‘ದೆಹಲಿ ಚಲೋ’ ಫೆ.21ರವರೆಗೂ ಮುಂದೂಡಿಕೆ; ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟ

Date:

Advertisements

ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ನೀಡಿರುವ ಪ್ರಸ್ತಾಪನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದ್ದು, ಫೆ.21ರಂದು ಶಾಂತಿಯುತವಾಗಿ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ರೈತ ಮುಖಂಡರು ತಿಳಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ನಾಯಕ ಸರ್ವಾನ್ ಸಿಂಗ್ ಪಂಡೇರ್, “ನಾವು ಸರ್ಕಾರ ನೀಡಿರುವ ಪ್ರಸ್ತಾಪವನ್ನು ರೈತರ ಜೊತೆಗೆ ಕೃಷಿ ಹಾಗೂ ಕಾನೂನು ತಜ್ಞರೊಂದಿಗೆ ಚರ್ಚಿಸಿ ನಂತರ ನಮ್ಮ ನಿರ್ಧಾರವನ್ನು ಕೇಂದ್ರಕ್ಕೆ ತಿಳಿಸುತ್ತೇವೆ.ಅಲ್ಲಿಯವರಗೂ ದೆಹಲಿ ಚಲೋವನ್ನು ಮುಂದೂಡುತ್ತೇವೆ. ಫೆ.21ರಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

ಹರಿಯಾಣದ ಶಂಭೂ ಗಡಿಯಲ್ಲಿ “ರೈತರು ತಮ್ಮ ಎಂಎಸ್‌ಪಿ ಬೇಡಿಕೆ ಬಗ್ಗೆ ನಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ, ಸರಿಯುವುದೂ ಇಲ್ಲ. ಸರ್ಕಾರ ನೀಡಿರುವ ಪ್ರಸ್ತಾಪವನ್ನು ರೈತರೊಂದಿಗೆ ಚರ್ಚಿಸುತ್ತೇವೆ ಎಂದು ಸರ್ವಾನ್ ಸಿಂಗ್ ಪಂಡೇರ್ ತಿಳಿಸಿದರು.

Advertisements

ಚಂಡೀಗಢದಲ್ಲಿ ರೈತರೊಂದಿಗೆ ನಡೆದ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸಚಿವರಾದ ಪಿಯೂಶ್ ಗೋಯಲ್, ಅರ್ಜುನ್ ಮುಂಡಾ ಹಾಗೂ ನಿತ್ಯಾನಂದ್ ರೈ ಕೂಡ ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ಎಂಎಸ್‌ಪಿ ಖಾತರಿ ಜೊತೆಗೆ ರೈತರು ಎಂ ಎಸ್‌ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸುಗಳು, ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಪಿಂಚಣಿ, ಸಾಲ ಮನ್ನಾ, ವಿದ್ಯುತ್ ಶುಲ್ಕ ಇಳಿಕೆ, 2021ರಲ್ಲಿ ಲಕೀಮ್‌ಪುರ ಖೇರಿ ಗಲಭೆಯಲ್ಲಿ ರೈತರ ಮೇಲೆ ದಾಖಲಿಸಿದ್ದ ಪೊಲೀಸ್‌ ಪ್ರಕರಣಗಳ ರದ್ದು, 2013ರ ಭೂಸ್ವಾಧೀನ ಕಾಯ್ದೆ ಮರು ಸ್ಥಾಪನೆ ಹಾಗೂ 2020-21ರ ರೈತ ಪ್ರತಿಭಟನೆಯಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ ಪರಿಹಾರ ನೀಡುವುದು ರೈತರ ಬೇಡಿಕೆಗಳಾಗಿವೆ.

ರೈತರೊಂದಿಗೆ ಮಾತುಕತೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್,” ಸಹಕಾರಿ ಸಂಸ್ಥೆಗಳಾದ ಎನ್ಸಿ‌ಸಿಸಿಎಫ್ ಹಾಗೂ ಎನ್‌ಎಎಫ್‌ಇಡಿ, ಪ್ರಮುಖ ಬೆಳೆ ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಂಡು ಮುಂದಿನ ಐದು ವರ್ಷಗಳವರೆಗೆ ಎಂಎಸ್‌ಪಿಯಡಿ ಬೆಳೆಗಳನ್ನು ಖರೀದಿಸಲಿದೆ ಎಂದರು.

“ಖರೀದಿಯಲ್ಲಿ ಪ್ರಮಾಣದ ಬಗ್ಗೆ ಯಾವುದೇ ಮಿತಿಯಿರುವುದಿಲ್ಲ ಹಾಗೂ ಇದಕ್ಕಾಗಿ ಪೋರ್ಟಲ್‌ಅನ್ನು ಕೂಡ ಅಭಿವೃದ್ಧಿಗೊಳಿಸಲಾಗುವುದು.ಚುನಾವಣೆಗಳು ಬರಲಿದ್ದು, ನೂತನ ಸರ್ಕಾರ ರಚಿತವಾಗಲಿದೆ. ಇಂತಹ ಕೆಲವೊಂದು ಸಮಸ್ಯೆಗಳ ಬಗ್ಗೆ ಚರ್ಚೆಗಳು ಮುಂದುವರಿಯಲಿದೆ” ಎಂದು ಗೋಯಲ್‌ ತಿಳಿಸಿದರು.

ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಸಭೆಯಲ್ಲಿ ಭಾಗಿಯಾಗಿ ರೈತರ ಹಿತಾಸಕ್ತಿಗಾಗಿ ಎಂಎಸ್‌ಪಿ ಜಾರಿಗೊಳಿಸುವುದರ ಬಗ್ಗೆ ಕೇಂದ್ರವನ್ನು ಒತ್ತಾಯಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X