ದೆಹಲಿ | ಯುವಕರ ಮೇಲೆ ಕ್ರೌರ್ಯ; ಕೇಂದ್ರ ಹಾಗೂ ಪೊಲೀಸರಿಗೆ ಹೈಕೋರ್ಟ್ ನೋಟಿಸ್

Date:

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ವಿಪರೀತ ಬಲಪ್ರಯೋಗ ಮಾಡಿ ಕ್ರೌರ್ಯ ಮೆರೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ದೆಹಲಿ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಪೀಠವು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ ನಡೆಸಿ, ಪ್ರತಿಕ್ರಿಯೆ ನೀಡುವಂತೆ ಕೇಂದ್ರ, ದೆಹಲಿ ಪೊಲೀಸ್ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ನಿರ್ದೇಶನ ನೀಡಿದೆ. ಅಲ್ಲದೆ, ಈ ಸಂಬಂಧ ನಾಲ್ಕು ವಾರಗಳಲ್ಲಿ ಪ್ರತಿಜ್ಞಾ ಪತ್ರ (Counter Affidavit) ಸಲ್ಲಿಸುವಂತೆ ಸೂಚಿಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 11 ಕ್ಕೆ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ತುಣುಕುಗಳು ಮತ್ತು ವೀಡಿಯೊಗ್ರಫಿ ಸೇರಿದಂತೆ ಎಲ್ಲಾ ಸಂಬಂಧಿತ ದಾಖಲೆಗಳನ್ನು ದೆಹಲಿ ಪೊಲೀಸ್ ಅಥವಾ ಭಾರತ ಸರ್ಕಾರದ ಎಸ್‌ಒಪಿ (SOP) ಪ್ರಕಾರ ಸುರಕ್ಷಿತವಾಗಿ ಸಂರಕ್ಷಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ.

ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಎನ್. ಹರಿಹರನ್, ವಿಕಾಸ್ ಸಿಂಗ್ ಮತ್ತು ಗೋಪಾಲ್ ಶಂಕರನಾರಾಯಣನ್ ಅವರು ವಾದ ಮಂಡಿಸಿ, ಪೊಲೀಸರು ಮತ್ತು ತ್ವರಿತ ಕಾರ್ಯಪಡೆ (RAF) ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಅತ್ಯಂತ ಕ್ರೂರವಾಗಿ ಬಲಪ್ರಯೋಗ ಮಾಡಿದೆ ಎಂದು ಆರೋಪಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಿಶಸ್ತ್ರ ವಿದ್ಯಾರ್ಥಿಗಳ ಮೇಲೆ ಅತಿಯಾದ ಬಲಪ್ರಯೋಗ ಮಾಡಲಾಗಿದೆ. 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪೊಲೀಸರು ಅಥವಾ ಸಮವಸ್ತ್ರವಿಲ್ಲದ, ನೇಮ್ ಬೋರ್ಡ್ ಧರಿಸದ ಕೆಲವರು ಸಿವಿಲ್ ಉಡುಗೆಯಲ್ಲಿ ಬಂದು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಹೆಚ್ಚುವರಿ ಡಿಸಿಪಿ ಸಂದೀಪ್ ಲಂಬಾ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡುತ್ತಿರುವ ದೃಶ್ಯ ವೀಡಿಯೊಗಳಲ್ಲಿದೆ. ಲಾಠಿಗೆ ಮೊಳೆಗಳನ್ನು ಕಟ್ಟುವುದು, ಪೆಲೆಟ್‌ಗಳು ಹಾಗೂ ವಿದ್ಯುತ್ ಶಾಕ್ ನೀಡುವ ಬ್ಯಾಟನ್‌ಗಳನ್ನು ಬಳಸಲಾಗಿದೆ. ಅಶ್ರುವಾಯುವನ್ನು ಕೂಡ ನಿಯಮಬಾಹಿರವಾಗಿ ಬಳಸಲಾಗಿದೆ. ಈ ಘಟನೆಯ ಬಗ್ಗೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಹಾಗೂ ಸ್ವತಂತ್ರ ಎಸ್‌ಐಟಿ (SIT) ತನಿಖೆಗೆ ಆದೇಶಿಸಬೇಕು ಎಂದು ಹಿರಿಯ ವಕೀಲರು ಒತ್ತಾಯಿಸಿದ್ದರು.

ಆದರೆ, ಪೊಲೀಸರು ಮತ್ತು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸೊಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಅರ್ಜಿಗಳನ್ನು ವಿರೋಧಿಸಿ, ಇವು ಕೇವಲ ಊಹಾಪೋಹಗಳ ಮೇರೆಗೆ ಸಲ್ಲಿಸಲಾದ ಪ್ರಚಾರಪ್ರಿಯ ಅರ್ಜಿಗಳಾಗಿವೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪ್ರತಿಭಟನಾಕಾರರೇ ಕಲ್ಲುತೂರಾಟ ನಡೆಸಿದ್ದಾರೆ ಮತ್ತು ಪೊಲೀಸ್ ವಾಹನಗಳಿಗೆ ಹಾನಿ ಮಾಡಿದ್ದಾರೆ. ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಕೆಲವು ರಾಜಕೀಯ ಪಕ್ಷಗಳು ಸತ್ಯವನ್ನು ತಿರುಚಿ ಲಾಭ ಪಡೆಯಲು ಯತ್ನಿಸುತ್ತಿವೆ. ಗಾಯಗೊಂಡ ವ್ಯಕ್ತಿಗಳು ಯಾರೂ ನೇರವಾಗಿ ದೂರು ನೀಡಿಲ್ಲ ಎಂದು ವಾದಿಸಿದರು.

ಇದನ್ನೂ ಓದಿ: ಈ ದಿನ ಸಂಪಾದಕೀಯ |  ʼಲಾಠಿʼಗಳಿಗೆ ಮೊಳೆ ಹೊಡೆದು ವಿದ್ಯಾರ್ಥಿಗಳನ್ನು ಬಾರಿಸಿದ ಪೊಲೀಸರ ವರ್ತನೆ ಬರ್ಬರ!

ಪ್ರತಿ ವ್ಯಕ್ತಿಯು ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಬೇಕು ಎಂಬ ವಾದವನ್ನು ತಳ್ಳಿಹಾಕಿದ ನ್ಯಾಯಪೀಠ, “ಇದು ಯಾವುದೋ ಪ್ರತ್ಯೇಕವಾದ ಘಟನೆಯಲ್ಲ. ಪಿಐಎಲ್‌ನಲ್ಲಿ ಇಂತಹ ವಿಷಯಗಳನ್ನು ಎತ್ತಿದಾಗ ಪ್ರತಿಯೊಬ್ಬರೂ ಪ್ರತ್ಯೇಕವಾಗಿ ದೂರು ನೀಡಬೇಕು ಎಂದು ಹೇಗೆ ಹೇಳಲು ಸಾಧ್ಯ?” ಎಂದು ಪ್ರಶ್ನಿಸಿತು.

ಪ್ರಕರಣದ ಗುಣಮಟ್ಟದ ಬಗ್ಗೆ ಈಗಲೇ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದ ನ್ಯಾಯಾಲಯ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೀಟ್ (NEET) ಪರೀಕ್ಷಾ ಅಕ್ರಮಗಳ ವಿರುದ್ಧದ ಅಸಮಾಧಾನ ಹಾಗೂ ಪೊಲೀಸ್ ದೌರ್ಜನ್ಯದ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಅಧಿಕೃತವಾಗಿ ಸೂಚನೆ ನೀಡಿದೆ. ನೀಟ್ ಹಗರಣ ಖಂಡಿಸಿ ಸಿಜೆಪಿ (CJP) ನೇತೃತ್ವದಲ್ಲಿ ಜುಲೈ 20 ರಂದು ಈ ಸಂಸತ್ ಮಾರ್ಚ್ ನಡೆದಿತ್ತು ಎಂಬುದು ಗಮನಾರ್ಹ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...