ದೆಹಲಿಯಲ್ಲಿ ಮೋದಿ ಕ್ರೌರ್ಯ, ಪೊಲೀಸರ ಗೂಂಡಾಗಿರಿ: 134 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು; ಸಾವಿನ ಅಂಚಿನಲ್ಲಿ ವಿದ್ಯಾರ್ಥಿನಿ

Date:

ದೆಹಲಿಯಲ್ಲಿ ಸೋಮವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪೋಲೀಸರು ಗೂಂಡಾಗಿರಿ ಪ್ರದರ್ಶಿಸಿದ್ದು, ಭೀಕರ ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸರ ಕ್ರೌರ್ಯದ ದಾಳಿಯಲ್ಲಿ 134ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರೆಲ್ಲರೂ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಓರ್ವ ವಿದ್ಯಾರ್ಥಿನಿಗೆ ತೀವ್ರ ಪೆಟ್ಟುಬಿದ್ದಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

- Advertisement -

ದೆಹಲಿಯ ರಾಮ್ ಮನೋಹರ್ ಲೋಹಿಯಾ (RML) ಆಸ್ಪತ್ರೆಗೆ ಸುಮಾರು 110 ಗಾಯಾಳುಗಳನ್ನು ಕರೆತರಲಾಗಿದ್ದು, ಕನಿಷ್ಠ 24 ಜನರನ್ನು ಲೇಡಿ ಹಾರ್ಡಿಂಗ್ ಮೆಡಿಕಲ್ ಕಾಲೇಜ್ (LHMC) ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 20 ವಿದ್ಯಾರ್ಥಿಗಳು ತೀವ್ರ ಸ್ವರೂಪದ ಗಾಯಗಳಿಗೆ ತುತ್ತಾಗಿದ್ದು, 8 ಮಂದಿಯನ್ನು ತುರ್ತುನಿಗಾ ಘಟಕದಲ್ಲಿ ದಾಖಲಿಸಿ, ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ...

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ ಶ್ರದ್ಧೆಗಿಂತ ಹೆಚ್ಚಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ಅಹಂಕಾರ ಮತ್ತು ಯುವಜನ ವಿರೋಧಿ ಮನಸ್ಥಿತಿಯ ನೇರ ಪ್ರದರ್ಶನವಾಗಿ ಮಾರ್ಪಟ್ಟಿತು. ರಾವಣ, ಕುಂಭಕರ್ಣ...

ಪಶ್ಚಿಮ ಪದವೀಧರರ ಕ್ಷೇತ್ರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್ ಯತ್ನ;...

ಪಶ್ಚಿಮ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀಧರರ ಕ್ಷೇತ್ರವೀಗ ಬಿಜೆಪಿಯ...

ಸುಮಾರು 20 ವರ್ಷದ ಯುವತಿಯೊಬ್ಬಳು ‘ಹೈಪಾಕ್ಸಿಕ್ ಬ್ರೈನ್ ಇಂಜುರಿ’ (ತಲೆಯ ಭಾಗಕ್ಕೆ ತೀವ್ರ ಏಟ ಬಿದ್ದು ಮಿದುಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗುವ ಗಂಭೀರ ಸ್ಥಿತಿ) ಯಿಂದ ಬಳಲುತ್ತಿದ್ದಾರೆ. ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಆಕೆಯನ್ನು ದಾಖಲಿಸಲಾಗಿದೆ. ಆಕೆಯ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ.

ಹೆಚ್ಚಿನ ವಿದ್ಯಾರ್ಥಿಗಳಿಗೆ ಮುಖ ಮತ್ತು ತಲೆಯ ಭಾಗದಲ್ಲಿ ಆಳವಾದ ಗಾಯಗಳು, ತುಟಿ ಸೀಳುವುದು, ತಲೆಬುರುಡೆಗೆ ಏಟು ಹಾಗೂ ತೀವ್ರ ಲಾಠಿ ಏಟಿನ ಗಾಯಗಳಾಗಿವೆ.

ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹತೋಟಿಗೆ ತರಲು ದೆಹಲಿ ಪೋಲೀಸರು ಗೂಂಡಾಗಿರಿ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ಮತದಾರರ ಪಟ್ಟಿ ಪರಿಷ್ಕರಣೆ ಸಾಫ್ಟ್‌ವೇರ್‌ನಲ್ಲಿ 4 ಬದಲಾವಣೆ; ಮಹಾರಾಷ್ಟ್ರದ ಮನವಿಗೆ ಕೊನೆಗೂ ಒಪ್ಪಿದ ಚುನಾವಣಾ ಆಯೋಗ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಹೆಚ್ಚಿನ...

ಒಬ್ಬ ರಾವಣ ಮತ್ತೊಬ್ಬ ರಾವಣನ ಮೇಲೆ ಬಾಣ ಬಿಡುವ ನಾಟಕ: ಮೋದಿ ವಿರುದ್ಧ ಧೃವ್ ರಾಠಿ ವ್ಯಂಗ್ಯ

ದೆಹಲಿಯಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾವಣನ...

ಭಾರತೀಯರೊಂದಿಗೆ ಗರ್ಬಾ ಹೆಜ್ಜೆ ಹಾಕಿದ ನ್ಯೂಯಾರ್ಕ್‌ ಮೇಯರ್‌ ಜೋಹ್ರಾನ್ ಮಮ್ದಾನಿ

ನ್ಯೂಯಾರ್ಕ್ ನಗರದ ಮೇಯರ್ ಜೋಹ್ರಾನ್ ಮಮ್ದಾನಿ ಅವರು ನವರಾತ್ರಿ ಆಚರಣೆಯಲ್ಲಿ ಭಾರತೀಯರೊಂದಿಗೆ...