ದೆಹಲಿ ಚುನಾವಣೆ | ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ, 500 ರೂ.ಗೆ ಎಲ್‌ಪಿಜಿ ಭರವಸೆ

Date:

ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಬಿಜೆಪಿಯ ಪ್ರಣಾಳಿಕೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ, ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ ನೀಡುವುದಾಗಿ ಮತ್ತು 500 ರೂ.ಗೆ ಎಲ್‌ಪಿಜಿ ವಿತರಿಸುವುದಾಗಿ ಬಿಜೆಪಿ ಭರವಸೆ ನೀಡಿದೆ.

- Advertisement -

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ನಡ್ಡಾ, “ಪ್ರಣಾಳಿಕೆಯು ದೆಹಲಿ ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ. ಪಕ್ಷವು ಅಧಿಕಾರಕ್ಕೆ ಬಂದರೆ ಅಸ್ತಿತ್ವದಲ್ಲಿರುವ ಎಲ್ಲ ಕಲ್ಯಾಣ ಯೋಜನೆಗಳನ್ನು ಮುಂದುವರಿಸುವುತ್ತದೆ. ಜೊತೆಗೆ, ಹಲವಾರು ಹೊಸ ಯೋಜನೆಗಳನ್ನು ಜಾರಿಗೆ ತರುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಾವು 2014ರ ಲೋಕಸಭಾ ಚುನಾವಣೆ ವೇಳೆ 500 ಭರವಸೆಗಳನ್ನು ದೇಶದ ಜನರಿಗೆ ನೀಡಿದ್ದೆವು. ಅದರಲ್ಲಿ, 499 ಭರವಸೆಗಳನ್ನು ಈಡೇರಿಸಿದ್ದೇವೆ. 2019ರಲ್ಲಿ, ನಾವು 235 ಭರವಸೆಗಳನ್ನು ನೀಡಿದ್ದೆವು, ಅವುಗಳಲ್ಲಿ 225 ಭರಸೆಗಳನ್ನು ಪೂರ್ಣಗೊಳಿಸಿದ್ದೇವೆ. ಉಳಿದವು ಅನುಷ್ಠಾನಗೊಳ್ಳುವ ಹಂತದಲ್ಲಿದೆ” ಎಂದು ಹೇಳಿದ್ದಾರೆ.

“ಮಹಿಳೆಯರ ಸಬಲೀಕರಣವು ಬಿಜೆಪಿಗೆ ಆದ್ಯತೆಯಾಗಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಮಹಿಳಾ ಸಮಾನ್ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ದೆಹಲಿಯಲ್ಲಿಯೂ ಅದೇ ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತೇವೆ” ಎಂದು ಹೇಳಿದ್ದಾರೆ.

ಬಿಜೆಪಿಯ ಪ್ರಮುಖ ಘೋಷಣೆಗಳು:

  • ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ₹2,500 ಮಾಸಿಕ ನೆರವು.
  • ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ ₹500ಕ್ಕೆ ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ಗಳು, ಹೋಳಿ ಮತ್ತು ದೀಪಾವಳಿ ಸಮಯದಲ್ಲಿ ತಲಾ ಒಂದು ಉಚಿತ ಸಿಲಿಂಡರ್.
  • ದೆಹಲಿಯಲ್ಲಿ ಪ್ರತಿ ಕುಟುಂಬಕ್ಕೆ ₹5 ಲಕ್ಷ ಆರೋಗ್ಯ ವಿಮೆಯನ್ನು ಒದಗಿಸುವ ಆಯುಷ್ಮಾನ್ ಭಾರತ್ ಯೋಜನೆಯ ಅನುಷ್ಠಾನ.
  • ದೆಹಲಿ ನಿವಾಸಿಗಳಿಗೆ ₹5 ಲಕ್ಷ ಹೆಚ್ಚುವರಿ ಆರೋಗ್ಯ ವಿಮೆ.
  • 60–70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ ₹2,500 ಮಾಸಿಕ ಪಿಂಚಣಿ.
  • 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ₹3,000 ಮಾಸಿಕ ಪಿಂಚಣಿ.
  • ಜೆಜೆ ಕ್ಲಸ್ಟರ್‌ಗಳಲ್ಲಿ ಅಟಲ್ ಕ್ಯಾಂಟೀನ್‌ಗಳ ಸ್ಥಾಪನೆ. ಕೇವಲ 5 ರೂ.ಗೆ ಪೌಷ್ಟಿಕ ಊಟ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...