ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ.
ಹಲವು ಸಮನ್ಸ್ ಗಳನ್ನು ತಪ್ಪಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಈಡಿ) ನೀಡಿದ ಎರಡು ದೂರುಗಳ ಆಧಾರದ ಮೇಲೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ನ್ಯಾಯಾಲಯವು 15,000 ರೂಪಾಯಿ ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿದೆ.
Delhi Court grants bail to Chief Minister Arvind Kejriwal in ED’s complaints alleging non compliance of summons issued to him by the probe agency. #ArvindKejriwal #ED https://t.co/UHXUzuGqKy
— Live Law (@LiveLawIndia) March 16, 2024
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರಿಗೆ ಇಡಿ 11 ಬಾರಿ ಸಮನ್ಸ್ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ, ಕೋರ್ಟ್ ಕೇಜ್ರಿವಾಲ್ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಹಾಜರಾಗುವಂತೆ ಆದೇಶ ನೀಡತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಇಂದು ಕೋರ್ಟ್ಗೆ ಹಾಜರಾಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಅವರಿಗೆ ಜಾಮೀನು ಮಂಜೂರು ಮಾಡಿದೆ.
#WATCH | Delhi CM Arvind Kejriwal returns to his residence after a city court granted bail to him in ED summons case pic.twitter.com/YfTmqn8xtT
— ANI (@ANI) March 16, 2024
ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಕೇಶ್ ಸೈಲ್ ಅವರು ಕೇಜ್ರಿವಾಲ್ ಮತ್ತು ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸುವ ವಕೀಲರ ವಾದವನ್ನು ಆಲಿಸಿ, ಫೆಬ್ರವರಿ 17ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲು ಅನುಮತಿ ನೀಡಿದ್ದರು. ಆದರೆ ಮಾ.16ಕ್ಕೆ ಕೋರ್ಟ್ಗೆ ದೈಹಿಕವಾಗಿ ಹಾಜರಾಗಬೇಕು ಎಂದು ತಿಳಿಸಿದ್ದರು.
