದ ಎರಡು ದಿನಗಳಲ್ಲಿ, ವಿಮಾನ ನಿಲ್ದಾಣಗಳು ಮತ್ತು ಆಸ್ಪತ್ರೆಗಳಿಗೂ ಇದೇ ರೀತಿಯ ಬೆದರಿಕೆಗಳು ಬಂದಿವೆ. ದೆಹಲಿ ಅಗ್ನಿಶಾಮಕ ಸೇವೆಗೆ (DFS) ಇದುವರೆಗೆ 60 ಬಾಂಬ್ ಬೆದರಿಕೆ ಕರೆಗಳು ಬಂದಿವೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಶಾಲೆಗಳಿಗೆ ಬೆದರಿಕೆ ಬಂದಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಕೂಡಲೇ ಶಾಲೆಗಳಿಗೆ ತೆರಳಿದ್ದು, ಶಾಲೆಯ ಆವರಣದಲ್ಲಿದ್ದ ಎಲ್ಲರನ್ನು ಹೊರಗೆ ಕಳಿಸಿದ್ದಾರೆ. ಬಾಂಬ್ ಪತ್ತೆ ತಂಡಗಳು, ಬಾಂಬ್ ನಿಷ್ಕ್ರಿಯ ದಳಗಳು ಮತ್ತು ಡಿಎಫ್‌ಎಸ್‌ನ ಅಧಿಕಾರಿಗಳುಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.