ದೆಹಲಿ ಅಬಕಾರಿ ನೀತಿ ಪ್ರಕರಣ : ಕೇಜ್ರಿವಾಲ್‌ ಬಳಿಕ ʼಗಾಂಧಿಗಿರಿʼಗೆ ಮುಂದಾದ  ಮನೀಷ್ ಸಿಸೋಡಿಯಾ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ನ್ಯಾಯಪೀಠದ ಮುಂದೆ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಷ್ ಸಿಸೋಡಿಯಾ ಅವರು ಹಾಜರಾಗುವುದಿಲ್ಲ ಎಂದು ಹೇಳಿದ್ದಾರೆ.

- Advertisement -

ಅಧಿಕೃತ ಪತ್ರದ ಮೂಲಕ ಸಿಸೋಡಿಯಾ ಈ ವಿಷಯ ತಿಳಿಸಿದ್ದು, ತಮ್ಮ ಪರವಾಗಿ ಯಾವುದೇ ವಕೀಲರೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾತ್ರವಲ್ಲದೇ, ಈ ಪ್ರಕರಣದಲ್ಲಿ ನ್ಯಾಯ ದೊರಕುವ ನಿರೀಕ್ಷೆ ಇಲ್ಲ, ಇನ್ನು ಮುಂದೆ “ಸತ್ಯಾಗ್ರಹ”ದ ಮಾರ್ಗವನ್ನು ಅನುಸರಿಸುವುದಾಗಿ ತಿಳಿಸಿದ್ದು, ಮಹಾತ್ಮ ಗಾಂಧೀಜಿ ಅವರ ಅಹಿಂಸಾತ್ಮಕ ಹೋರಾಟದ ಮಾರ್ಗವನ್ನು  ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನಿನ್ನೆ (ಏ.27) ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಇದೇ ನ್ಯಾಯಪೀಠದ ಮುಂದೆ ವೈಯಕ್ತಿಕವಾಗಿಯೂ ಅಥವಾ ವಕೀಲರ ಮೂಲಕವೂ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಘೋಷಿಸಿದ್ದರು.

ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರಿಂದ ತಮ್ಮ ಅರ್ಜಿ ತಿರಸ್ಕೃತವಾದ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡಿದ್ದರು.

ಕೇಜ್ರಿವಾಲ್ ತಮ್ಮ ಪತ್ರದಲ್ಲಿ, “ನ್ಯಾಯಮೂರ್ತಿ ಸ್ವರ್ಣ ಕಾಂತ ಅವರಿಂದ ನ್ಯಾಯ ಸಿಗುವ ನನ್ನ ಭರವಸೆ ಇಲ್ಲ. ಆದ್ದರಿಂದ, ನಾನು ಮಹಾತ್ಮ ಗಾಂಧಿಯವರ ಸತ್ಯಾಗ್ರಹದ ಮಾರ್ಗವನ್ನು (ಗಾಂಧಿಗಿರಿ) ಅನುಸರಿಸಲು ನಿರ್ಧರಿಸಿದ್ದೇನೆ” ಎಂದು ಹೇಳಿದ್ದರು.

ಹೈಕೋರ್ಟ್ ನ್ಯಾಯಮೂರ್ತಿಗಳು ತನ್ನ ಅರ್ಜಿಯನ್ನು ವಜಾಗೊಳಿಸಿರುವುದನ್ನು ಪ್ರಶ್ನಿಸಿ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದರು.

ಇದನ್ನೂ ಓದಿ : ಅಹಿಂದ ನಾಯಕತ್ವ:‌ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವರ ಉತ್ತರಾಧಿಕಾರಿಯಾಗಬಲ್ಲರೇ?

AAP vs ದೆಹಲಿ ಹೈಕೋರ್ಟ್ ಮುಖಾಮುಖಿ : 10 ಪ್ರಮುಖ ಬೆಳವಣೆಗೆಗಳು

1. ಫೆಬ್ರವರಿ 27, 2026 ರಂದು ದೆಹಲಿಯ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರನ್ನು ಅಬಕಾರಿ ನೀತಿ ಹಗರಣದ ಆರೋಪದಿಂದ ಮುಕ್ತಗೊಳಿಸಿ (Discharge) ಆದೇಶ ನೀಡಿತ್ತು.

2. ವಿಚಾರಣಾ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (CBI) ದೆಹಲಿ ಹೈಕೋರ್ಟ್ ಮೆಟ್ಟಿಲೇರಿತು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ಪೀಠಕ್ಕೆ ವಹಿಸಲಾಯಿತು.

3. ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ವಿಚಾರಣೆಯಲ್ಲಿ ತಮಗೆ ನಿಷ್ಪಕ್ಷಪಾತ ನ್ಯಾಯ ಸಿಗುವ ಭರವಸೆ ಇಲ್ಲ ಎಂದು ಕೇಜ್ರಿವಾಲ್ ಮತ್ತು ಸಿಸೋಡಿಯಾ ಆತಂಕ ವ್ಯಕ್ತಪಡಿಸಿದರು. ಹೀಗಾಗಿ, ಈ ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದರು.

4. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಆಮ್ ಆದ್ಮಿ ಪಕ್ಷದ ನಾಯಕರ ಮನವಿಯನ್ನು ತಿರಸ್ಕರಿಸಿದರು. ನ್ಯಾಯಾಂಗದ ಆಡಳಿತಾತ್ಮಕ ಹಿತದೃಷ್ಟಿಯಿಂದ ಪೀಠ ಬದಲಾವಣೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

5. ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರು ಕೇಜ್ರಿವಾಲ್ ಅವರ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿ, “ಯಾವುದೇ ಬಲವಾದ ಪುರಾವೆಗಳಿಲ್ಲದೆ ಒಬ್ಬ ದೂರುದಾರ ನ್ಯಾಯಾಧೀಶರ ಮೇಲೆ ಸಂಶಯ ವ್ಯಕ್ತಪಡಿಸಲು ಅಥವಾ ತೀರ್ಪು ನೀಡಲು ಅವಕಾಶವಿಲ್ಲ” ಎಂದು ಗುಡುಗಿದರು.

6. ತಮ್ಮ ಕೋರಿಕೆಯನ್ನು ತಿರಸ್ಕರಿಸಿದ ನಂತರ, ಕೇಜ್ರಿವಾಲ್ ಅವರು ನ್ಯಾಯಮೂರ್ತಿ ಶರ್ಮಾ ಅವರ ಪೀಠದ ಮುಂದೆ ಹಾಜರಾಗಲು ನಿರಾಕರಿಸಿದರು. ಇದನ್ನು ಅವರು ತಮ್ಮದೇ ಶೈಲಿಯಲ್ಲಿ ‘ಸತ್ಯಾಗ್ರಹ’ ಎಂದು ಕರೆದರು.

7. ಏಪ್ರಿಲ್ 13 ರಂದು ನಡೆದ ನ್ಯಾಯಾಲಯದ ವಿಚಾರಣೆಯನ್ನು ಕಾನೂನುಬಾಹಿರವಾಗಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂತು. ಇದು ನ್ಯಾಯಾಂಗದ ಗೌರವಕ್ಕೆ ಧಕ್ಕೆ ತರುವ “dirty strategy” ಎಂದು ಅರ್ಜಿದಾರರು ವಾದಿಸಿದರು.

8. ನ್ಯಾಯಾಲಯದ ಕಲಾಪದ ವಿಡಿಯೋ ಹಂಚಿಕೊಂಡಿದ್ದಕ್ಕಾಗಿ ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರ AAP ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಯಿತು.

9. ಈ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ತೇಜಸ್ ಕರಿಯಾ ಅವರು ಹಿಂದೆ ಸರಿದರು (Recusal). ಅವರು ಈ ಹಿಂದೆ ಮೆಟಾ (ಫೇಸ್‌ಬುಕ್) ಸಂಸ್ಥೆಯನ್ನು ಪ್ರತಿನಿಧಿಸಿದ್ದರಿಂದ, ಹಿತಾಸಕ್ತಿ ಸಂಘರ್ಷವಾಗಬಾರದೆಂದು ಈ ನಿರ್ಧಾರ ತೆಗೆದುಕೊಂಡರು.

10. ದೆಹಲಿ ಹೈಕೋರ್ಟ್‌ನಲ್ಲಿ ತಮಗೆ ಹಿನ್ನಡೆಯಾದ ಹಿನ್ನೆಲೆಯಲ್ಲಿ, ಅರವಿಂದ್ ಕೇಜ್ರಿವಾಲ್ ಮತ್ತು ತಂಡ ಈಗ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದ ಮೂಲಕ ಆಕ್ರೋಶ ಹೊರಹಾಕಿ: ಕಾಂಗ್ರೆಸ್ ಕರೆ

ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ, ಇದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಸಾಮಾನ್ಯ...

ಮೋದಿ ಸರ್ಕಾರದಿಂದ ‘ಮತ ಕಳ್ಳತನ’ದ ನಂತರ ‘ಹಕ್ಕುಗಳ ಕಳ್ಳತನ’ ಶುರು: ರಾಹುಲ್ ಗಾಂಧಿ ಆಕ್ರೋಶ

ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...