ತರಗತಿಯ ಗೋಡೆಗಳಿಗೆ ಸಗಣಿ ಬಳಿದ ದೆಹಲಿ ಕಾಲೇಜು ಪ್ರಾಂಶುಪಾಲೆ; ವಿಡಿಯೋ ವೈರಲ್

Date:

ತರಗತಿಯ ಗೋಡೆಗಳಿಗೆ ದೆಹಲಿ ಕಾಲೇಜು ಪ್ರಾಂಶುಪಾಲೆ ಸಗಣಿ ಬಳಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರಾಂಶುಪಾಲೆ ಮೇಜಿನ ಮೇಲೆ ನಿಂತು ಕೈಯಲ್ಲೇ ಸೆಗಣಿ ತೆಗೆದು ಗೋಡೆಗೆ ಬಳಿಯುತ್ತಿರುವ ವಿಡಿಯೋದಲ್ಲಿ ಕಂಡು ಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ “ಇದು ನನ್ನ ಸಂಶೋಧನೆ ಯೋಜನೆ” ಎಂದು ಪ್ರಾಂಶುಪಾಲೆ ಹೇಳಿಕೊಂಡಿದ್ದಾರೆ.

- Advertisement -

ಸುಮಾರು 35 ಸೆಕೆಂಡುಗಳ ವಿಡಿಯೋದಲ್ಲಿರುವುದು ದೆಹಲಿಯ ಲಕ್ಷ್ಮೀಬಾಯಿ ಕಾಲೇಜಿನ ಪ್ರಾಂಶುಪಾಲೆ ಪ್ರತ್ಯುಷ್ ವತ್ಸಲ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, “ಇದು ನನ್ನ ಸಂಶೋಧನಾ ಯೋಜನೆಯೊಂದರ ಭಾಗವಾಗಿದೆ. ಸಂಶೋಧನೆ ಮುಂದುವರೆದಿದೆ. ಒಂದು ವಾರದ ಬಳಿಕ ಸಂಪೂರ್ಣ ಮಾಹಿತಿ ನೀಡುವೆ. ಸಗಣಿ ನೈಸರ್ಗಿಕವಾದುದ್ದು, ಅದನ್ನು ಮುಟ್ಟುವುದರಿಂದ ಏನೂ ಆಗುವುದಿಲ್ಲ. ಆದರೆ ಕೆಲವರು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತೆಯ ಅಪಹರಣ; ವಿಡಿಯೋ ವೈರಲ್

ಪ್ರಾಂಶುಪಾಲೆ ಈ ವಿಡಿಯೋವನ್ನು ತನ್ನ ಕಾಲೇಜಿನ ವಾಟ್ಸಾಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲಿಂದ ಎಲ್ಲಾ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. “ಶೀಘ್ರವೇ ಈ ಕೋಣೆಯು ಹೊಸ ರೀತಿಯಲ್ಲಿ ಕಾಣಲಿದೆ. ಇದು ನೀವು ಪಾಠ ಮಾಡುವ ಅನುಭವವನ್ನು ಹಿತಗೊಳಿಸಲಿದೆ” ಎಂದು ಪ್ರಾಂಶುಪಾಲೆ ಹೇಳಿದ್ದಾರೆ.

ಆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಉದ್ಯೋಗಾವಕಾಶಗಳ ಬಗ್ಗೆ ಶಿಕ್ಷಣ ತಜ್ಞ ವಿಜೇಂದರ್ ಚೌಹಾಣ್ ಅವರು ಪ್ರಶ್ನಿಸಿದ್ದಾರೆ. “ಅವರು ನಮ್ಮ ವಿಶ್ವವಿದ್ಯಾಲಯದ ಕಾಲೇಜಿನ ಪ್ರಾಂಶುಪಾಲರು. ತರಗತಿಯ ಗೋಡೆಗಳ ಮೇಲೆ ಗೋವಿನ ಮಲವನ್ನು ಬಳಿಯುತ್ತಿದ್ದಾರೆ. ನನಗೆ ಈಗ ಹಲವು ವಿಷಯಗಳ ಬಗ್ಗೆ ಚಿಂತೆ ಉಂಟಾಗಿದೆ. ನೀವು ಉದ್ಯೋಗದಾತರಾಗಿದ್ದರೆ ಇಂತಹ ಕಾಲೇಜಿನಲ್ಲಿ ಕಲಿತವರಿಗೆ ಉದ್ಯೋಗ ನೀಡುವಿರಾ” ಎಂದು ಪ್ರಶ್ನಿಸಿದ್ದಾರೆ.

ಸದ್ಯ ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ನೆಟ್ಟಿಗರು ಪ್ರಾಂಶುಪಾಲೆಯನ್ನು ಹಾಡಿಹೊಗಳಿದರೆ, ಇನ್ನು ಕೆಲವರು ಇದು ಅಂಧ ಭಕ್ತಿ ಎಂದಿದ್ದಾರೆ. “ಇದು ತರಗತಿ ತಂಪಾಗಿರಲು ಉತ್ತಮ ಕ್ರಮವೇ ಅಥವಾ ಅಂಧ ಭಕ್ತಿಯೇ” ಎಂದು ಗ್ರೋಕ್ ಅನ್ನು ಕೆಲವರು ಪ್ರಶ್ನಿಸಿದ್ದಾರೆ. “ಕಾಲೇಜಿನ ಗೋಡೆಗೆ ಸಗಣಿ ಬಳಿದ ಪ್ರಾಂಶುಪಾಲೆ ತನ್ನ ಮನೆಯ ಗೋಡೆಗೂ ಬಳಿಯಬಹುದು ಎಂದುಕೊಂಡಿದ್ದೇನೆ” ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದ್ದಾರೆ.

ಅಷ್ಟಕ್ಕೂ ವಿದ್ಯಾವಂತರೇ ಸಗಣಿಯನ್ನು ಪವಿತ್ರವೆಂದು ಹೇಳಿರುವುದು ಇದೇ ಮೊದಲಲ್ಲ. 2023ರಲ್ಲಿ ಮಧ್ಯಪ್ರದೇಶದ ಸಾಗರ್‌ನ ವೈದ್ಯರೊಬ್ಬರು ತಮ್ಮ ಕಾರಿಗೆ ಗೋವಿನ ಸಗಣಿಯನ್ನು ಹಾಕಿದ್ದರು.

“ಗೋವಿನ ಸಗಣಿ ಲೇಪನ ಮಾಡುವುದರಿಂದ ಕಾರಿನ ಒಳಗಿನ ತಾಪಮಾನವು ಹೆಚ್ಚಾಗುವುದಿಲ್ಲ” ಎಂಬ ಅವೈಜ್ಞಾನಿಕ ಹೇಳಿಕೆಗಳನ್ನು ವೈದ್ಯರು ನೀಡಿದ್ದರು. ಹಾಗೆಯೇ 2019ರಲ್ಲಿ ಗೃಹಿಣಿ ಸೆಜಲ್ ಷಾ ಕಾರು ತಂಪಾಗಿರಲಿ ಎಂದು ತನ್ನ ಕಾರಿಗೆ ಸಗಣಿಯನ್ನು ದಪ್ಪವಾಗಿ ಬಳಿದಿದ್ದರು!

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...