ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವೈದ್ಯಕೀಯ ಕಾರಣದ ಹಿನ್ನೆಯಲ್ಲಿ ಮಧ್ಯಂತರ ಜಾಮೀನನ್ನು ನೀಡಬೇಕೆಂಬ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನದಲ್ಲಿರುವ ಕೇಜ್ರಿವಾಲ್ ಅವರಿಗೆ ವೈದ್ಯಕೀಯ ಅಗತ್ಯತೆಗಳ ಬಗ್ಗೆ ಕಾಳಜಿ ವಹಿಸುವಂತೆ ತಿಹಾರ್ ಸೆರೆಮನೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನ್ಯಾಯಾಧೀಶರು ಹಾಗೆಯೇ ಕೇಜ್ರಿವಾಲ್ ಅವರ ನ್ಯಾಯಾಂಗ ಅವಧಿಯನ್ನು ಜೂ.19ರವರೆಗೆ ವಿಸ್ತರಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ
ಈ ಪ್ರಕರಣದಲ್ಲಿ ನಿಯಮಿತ ಜಾಮೀನು ಮನವಿಯ ಅರ್ಜಿಯ ವಿಚಾರಣೆಯನ್ನು ಜೂ.7 ರಂದು ಪರಿಸೀಲಿಸುವುದಾಗಿ ತಿಳಿಸಿದೆ.
ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ 21 ದಿನಗಳ ಅವಧಿಯವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂ.1 ರಂದು ಮಧ್ಯಂತರ ಜಾಮೀನಿನ ಅವಧಿ ಮುಗಿದ ನಂತರ ಜೈಲಿಗೆ ತೆರಳಿದ್ದರು.
