ಅಬರಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿ ದೆಹಲಿ ನ್ಯಾಯಾಲಯವು ಆದೇಶ ನೀಡಿದೆ. ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ವಿಚಾರಣೆಗಾಗಿ 10 ದಿನಗಳ ಕಸ್ಟಡಿಗೆ ನೀಡುವಂತೆ ಕೋರಿದ್ದರು.
BREAKING | Delhi Court Remands Chief Minister Arvind Kejriwal To ED Custody In Liquor Policy Case Till March 28#ArvindKejriwal #ArvindKejriwalArrested #ED pic.twitter.com/A3omzUhD4u
— Live Law (@LiveLawIndia) March 22, 2024
ಮನವಿಯ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರು, 10 ದಿನಗಳ ಬದಲಾಗಿ ಆರು ದಿನಗಳವರೆಗೆ ಇಡಿ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಮಾರ್ಚ್ 28 ರಂದು ಮಧ್ಯಾಹ್ನ 2 ಗಂಟೆಗೆ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯವು ತಿಳಿಸಿದೆ.
#WATCH | Delhi court remands CM Arvind Kejriwal to ED custody till 28 March in excise policy case.
Arvind Kejriwal’s lawyer Madan Lal says, “ED was asking for a 10-day remand. They said that to trace the money trail, a custodial investigation is necessary. Considering all… pic.twitter.com/FrNLrbrFse
— ANI (@ANI) March 22, 2024
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ಅವರನ್ನು ಇಡಿ ಅಧಿಕಾರಿಗಳು ಗುರುವಾರ ಸಂಜೆ ಬಂಧಿಸಿದ್ದರು.
ಇದನ್ನು ಓದಿದ್ದೀರಾ? ಜಗ್ಗಿ ವಾಸುದೇವ್ ಆಶ್ರಮದಿಂದ 6 ಮಂದಿ ನಾಪತ್ತೆ: ಹೈಕೋರ್ಟ್ಗೆ ತಮಿಳುನಾಡು ಪೊಲೀಸರ ಮಾಹಿತಿ
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದರು.
ಕೇಜ್ರಿವಾಲ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಇಡಿ ಹಾಜರುಪಡಿಸಿದಾಗ ಅವರ ರಿಮಾಂಡ್ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣವನ್ನು ವಾದಿಸುವುದಾಗಿ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದರು. ಇದನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತ್ತು.
