ಬಾಲಕನ ಮೇಲೆ 13 ಮಂದಿಯಿಂದ ಲೈಂಗಿಕ ದೌರ್ಜನ್ಯ: 24 ಬಾರಿ ಚಾಕುವಿನಿಂದ ಇರಿದು ಹತ್ಯೆ

Date:

ವಿರೋಧಿ ಗ್ಯಾಂಗ್‌ನ ಮಾಹಿತಿದಾರನಾಗಿದ್ದ ಎಂಬ ಆರೋಪದ ಮೇಲೆ 14 ವರ್ಷದ ಬಾಲಕನ ಮೇಲೆ ಒಟ್ಟು 13 ಮಂದಿ ದುರುಳರು ಲೈಂಗಿಕ ದೌರ್ಜನ್ಯ ಎಸಗಿ, 24 ಬಾರಿ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಗಳಲ್ಲಿ ಹಲವು ಮಂದಿ ಅಪ್ರಾಪ್ತ ವಯಸ್ಕರು ಎಂದು ಹೇಳಲಾಗಿದೆ.

- Advertisement -

ಜುಲೈ 1ರಂದು ದೆಹಲಿ ಕಾಲುವೆಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿತ್ತು. ದೇಹದಲ್ಲಿ 24 ಇರಿತದ ಗಾಯಗಳು ಮತ್ತು ದೌರ್ಜನ್ಯ ಎಸಗಿದ ಗಾಯಗಳು ಕಂಡುಬಂದಿತ್ತು. ಈ ಸಂಬಂಧ ಪ್ರಮುಖ ಆರೋಪಿ ಕೃಷ್ಣ ಅಲಿಯಾಸ್ ಭೋಲಾ(19) ಸೇರಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಶುಕ್ರವಾರ(ಜುಲೈ 25) ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಜುಲೈ 18ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿರುವ ಕನ್ವರ್ ಶಿಬಿರದಿಂದ ಪೊಲೀಸರು ಮೂವರನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಶಾಲಾ ಶಿಕ್ಷಕಿ ಬಂಧನ

ಮೃತ ಬಾಲಕನು ತಮ್ಮ ವಿರೋಧಿ ಗ್ಯಾಂಗ್‌ನ ಬಧ್ವಾರ್ ಸಹೋದರರಾದ ಮೋನು ಮತ್ತು ಸೋನು ಅವರ ಮಾಹಿತಿದಾರ ಎಂದುಕೊಂಡು ಕೃಷ್ಣ ಈ ಕೊಲೆ ಮಾಡಲು ಯೋಜಿಸಿದ್ದ ಎನ್ನಲಾಗಿದೆ. ಅಕ್ರಮ ಮದ್ಯ ವ್ಯಾಪಾರ, ದರೋಡೆ ಸೇರಿದಂತೆ ಹಲವು ಆರೋಪಗಳನ್ನು ಹೊಂದಿರುವ ಬಧ್ವಾರ್ ಸಹೋದರರು ಸದ್ಯ ಜೈಲಿನಲ್ಲಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಹರೇಶ್ವರ ಸ್ವಾಮಿ, “ಸ್ವಲ್ಪ ಕೊಳೆತ ಯುವಕನ ಮೃತದೇಹವು ಮುನಕ್ ಕಾಲುವೆಯಲ್ಲಿ ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡು ಸಂಪೂರ್ಣವಾಗಿ ಬೆತ್ತಲೆಯಾಗಿ ಬಿದ್ದಿರುವುದು ಕಂಡು ಬಂದಿತ್ತು. ಮರಣೋತ್ತರ ಪರೀಕ್ಷೆಯ ವರದಿಯು ಅಪರಾಧದ ಕ್ರೂರತೆಯನ್ನು ಬಹಿರಂಗಪಡಿಸಿತು” ಎಂದು ಹೇಳಿದ್ದಾರೆ.

“ಮರಣೋತ್ತರ ಪರೀಕ್ಷೆಯ ವರದಿಗಳು ಆತನ ದೇಹದ ಮೇಲೆ 24 ಇರಿತದ ಗಾಯಗಳಿದ್ದವು ಎಂದು ಬಹಿರಂಗಪಡಿಸಿವೆ. ಗುದದ್ವಾರದಲ್ಲಿ ಗಾಯದ ಗುರುತುಗಳಿವೆ. ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೃಢಪಟ್ಟಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಕನ್ವರ್ ಯಾತ್ರಿಕರಂತೆ ನಟಿಸುತ್ತಾ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಹರಿದ್ವಾರದಲ್ಲಿ ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಅಪರಾಧವನ್ನು ಒಪ್ಪಿದ್ದಾರೆ. ದೀಪಕ್, ಚಂದನ್ ಮತ್ತು ಸಚಿನ್ ಎಂಬ ಇತರ ಮೂವರು ಆರೋಪಿಗಳ ಗುರುತನ್ನು ಬಹಿರಂಗಪಡಿಸಿದರು. ಬಂಧಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...