BREAKING NEWS| ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

Date:

2020ರ ದೆಹಲಿ ಗಲಭೆಗೆ ಪಿತೂರಿ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಉಮರ್ ಖಾಲಿದ್ ಅವರಿಗೆ ದೆಹಲಿ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

- Advertisement -

ಕುಟುಂಬದ ವಿವಾಹ ಸಮಾರಂಭಕ್ಕೆ ಹಾಜರಾಗಲು 7 ದಿನಗಳ ಮಧ್ಯಂತರ ಜಾಮೀನು ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ದೆಹಲಿ ಗಲಭೆ ಪ್ರಕರಣ | ನನ್ನನ್ನು ಆರೋಪಿ ಎನ್ನಲು ಆಧಾರ ಏನಿದೆ: ಉಮರ್ ಖಾಲಿದ್ ಪ್ರಶ್ನೆ

2020ರ ಫೆಬ್ರವರಿಯಲ್ಲಿ ನಡೆದ ನಡೆದ ದೆಹಲಿ ಗಲಭೆ ಸಂಬಂಧ ಪಿತೂರಿ ಮಾಡಿದ ಆರೋಪದಲ್ಲಿ 2020ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಅದಾದ ಬಳಿಕ ಉಮರ್ ಸುಪ್ರೀಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿ ಬಳಿಕ ಹಿಂಪಡೆದಿದ್ದರು.

2020ರ ಫೆಬ್ರವರಿಯಲ್ಲಿ ನಡೆದ ನಡೆದ ದೆಹಲಿ ಗಲಭೆ ಸಂಬಂಧ ಪಿತೂರಿ ಮಾಡಿದ ಆರೋಪದಲ್ಲಿ 2020ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಅದಾದ ಬಳಿಕ ಉಮರ್ ಸುಪ್ರೀಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿ ಬಳಿಕ ಹಿಂಪಡೆದಿದ್ದರು.

ಅದಾದ ಬಳಿಕ ಮತ್ತೆ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯನ್ನು ಈ ವರ್ಷದ ಆರಂಭದಲ್ಲಿ ಕೋರ್ಟ್ ವಜಾಗೊಳಿಸಿದೆ. ಸದ್ಯ ಈ ಅರ್ಜಿ ತಿರಸ್ಕಾರ ಪ್ರಶ್ನಿಸಿ ಉಮರ್ ಖಾಲಿದ್ ಸಲ್ಲಿಸಿರುವ ಮೇಲ್ಮನವಿ ದೆಹಲಿ ಹೈಕೋರ್ಟ್‌ನಲ್ಲಿ ಬಾಕಿಯಿದೆ.

ಏನಿದು ದೆಹಲಿ ಗಲಭೆ?

2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಕೆಲ ಕಿಡಿಗೇಡಿಗಳಿಂದ ಹಿಂಚಾಸಾರ ಭುಗಿಲೆದ್ದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು 2020ರ ಸೆ.13ರಂದು ದೆಹಲಿ ಪೊಲೀಸರು ಬಂಧಿಸಿದ್ದರು. ಮಾತ್ರವಲ್ಲದೆ, ಅವರ ವಿರುದ್ಧ ಧಾರ್ಮಿಕ ಭಾವನೆ ಕದಡಿದ್ದಾರೆ ಎಂಬ ಆರೋಪ ಹೊರಿಸಿ, ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ’ (ಯುಎಪಿಎ) ಅಡಿ ಪ್ರಕರಣವನ್ನೂ ದಾಖಲಿಸಿದ್ದರು.

ಉಮರ್ ಖಾಲಿದ್ ಬಂಧನವಾಗಿ ನಾಲ್ಕೂವರೆ ವರ್ಷಗಳಾಗಿವೆ. ಖಾಲಿದ್ ಜೊತೆಗೆ ಬಂಧನಕ್ಕೊಳಗಾಗಿದ್ದ 18 ಮಂದಿ ಆರೋಪಿಗಳಲ್ಲಿ ಇನ್ನೂ 12 ಮಂದಿ ಜೈಲಿನಲ್ಲಿಯೇ ಇದ್ದಾರೆ. ದೆಹಲಿ ಪೊಲೀಸರು ಪರಿಪೂರ್ಣ ಜಾರ್ಜ್‌ಶೀಟ್‌ ಸಲ್ಲಿಸದೆ, ವಿಚಾರಣೆಯೂ ಇಲ್ಲದೆ ಖಾಲಿದ್ ದೆಹಲಿಯ ತಿಹಾರ್ ಜೈಲಿನಲ್ಲಿ ಸುದೀರ್ಘ ಜೈಲುವಾಸ ಅನುಭವಿಸಿದ್ದಾರೆ.

2021ರ ಜುಲೈ ತಿಂಗಳಿನಲ್ಲಿ ಖಾಲಿದ್ ಮೊದಲ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅದೇ ವರ್ಷದ ಆಗಸ್ಟ್‌ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಅದಾದ ಎಂಟು ತಿಂಗಳ ನಂತರ, ಅಂದರೆ, 2022ರ ಮಾರ್ಚ್ 24ರವರೆಗೂ ವಿಚಾರಣೆ ಮುಂದುವರೆದು, ಅಂದು ದೆಹಲಿ ಸೆಷನ್ಸ್ ನ್ಯಾಯಾಲಯವು ಜಾಮೀನು ನಿರಾಕರಿಸಿತು. ಅಲ್ಲದೆ, ಖಾಲಿದ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ 14 ಬಾರಿ ಮರು ನಿಗದಿಪಡಿಸಲಾಗಿದೆ. ಸೆಷನ್ಸ್ ನ್ಯಾಯಾಲಯ ಎರಡು ಬಾರಿ ಮತ್ತು ದೆಹಲಿ ಹೈಕೋರ್ಟ್ ಒಮ್ಮೆ ಜಾಮೀನು ತಿರಸ್ಕರಿಸಿದೆ. ಹೀಗಾಗಿ, ಖಾಲಿದ್ ಕಂಬಿಗಳ ಹಿಂದೆ ದಿನ ದೂಡುತ್ತಿದ್ದರು.

ಹಲವು ಪ್ರಕರಣಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಧಾರದಲ್ಲಿ ಜಾಮೀನು ನೀಡುವ ನ್ಯಾಯಾಲಯಗಳು, ಖಾಲಿದ್ ವಿಚಾರದಲ್ಲಿ ಮಾತ್ರ ಮೌನಕ್ಕೆ ಜಾರಿವೆ. ಜಾಮೀನು ಅರ್ಜಿ, ಪ್ರಕರಣದ ವಿಚಾರಣೆಯನ್ನು ಪದೇ-ಪದೇ ಮುಂದೂಡುತ್ತಲೇ ಬಂದಿದ್ದವು.

ಜೈಲು ವಾಸದಿಂದ ಬೇಸತ್ತಿದ್ದ ಖಾಲಿದ್, ಡಿಸೆಂಬರ್ 7ರಂದು ನಡೆದ ವಿಚಾರಣೆ ವೇಳೆ, ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಪಿತೂರಿ ಆರೋಪದ ಮೇಲೆ ನನ್ನ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಲಾಗಿದೆ. ಆದರೆ, ಪೊಲೀಸರು ಯಾವ ಆಧಾರದಲ್ಲಿ ನನ್ನನ್ನು ಆರೋಪಿಯನ್ನಾಗಿ ಮಾಡಿದ್ದಾರೆ. ಯಾವುದೇ ನೇರವಾದ ಸಾಕ್ಷ್ಯಗಳಿಲ್ಲ ಎಂದು ವಾದಿಸಿದ್ದರು.

ವಾದ ಆಲಿಸಿದ್ದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತ್ತು. ಇದೀಗ, 7 ದಿನಗಳ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...