ಇ.ಡಿ ದೂರಿನ ನಂತರ ಕೇಜ್ರಿವಾಲ್‌ಗೆ ದೆಹಲಿ ಹೈಕೋರ್ಟ್ ಸಮನ್ಸ್

Date:

ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ ಹಲವು ಸಮನ್ಸ್‌ಗಳಿಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ನೀಡಿದ ಹೊಸ ದೂರುಗಳ ಮೇರೆಗೆ ದೆಹಲಿ ಹೈಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.

- Advertisement -

ಮಾರ್ಚ್‌ 16ರೊಳಗೆ ಹಾಜರಾಗಬೇಕೆಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಕೋರ್ಟ್ ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಸೆಕ್ಷನ್ 8ರಡಿ 8 ಸಮನ್ಸ್ ಜಾರಿಗೊಳಿಸಿದರೂ ಎಎಪಿ ಮುಖ್ಯಸ್ಥರು ಸಮನ್ಸ್‌ಗಳಿಗೆ ಗೌರವ ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಮಾ.06 ರಂದು ದೂರು ದಾಖಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕೋರ್ಟ್‌ನ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ದಿವ್ಯ ಮಲ್ಹೋತ್ರಾ ಇಂದು ಅರವಿಂದ್ ಕೇಜ್ರಿವಾಲ್ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಸಮನ್ಸ್‌ ಬಂದ ನಂತರ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷ ನಾಯಕರಿಗೆ ಇ.ಡಿ ಮೂಲಕ ಕಿರುಕುಳ ನೀಡುತ್ತಿದ್ದು, ಬಿಜೆಪಿಗೆ ಸೇರ್ಪಡೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ.

ದೆಹಲಿ ಹೈಕೋರ್ಟ್ ಮೊದಲ ಮೂರು ಸಮನ್ಸ್‌ಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 6 ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪ ಪಟ್ಟಿಯಲ್ಲಿ ಹಲವು ಬಾರಿ ಕೇಜ್ರಿವಾಲ್‌ ಹೆಸರನ್ನು ಉಲ್ಲೇಖಿಸಿದೆ. 2021-22ರ ಅಬಕಾರಿ ನೀತಿ ಜಾರಿಗೊಳಿಸುವ ಸಂದರ್ಭ ಆರೋಪಗಳನ್ನು ದೆಹಲಿ ಮುಖ್ಯಮಂತ್ರಿ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಹಾಗೂ ವಿಜಯ್‌ ನಾಯರ್‌ ಒಳಗೊಂಡಂತೆ ಹಲವು ನಾಯಕರನ್ನು ಇ.ಡಿ ಬಂಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...