ದೆಹಲಿ| 40 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಮಗು; ಮುಂದುವರೆದ ರಕ್ಷಣಾ ಕಾರ್ಯ

Date:

ರಾಷ್ಟ್ರ ರಾಜಧಾನಿ ದೆಹಲಿಯ ಕೇಶೋಪುರ್ ಮಂಡಿ ಬಳಿಯ ದೆಹಲಿ ಜಲ ಬೋರ್ಡ್ ಘಟಕದೊಳಗಿನ 40 ಅಡಿ ಆಳದ ಬೋರ್‌ವೆಲ್‌ಗೆ (ಕೊಳವೆ ಬಾವಿ) ಮಗುವೊಂದು ಬಿದ್ದಿದ್ದು, ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡ ಧಾವಿಸಿ ರಕ್ಷಣಾ ಕಾರ್ಯಾಚರಣೆಯ ಸಿದ್ಧತೆ ನಡೆಸುತ್ತಿದೆ.

ಎನ್‌ಡಿಆರ್‌ಎಫ್‌ನಿಂದ ಇನ್‌ಸ್ಪೆಕ್ಟರ್ ವೀರ್ ಪ್ರತಾಪ್ ಸಿಂಗ್ ಅವರೊಂದಿಗೆ ಎನ್‌ಡಿಆರ್‌ಎಫ್ ತಂಡವು ಸ್ಥಳಕ್ಕೆ ಆಗಮಿಸಿದ್ದು, ಮಗು ಬಿದ್ದಿರುವ ಬೋರ್‌ವೆಲ್‌ಗೆ ಸಮವಾಗಿ ಹೊಸ ಬೋರ್‌ವೆಲ್ ಕೊರೆದು ರಕ್ಷಣಾ ಕಾರ್ಯಾಚರಣೆಯನ್ನು ಶೀಘ್ರ ಆರಂಭ ಮಾಡಲಿದೆ ಎಂದು ಎಎನ್‌ಐ ವರದಿ ಮಾಡಿದೆ.

ಸ್ಥಳದಲ್ಲಿ ದೆಹಲಿ ಅಗ್ನಿ ಶಾಮಕದಳ (ಡಿಎಫ್‌ಎಸ್), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ದೆಹಲಿ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯ ಸಾಗುತ್ತಿದೆ. ಈ ಬಗ್ಗೆ ಎಎನ್‌ಐಗೆ ಪ್ರತಿಕ್ರಿಯಿಸಿದ “ನಾವು ಈ ಬೋರ್‌ವೆಲ್‌ಗೆ ಸಮವಾಗಿ ಹೊಸ ಬೋರ್‌ವೆಲ್ ಕೊರೆಯುವ ಮೂಲಕ ಮಗುವಿನ ರಕ್ಷಣಾ ಕಾರ್ಯವನ್ನು ನಡೆಸುತ್ತೇವೆ, ಶೀಘ್ರವೇ ಈ ಕಾರ್ಯ ಆರಂಭವಾಗಲಿದೆ. ಆದರೆ ಇದು ದೀರ್ಘವಾದ ರಕ್ಷಣಾ ಕಾರ್ಯ” ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.


ಕಳೆದ ವರ್ಷ ಜುಲೈನಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಬಿಹಾರದಲ್ಲಿ 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿತ್ತು. ಸತತ ಐದು ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ರಕ್ಷಿಸಲಾಗಿತ್ತು. ಇನ್ನು ಜೂನ್‌ನಲ್ಲಿ ಇದೇ ರೀತಿಯ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದ್ದು, 300 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಎರಡೂವರೆ ವರ್ಷದ ಪುಟ್ಟ ಮಗು ತನ್ನ ಪ್ರಾಣ ಕಳೆದುಕೊಂಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೂರು ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಡಿಎಂಕೆ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಸಾಂವಿಧಾನಿಕ...

ಮೈಕ್ರೋಸಾಫ್ಟ್ ತಂತ್ರಾಂಶದಲ್ಲಿ ತಾಂತ್ರಿಕ ತೊಂದರೆ: ವಿಶ್ವಾದ್ಯಂತ ವಿಮಾನ, ಬ್ಯಾಂಕ್, ಷೇರು ಮುಂತಾದ ಸೇವೆಗಳಲ್ಲಿ ವ್ಯತ್ಯಯ

ಮೈಕ್ರೋಸಾಫ್ಟ್ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಯುಂಟಾದ ಕಾರಣ ಕಂಪ್ಯೂಟರ್‌ನಲ್ಲಿ ಮೈಕ್ರೋಸಾಫ್ಟ್‌ ಅವಲಂಬಿಸಿದ್ದ ಹಲವು...

ನಾಗರಿಕ ಸೇವಾ ಪರೀಕ್ಷೆಯಲ್ಲಿ ವಂಚನೆಗೆ ಯತ್ನ ಆರೋಪ; ಪೂಜಾ ಖೇಡ್ಕರ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಯುಪಿಎಸ್‌ಸಿ

ನಾಗರಿಕ ಸೇವಾ ಪರೀಕ್ಷೆಯಲ್ಲಿ ವಂಚನೆಗೆ ಯತ್ನಿಸಿದ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್...

ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರಿ ಪಾಲಿನ ಕಡಿತವನ್ನು ಸಹಿಸುವುದಿಲ್ಲ: ಕಾಂಗ್ರೆಸ್

12 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಸರ್ಕಾರದ ಪಾಲನ್ನು ಶೇ.51ಕ್ಕಿಂತ ಕಡಿಮೆ ಮಾಡಲು...