ಜಮ್ಮು ಕಾಶ್ಮೀರ | ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು ಮಂಜೂರು

Date:

Advertisements

ಭಯೋತ್ಪಾದಕರಿಗೆ ಧನಸಹಾಯ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2ರವರೆಗೆ ಮಧ್ಯಂತರ ಜಾಮೀನು ನೀಡಿದೆ.

2017ರ ಭಯೋತ್ಪಾದಕರಿಗೆ ಧನಸಹಾಯ ಮಾಡಿದ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 2017ರಲ್ಲಿ ರಶೀದ್ ಅವರನ್ನು ಬಂಧಿಸಲಾಗಿದೆ. 2019ರಿಂದ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನು ಓದಿದ್ದೀರಾ? ಪ್ರಮಾಣ ವಚನ ಸ್ವೀಕಾರಕ್ಕೆ ಸಂಸದ ಇಂಜಿನಿಯರ್ ರಶೀದ್‌ಗೆ ಪೆರೋಲ್ ನೀಡಿದ ದೆಹಲಿ ಹೈಕೋರ್ಟ್

Advertisements

ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ಧನಸಹಾಯ ನೀಡಿದ ಆರೋಪದಲ್ಲಿ ಎನ್‌ಐಎ ಕಾಶ್ಮೀರಿ ಉದ್ಯಮಿ ಜಹೂರ್ ವಾತಾಲಿ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಇಂಜಿನಿಯರ್‌ ರಶೀದ್ ಹೆಸರು ಕೇಳಿಬಂದಿದೆ

ಈ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್, ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಸೇರಿದಂತೆ ಹಲವರ ವಿರುದ್ಧ ಸಂಸ್ಥೆ ಆರೋಪಪಟ್ಟಿ ಸಲ್ಲಿಸಿತ್ತು.

2022ರಲ್ಲಿ ಮಲಿಕ್ ಅವರು ಆರೋಪಗಳಿಗೆ ತಪ್ಪೊಪ್ಪಿಕೊಂಡ ನಂತರ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ರಶೀದ್

ರಶೀದ್ ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X