ದೆಹಲಿ ಚಲೋ | ಪೊಲೀಸರ ತಡೆಗೋಡೆ ಭೇದಿಸಲು ಯತ್ನಿಸಿದ ರೈತರ ಮೇಲೆ ಅಶ್ರುವಾಯು ಪ್ರಯೋಗ

Date:

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಕೇಂದ್ರ ಸರ್ಕಾರವೇ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ‘ದೆಹಲಿ ಚಲೋ’ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ರೈತರು ದೆಹಲಿಗೆ ಹೋಗದಂತೆ ತಡೆದಿದ್ದಾರೆ.

- Advertisement -

ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದು, ದೆಹಲಿಯತ್ತ ಹೊರಟಿದ್ದರು. ಅವರನ್ನು ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ. ರಸ್ತೆಗೆ ಬೃಹತ್ ಮುಳ್ಳು ತಂತಿ ಬೇಲಿಗಳನ್ನು ಹಾಕಿದ್ದಾರೆ. ಮುಳ್ಳು ತಂತಿಯ ತಡೆಗೋಡೆಯನ್ನು ಭೇದಿಸಿ ಮುನ್ನುಗ್ಗಲು ರೈತರು ಮುಂದಾಗಿದ್ದು, ಅವರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ರೈತರು ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ಸಂಧಾನದ ಬಾಗಿಲುಗಳು ಮುಚ್ಚಿವೆ’ ಎಂದು ಹೇಳಿದೆ.

2020ರಲ್ಲಿ ಸತತ ಒಂದು ವರ್ಷಗಳ ಕಾಲ ನಡೆದ ರೈತ ಹೋರಾಟದ ಫಲವಾಗಿ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿತ್ತು. ಅಲ್ಲದೆ, ಎಂಎಸ್‌ಪಿ, ಕೃಷಿ ಸಾಲ ಮನ್ನಾ ಸೇರಿದಂತೆ ಕೆಲವು ಭರವಸೆಗಳನ್ನು ನೀಡಿತ್ತು. ಆದರೆ, ರೈತ ಹೋರಾಟ ಕೊನೆಗೊಂಡು ಮೂರು ವರ್ಷಗಳು ಕಳೆದರೂ ಕೇಂದ್ರ ಸರ್ಕಾರ ತನ್ನ ಭರವಸೆಗಳನ್ನು ಜಾರಿಗೆ ತಂದಿಲ್ಲ.

ಈ ವರದಿ ಓದಿದ್ದೀರಾ?: ದೆಹಲಿಯಲ್ಲಿ ಮತ್ತೆ ರೈತ ಘರ್ಜನೆ: ಸರ್ಕಾರಕ್ಕೆ 7 ದಿನಗಳ ‘ಡೆಡ್‌ಲೈನ್’

ಹೀಗಾಗಿ, ಕೇಂದ್ರ ಸರ್ಕಾರಕ್ಕೆ ತನ್ನ ಭರವಸೆಗಳನ್ನು ನೆನಪಿಸಲು ಇದೇ ವರ್ಷದ ಫೆಬ್ರವರಿ 13ರಿಂದ ದೆಹಲಿ ಚಲೋಗೆ ಸಂಯುಕ್ತ ಕಿಸಾನ್ ವೋರ್ಚಾ ಮತ್ತು ಕಿಸಾನ್ ಮಝ್ದೂರ್ ಸಭಾ ಕರೆ ಕೊಟ್ಟಿದ್ದವು. ಪಂಜಾಬ್‌ನಿಂದ ಹೊರಟಿದ್ದ ರೈತರನ್ನು ಪಂಜಾಬ್-ಹರಿಯಾಣ ಗಡಿ ಖನೌರಿ ಬಳಿ ಭದ್ರತಾ ಪಡೆಗಳು ತಡೆದಿದ್ದವು.

ಖನೌರಿ ಗಡಿಯಲ್ಲೇ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಪ್ರತಿಭಟನೆ ನಡೆಯುತ್ತಿದ್ದ ಸಮಯದಲ್ಲಿಯೇ ಲೋಕಸಭಾ ಚುನಾವಣೆ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳೂ ನಡೆದಿವೆ. ಆದರೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೈತ ಹೋರಾಟಕ್ಕೆ ಸ್ಪಂದಿಸಿಲ್ಲ. ಹೀಗಾಗಿ, ಶುಕ್ರವಾರ ಮತ್ತೆ ದೆಹಲಿ ಚಲೋಗೆ ರೈತ ಸಂಘಟನೆಗಳು ಕರೆಕೊಟ್ಟಿದ್ದವು. ಇದೀಗ, ರೈತರನ್ನು ಶಂಭು ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...