ದೆಹಲಿ ಚಲೋ | ರೈತರ ತಡೆಯಲು ಹರಿಯಾಣ-ದೆಹಲಿ ಗಡಿಯಲ್ಲಿ ಕಾಂಕ್ರೀಟ್ ಗೋಡೆ, ಮುಳ್ಳುತಂತಿ ಬೇಲಿ!

Date:

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಡಲ್ಲೇವಾಲ್ ಬಣ) ಹಾಗೂ ಇತರ ಪ್ರಮುಖ ರೈತ ಸಂಘಟನೆಗಳು ದೆಹಲಿ ಪಾದಯಾತ್ರೆಗೆ (ದೆಹಲಿ ಚಲೋ) ಕರೆ ನೀಡಿರುವ ಹಿನ್ನೆಲೆಯಲ್ಲಿ, ದೆಹಲಿ ಮತ್ತು ಹರಿಯಾಣ ಗಡಿಭಾಗಗಳಲ್ಲಿ ಆಡಳಿತ ಮಂಡಳಿಯು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.

- Advertisement -

ರೈತರು ದೆಹಲಿ ಪ್ರವೇಶಿಸುವುದನ್ನು ತಡೆಯಲು ಹರಿಯಾಣ-ದೆಹಲಿ ಗಡಿಯ ಪ್ರಮುಖ ಮಾರ್ಗಗಳಲ್ಲಿ ಮತ್ತು ಶಂಭು ಗಡಿ ಪ್ರದೇಶಗಳಲ್ಲಿ ಕಾಂಕ್ರೀಟ್ ತಡೆಗೋಡೆಗಳನ್ನು ನಿರ್ಮಿಸಲಾಗಿದ್ದು, ಮುಳ್ಳುತಂತಿ ಬೇಲಿಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ರಸ್ತೆಗಳ ಮೇಲೆ ದೊಡ್ಡ ಕಲ್ಲುಗಳನ್ನು ಹಾಗೂ ಬ್ಯಾರಿಕೇಡ್‌ಗಳನ್ನು ಇರಿಸಲಾಗಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಇದನ್ನೂ ಓದಿ: ರೈತ ಹೋರಾಟ 3.0 | ಭಾರತ-ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ವಿರೋಧ; ದೆಹಲಿಯತ್ತ ರೈತ ಆಂದೋಲನ

ಅಂತಾರಾಷ್ಟ್ರೀಯ ವ್ಯಾಪಾರ ಒಪ್ಪಂದಗಳಿಂದ ದೇಶೀಯ ರೈತರಿಗೆ ತೊಂದರೆಯಾಗುತ್ತಿದ್ದು, ಇದನ್ನು ತಕ್ಷಣವೇ ರದ್ದುಗೊಳಿಸಬೇಕು. ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನು ಜಾರಿಗೆ ತರಬೇಕು. ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಮತ್ತು ರೈತರಿಗೆ ಮಾಸಿಕ ಪಿಂಚಣಿ ಸೌಲಭ್ಯ ಒದಗಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಈ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು ದೆಹಲಿ ಚಲೋ ನಡೆಸಲು ಮುಂದಾಗಿದ್ದಾರೆ.

ಈ ನಡುವೆ ಗಡಿಯಲ್ಲಿ ಭಾರೀ ಸಂಖ್ಯೆಯ ಪೊಲೀಸರು ಮತ್ತು ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಹಾಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...