ಅಬಕಾರಿ ನೀತಿ ಪ್ರಕರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು

Date:

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

ರಜಾಪೀಠದ ನ್ಯಾಯಧೀಶರಾದ ನ್ಯಾಯ್‌ ಬಿಂದು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದರು.

ಇ.ಡಿ ಪರ ಹಾಜರಾಗಿದ್ದ ವಿಶೇಷ ವಕೀಲರಾದ ಜೋಹೇಬ್‌ ಹುಸ್ಸೇನ್ ಅವರು, ತನಿಖಾ ಸಂಸ್ಥೆಯು ತನ್ನ ಕಾನೂನಾತ್ಮಕ ಕಾರ್ಯಗಳನ್ನು ಕೈಗೊಳ್ಳುವವರೆಗೂ ಆದೇಶಕ್ಕೆ ತಡೆ ನೀಡಬೇಕೆಂದು ವಿನಂತಿಸಿದರು. ಆದಾಗ್ಯೂ ನ್ಯಾಯಾಲಯವು ತಡೆ ನೀಡುವುದಕ್ಕೆ ನಿರಾಕರಿಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಬಿಎಂಪಿಗೆ ಬೇಕಿರುವುದು ವಿಭಜನೆಗೂ ಮುಖ್ಯವಾಗಿ ಚುನಾವಣೆ

ಸಿಬಿಐ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರು ಸಾಕ್ಷಿದಾರರಾಗಿದ್ದು,ಆರೋಪಿಯಲ್ಲ ಎಂದು ದಾಖಲೆಯಲ್ಲಿ ತೋರಿಸುತ್ತದೆ. ಇ.ಡಿಯು ಸಿಬಿಐನ ಮಾರ್ಗದರ್ಶಿಯಲ್ಲ. ಇದೊಂದು ಸ್ವತಂತ್ರ ತನಿಖಾ ಸಂಸ್ಥೆ. ಅದು ತನ್ನ ಕಾರ್ಯ ನಿರ್ವಹಿಸಬೇಕಿದೆ. ನಮ್ಮ ಕಕ್ಷಿದಾರರು ಆರೋಪಿ ಎಂದು ತನಿಖೆಯಲ್ಲಿ ಕಂಡುಬಂದಿಲ್ಲ ಎಂದು ಕೇಜ್ರಿವಾಲ್ ಪರ ವಕೀಲರು ಕೋರ್ಟ್‌ಗೆ ಮನವರಿಕೆ ಮಾಡಿದರು.

ಕೇಜ್ರಿವಾಲ್ ಅವರನ್ನು ಮಾರ್ಚ್‌ 21ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಚುನಾವಣಾ ಪ್ರಚಾರದ ಕಾರಣ ದೆಹಲಿ ಸಿಎಂಗೆ ಸುಪ್ರೀಂ ಕೋರ್ಟ್ ಜೂನ್‌ 1ರವರೆಗೂ ಜಾಮೀನು ನೀಡಿತ್ತು. ಜೂನ್‌ 2 ರಂದು ಕೇಜ್ರಿವಾಲ್‌ ಶರಣಾಗಿದ್ದರು.

 

 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಭಿನ್ನಮತೀಯರಿಗೆ ‘ಮಾನ್ಸೂನ್ ಆಫರ್’ ನೀಡಿದ ಅಖಿಲೇಶ್ ಯಾದವ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ...

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ...

ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಬಂಧನ

ಪಿಸ್ತೂಲ್‌ ಹಿಡಿದು ರೈತರಿಗೆ ಬೆದರಿಸಿದ ಆರೋಪದ ಮೇಲೆ ವಿವಾದಾತ್ಮಕ ಐಎಎಸ್ ಅಧಿಕಾರಿ...